ಎಲ್ಲಾ ಗೊಂದಲಕ್ಕೂ ತೆರೆ: ಸಿದ್ದರಾಮಯ್ಯರೇ ಐದು ವರ್ಷ ಸಿಎಂ!
ಬೆಂಗಳೂರು, ನವೆಂಬರ್ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕಿಚ್ಚು ಜೋರಾಗಿದೆ. ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ತಾರಕಕ್ಕೇರಿದೆ. ಸದ್ಯ ಪಟ್ಟದ ಕಾದಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಕೊನೆಗೂ ದೆಹಲಿಯ ಹೈಕಮಾಂಡ್ ಅಂಗಳದಲ್ಲಿ ಪವರ್ ಶೇರಿಂಗ್ ಫೈಟ್ಗೆ ಬ್ರೇಕ್ ಹಾಕಿದೆ. ಇಬ್ಬರು ಒಟ್ಟಿಗೆ ಕೂತು ಗೊಂದಲಗಳಿಗೆ ತೆರೆ ಎಳೆಯುವಂತೆ ಸೂಚನೆ ನೀಡಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇಷ್ಟು ದಿನಗಳ ವಿಭಿನ್ನ ಪೋಸ್ಟ್ ಮೂಲಕ ತೀವ್ರ ಗೊಂದಲ ಸೃಷ್ಟಿಸಿದ್ದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಒಗ್ಗಟ್ಟಿನ ಮಂತ್ರ ಶುರುವಾಗಿದೆ.

2028 ರ ವಿಧಾನಸಭಾ ದೃಷ್ಟಿಯಿಂದ ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆಂದು ಸಾರಿ ಸಾರಿ ಹೇಳಿದ ಉಭಯ ನಾಯಕರು ಇದನ್ನು ಒತ್ತಿ ಹೇಳಿದ್ದಾರೆ. ಸಿಎಂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾತುಕತೆಯನ್ನ ಹೈಕಮಾಂಡ್‌ಗೆ ತಿಳಿಸಲಿದ್ದಾರೆ. ನಮ್ಮಿಬ್ಬರ ನಡುಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೇವೆ. ಯಾವ ಶಾಸಕರು ಸರ್ಕಾರದ ವಿರುದ್ಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದು, ಪರೋಕ್ಷವಾಗಿ ಐದು ವರ್ಷವೂ ನಾನೇ ಸಿಎಂ ಎಂಬ ಸಂದೇಶವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಿಎಂ ಪಟ್ಟದಿಂದ ಕೆಳಗಿಳಿಸಿದ್ರೆ ಕೈ ಪಾಳಯದಲ್ಲಿ ಹಲವು ಗೊಂದಲಗಳು ಸೃಷ್ಟಿಯಾಗಲಿದ್ದು, ಪಕ್ಷವೂ ಇಬ್ಬಾಗ ಆಗಲಿದೆ ಎಂಬ ಲೆಕ್ಕಾಚಾರವನ್ನ ಹೈಕಮಾಂಡ್ ಹಾಕಿಕೊಂಡಿದೆ. ಅಲ್ಲದೇ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಸ್ತಿತ್ವವೇ ಇಲ್ಲದಂತಾಗಬಹುದು ಎಂಬ ಚಿಂತನೆಯನ್ನ ಹೈಕಮಾಂಡ್ ನಡೆಸಿದೆ. ಅಲ್ಲದೇ ಸಿದ್ದರಾಮಯ್ಯ ಅವರಿಗೆ ಬಹುತೇಕ ಕಾಂಗ್ರೆಸ್ ಶಾಸಕರ ಬೆಂಬಲವಿದೆ. ಇನ್ನೂ ಡಿ ಕೆ ಶಿವಕುಮಾರ್ ಅವರಿಗೆ ಕೇವಲ 20 ರಿಂದ 30 ಜನ ಶಾಸಕರ ಬೆಂಬಲ ಮಾತ್ರವಿದೆ. ಹೀಗಾಗಿ ಈ ಎಲ್ಲಾ ಲೆಕ್ಕಾಚಾರವನ್ನ ಚರ್ಚೆ ನಡೆಸಿರುವ ಹೈಕಮಾಂಡ್ ನಾಯಕರು, ಸದ್ಯಕ್ಕೆ ಅಧಿಕಾರ ಹಂಚಿಕೆಯ ಚರ್ಚೆಗೆ ಬ್ರೇಕ್ ಹಾಕಿದೆ ಎನ್ನಲಾಗಿದೆ.
ಮುಂದಿನ ಚುನಾವಣೆ ತನ್ನ ನಾಯಕತ್ವದಲ್ಲೇ ನಡೆಯುವುದಾಗಿ ಡಿ ಕೆ ಶಿವಕುಮಾರ್ ಈ ಹಿಂದೆ ಬಹಿರಂಗವಾಗೇ ಹೇಳಿರುವುದು ಕಾಂಗ್ರೆಸ್ ನಲ್ಲಿ ಹಲವು ತಲ್ಲಣಗಳಿಗೆ ಕಾರಣವಾಗಿತ್ತು. ಡಿ ಕೆ ಶಿವಕುಮಾರ್ ಬಣದ ಕೆಲ ಶಾಸಕರು ಡಿ ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಮಾತನ್ನ ಬಹಿರಂಗವಾಗಿ ಹೇಳುತ್ತಿದ್ದಂತೆ ಇತ್ತ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುರೆಯುತ್ತಾರೆ ಎಂದು ಹೇಳುವ ಮೂಲಕ ಡಿಕೆಶಿ ಬಣಕ್ಕೆ ಟಾಂಗ್ ಕೊಟ್ಟಿದ್ದರು. ಇತ್ತ ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಡಿ ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಸಿದ್ದರಾಮಯ್ಯ ಅವರು ಒಪ್ಪಿದರೂ ಸಹ ಬಹುತೇಕ ಶಾಸಕರು ತೀವ್ರ ವಿರೋಧವನ್ನ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications