ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ ಶಾಕ್
ಶಿರಾಡಿ ಘಾಟ್ ಆಗಸ್ಟ್ 03: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.
ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, "ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ" ಎಂದು ವಿವರಿಸಿದರು.
ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.
ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟಿದ್ದಾರೆ
*ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?
*ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ?
*ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.
ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications