Get Updates
Get notified of breaking news, exclusive insights, and must-see stories!

ನ. 27ರಂದು ಗೃಹ ಕಛೇರಿಯಲ್ಲಿ ಸಿದ್ದರಾಮಯ್ಯ ಜನತಾ ದರ್ಶನ

ಬೆಂಗಳೂರು, ನವೆಂಬರ್ 26; ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 'ಜನತಾ ದರ್ಶನ' ಕಾರ್ಯಕ್ರಮವನ್ನು ಬೆಂಗಳೂರಿನ ಗೃಹ ಕಛೇರಿಯಲ್ಲಿ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಟಿಪ್ಪಣಿಯೊಂದನ್ನು ಹೊರಡಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ 27/11/2023ರ ಸೋಮವಾರ ಗೃಹ ಕಛೇರಿ 'ಕೃಷ್ಣಾ'ದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ಸಚಿವಾಲಯ ಟಿಪ್ಪಣಿಯೊಂದನ್ನು ಹೊರಡಿಸಿದೆ.

Siddaramaiah Janata Darshan In Bengaluru On November 27

ಅಧಿಕಾರಿಗಳಿಗೆ ಸೂಚನೆ; ನವೆಂಬರ್ 27ರ ಸೋಮವಾರ ರಾಜ್ಯದ ವಿವಿದ ಸ್ಥಳಗಳಿಂದ ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಜಿಲ್ಲಾ/ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ಅಹವಾಲುಗಳ ಕುರಿತು ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಿದ್ದಾರೆ ಎಂದು ಟಿಪ್ಪಣಿ ಹೇಳಿದೆ.

ಈ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು/ ಜಿಲ್ಲಾ ವರಿಷ್ಠಾಧಿಕಾರಿಗಳು/ ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು ಮಾನ್ಯ ಮುಖ್ಯಮಂತ್ರಿಯವರ ಕಛೇರಿಯಿಂದ ಮಾಡುವ ಕರೆಗಳನ್ನು ಸ್ವೀಕರಿಸಿ, ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕುರಿತು ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೆಳಗ್ಗೆ 9.30 ರಿಂದ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜನರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸಲಿದ್ದಾರೆ. ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನಿಮ್ಮ ದೂರುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. 1902ಕ್ಕೆ ಕರೆಮಾಡಿ ಆನ್‌ಲೈನ್ ಮೂಲಕ ಈಗಲೇ ನೊಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಬಳಸಿ. https://ipgrs.karnataka.gov.in

ಜಿಲ್ಲೆಗಳಲ್ಲೂ ಜನತಾ ದರ್ಶನ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲೆಗಳಲ್ಲಿಯೂ 'ಜನತಾ ದರ್ಶನ' ನಡೆಸಲು ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು/ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಕಾಧಿಕಾರಿಗಳು/ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಈ ಕುರಿತು ಟಿಪ್ಪಣಿ ಮೂಲಕ ಮಾಹಿತಿ ನೀಡಲಾಗಿದೆ.

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು 'ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ಯದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ 'ಜನತಾ ದರ್ಶನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದ್ದು, ಕಾರ್ಯಕ್ರಮಗಳು ನಡೆಯುತ್ತಿವೆ.

'ಜನತಾ ದರ್ಶನ' ಕಾರ್ಯಕ್ರಮದ ಕುರಿತು ಜನರಿಗೆ 'ಜನತಾ ದರ್ಶನ' ನಡೆಯುವ ಸ್ಥಳ, ವೇಳೆ ಇತ್ಯಾದಿಗಳನ್ನು ಜಾಹೀರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳತಕ್ಕದ್ದು ಎಂದು ಸೂಚನೆ ಕೊಡಲಾಗಿದೆ.

ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು, ಬಹಳ ಜಾಗೃತಿಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ 'ಜನತಾ ದರ್ಶನ' ಕಾರ್ಯಕ್ರಮವನ್ನು ನಡೆಸಬೇಕು ಎಂದು ನಿರ್ದೇಶಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+