ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದ ಇಂಜಿನಿಯರಿಂಗ್ ಕಾಲೇಜು ಕನಸು ನನಸು

|
Google Oneindia Kannada News

ಕೊಪ್ಪಳ, ಸೆಪ್ಟೆಂಬರ್ 21 : ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣವಾಗಲಿದೆ. ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.22ರಂದು ಶಂಕುಸ್ಥಾಪನೆ ಮಾಡಲಿದ್ದಾರೆ.

ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದ ತಾಲೂಕು ಎಂದು ಗುರುತಿಸಲಾಗಿರುವ ಯಲಬುರ್ಗಾ ತಾಲೂಕಿನಲ್ಲಿ ಸರ್ಕಾರ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡುವ ಮೂಲಕ ತಾಲೂಕಿನ ಅಭಿವೃದ್ಧಿಗೆ ಮುಂದಾಗಿದೆ.

ಕೊಪ್ಪಳ: ಸೆ.22ರಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿದ್ದರಾಮಯ್ಯ ಚಾಲನೆಕೊಪ್ಪಳ: ಸೆ.22ರಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿದ್ದರಾಮಯ್ಯ ಚಾಲನೆ

Siddaramaiah to laid foundation stone for govt engineering college at Yalaburga

ಕೊಪ್ಪಳ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇದೆ. ಜಿಲ್ಲೆಯಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಐಟಿಐ ಮತ್ತು ಪಾಲಿಟೆಕ್ನಿಕ್‍ಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದವು. ಇಂಜಿನಿಯರಿಂಗ್ ವ್ಯಾಸಂಗ ಮಾಡಲು ಬೇರೆ ಜಿಲ್ಲೆಯ ಕಡೆ ಮುಖ ಮಾಡಬೇಕಿತ್ತು.

ತೋಟಗಾರಿಕಾ ಇಲಾಖೆಯಿಂದ ಕೊಪ್ಪಳದಲ್ಲಿ ಸೆ.25ರಿಂದ ಮಧು ಮೇಳತೋಟಗಾರಿಕಾ ಇಲಾಖೆಯಿಂದ ಕೊಪ್ಪಳದಲ್ಲಿ ಸೆ.25ರಿಂದ ಮಧು ಮೇಳ

ಇದನ್ನು ಅರಿತ ಸರ್ಕಾರ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡುತ್ತಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರೆಡ್ಡಿ ಅವರೇ ಉನ್ನತ ಶಿಕ್ಷಣ ಸಚಿವರಾಗಿದ್ದು, ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಯ ಕನಸು ಶೀಘ್ರವಾಗಿ ನನಸಾಗುತ್ತಿದೆ.

ಯಲಬುರ್ಗಾ ತಾಲೂಕಿನ ತಳಕಲ್ ಬಳಿ ಕಾಲೇಜು ನಿರ್ಮಾಣವಾಗುತ್ತಿದೆ. ಕಾಲೇಜು ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, 100 ಕೋಟಿ ರೂ. ಅನುದಾನ ನೀಡಿದೆ. ಉನ್ನತ ಶಿಕ್ಷಣ ಇಲಾಖೆ 50 ಕೋಟಿ,ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 50 ಕೋಟಿ ಅನುದಾನ ದೊರೆಯಲಿದೆ.

ಕೊಪ್ಪಳದಲ್ಲಿ 200 ಗಂಟೆಗಳಲ್ಲಿ 21,129 ಶೌಚಾಲಯ ನಿರ್ಮಾಣಕೊಪ್ಪಳದಲ್ಲಿ 200 ಗಂಟೆಗಳಲ್ಲಿ 21,129 ಶೌಚಾಲಯ ನಿರ್ಮಾಣ

ಈ ಕಾಲೇಜನ್ನು ರಾಜ್ಯದಲ್ಲಿಯೇ ಮಾದರಿ ಕಾಲೇಜಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಕ್ಯಾಂಪಸ್ ಆವರಣದಲ್ಲಿಯೇ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹಾಸ್ಟೆಲ್, ಬೋಧಕ, ಬೋಧಕೇತರ ಸಿಬ್ಬಂದಿಗಳ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತದೆ.

ಕಾಲೇಜು ನಿರ್ಮಾಣ ಕಾಮಗಾರಿಯನ್ನು 24 ತಿಂಗಳಲ್ಲಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ಕಾಲೇಜು ನಿರ್ಮಾಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತಾಂತ್ರಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಸಹಾಯಕವಾಗಲಿದೆ.

ಯೋಗ ಗೊತ್ತಿಲ್ಲದಿದ್ದರೆ ಇಂಜಿನಿಯರಿಂಗ್ ಡಿಗ್ರಿ ಸಿಗಲ್ಲ!ಯೋಗ ಗೊತ್ತಿಲ್ಲದಿದ್ದರೆ ಇಂಜಿನಿಯರಿಂಗ್ ಡಿಗ್ರಿ ಸಿಗಲ್ಲ!

English summary
Karnataka Chief Minister Siddaramaiah will laid the foundation stone for government engineering college at Yalaburga taluk of Koppal district on September 22, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X