Get Updates
Get notified of breaking news, exclusive insights, and must-see stories!

ಫೆ.8ಕ್ಕೆ ವಿಧಾನಸೌಧ ಮುಂದೆ ಸಿದ್ದರಾಮಯ್ಯ ಜನತಾ ದರ್ಶನ

ಬೆಂಗಳೂರು, ಜನವರಿ 25: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾ ದರ್ಶನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೂ ಜನತಾ ದರ್ಶನ ನಡೆಯುತ್ತಿದೆ.

ಫೆಬ್ರುವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಲಿದ್ದಾರೆ. ಜನರ ಕುಂದು ಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಜನತಾ ದರ್ಶನ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

Siddaramaiah Janatha Darshana In Vidhana Soudha On February 8

ವ್ಯವಸ್ಥಿತವಾಗಿ ಆಯೋಜನೆ: ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಇದು ಮುಖ್ಯಮಂತ್ರಿಯವರು ನಡೆಸುತ್ತಿರುವ 2ನೇ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಜರಿದ್ದು, ವಿಶೇಷ ಆಸಕ್ತಿ ವಹಿಸಿ ಕುಂದು ಕೊರತೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸುವ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಸ್ವಚ್ಛತೆ, ಕುಡಿಯುವ ನೀರು, ಲಘು ಉಪಾಹಾರ, ಊಟದ ವ್ಯವಸ್ಥೆಗಳನ್ನು ಮಾಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.

ಕಳೆದ ಬಾರಿಯ ಜನಸ್ಪಂದನದಲ್ಲಿ ಸ್ವೀಕರಿಸಿದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವ ಬಗ್ಗೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗುತ್ತದೆ. ಕೆಡಿಪಿ ಸಭೆಯಲ್ಲಿಯೂ ಜನಸ್ಪಂದನ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗುತ್ತದೆ.

ಜನಸ್ಪಂದನಕ್ಕೆ ಆಗಮಿಸುವ ಜನರ ಅನುಕೂಲಕ್ಕಾಗಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲಾಗುತ್ತದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸಿ, ಅದಕ್ಕೆ ಅಗತ್ಯವಿರುವ ಎಲ್ಲ ಉಪಕರಣಗಳನ್ನೂ ಒದಗಿಸಲು ಹಾಗೂ ಸಿಬ್ಬಂದಿಯನ್ನೂ ನಿಯೋಜಿಸಲು ಇ-ಆಡಳಿತ ಇಲಾಖೆಗೆ ಸೂಚನೆ ನೀಡಲಾಗಿದೆ.

ದೂರುಗಳನ್ನು ಪರಿಶೀಲಿಸಿ, ನಿಗದಿತ ಕೌಂಟರ್‌ಗಳಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಲು ಪ್ರವೇಶ ದ್ವಾರದಲ್ಲಿಯೇ ಅಧಿಕಾರಿ, ಸಿಬ್ಬಂದಿಗಳ ಫೆಸಿಲಿಟೇಷನ್‌ ತಂಡವನ್ನು ನಿಯೋಜಿಸುವಂತೆಯೂ ಸೂಚನೆ ನೀಡಲಾಗಿದೆ. ಅಂದು ವಿಧಾನಸೌಧದಲ್ಲಿ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಮಾಡಲು ಹಾಗೂ ಸಂಚಾರ ನಿರ್ವಹಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಗೆ ಸೂಚಿಸಲಾಗಿದೆ.

ಜಿಲ್ಲಾ, ತಾಲೂಕು ಮಟ್ಟದಲ್ಲಿ ಜನತಾ ದರ್ಶನ; ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಸೆಪ್ಟೆಂಬರ್‌ನಲ್ಲಿ ಟಿಪ್ಪಣಿಯೊಂದನ್ನು ಹೊರಡಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದರು.

ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ' ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸಿದ್ದರು.

ಜನತಾ ದರ್ಶನದಲ್ಲಿ ಬಂದ ಅರ್ಜಿಗಳನ್ನು, ಬಹಳ ಜಾಗೃತಿಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ 'ಜನತಾ ದರ್ಶನ' ಕಾರ್ಯಕ್ರಮವನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+