ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಸಿದ್ದರಾಮಯ್ಯ ವಾಗ್ದಾಳಿ
ಉತ್ತರಕನ್ನಡ , ಮೇ 03: ನರೇಂದ್ರ ಮೋದಿ ಒಬ್ಬ ಒಳ್ಳೆಯ ನಾಟಕಕಾರ. ಇವೆಂಟ್ ಮ್ಯಾನೇಜರ್ ಆಗಿದ್ದಾರೆ. ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ ಉತ್ತಮ ಅವಕಾಶ ಒದಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು ಹೇಳುವ ಮೋದಿಯವರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏನು ಮಾಡಿದ್ದಾರೆ ಎಂದು ಜಗಜ್ಜಾಹೀರಾಗಿದೆ. ಇದು ತಿಳಿದಿದ್ದರೂ ಕೂಡ ಹೊಂದಾಣಿಕೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟಿದ್ದೀರಲ್ಲಾ? ಇದೇನಾ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ರೀತಿ ? ಅತ್ಯಾಚಾರಿಗಳಿಗೆ ರಕ್ಷಣೆ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಇಡೀ ರಾಜ್ಯದ ಜನ ಕೇಳುತ್ತಿದ್ದಾರೆ ಎಂದರು.

ಮೋದಿ ಬರೀ ಸುಳ್ಳು ಹೇಳುತ್ತಾರೆ. ಯಾವ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲದ ಮೇಲೆ ಅವರು ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ ಎನ್ನಬೇಕಾಗುತ್ತದೆ. ಹತ್ತು ವರ್ಷಗಳ ಕಾಲ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಬಡವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಲಿಲ್ಲ. ಅವರ ಕಷ್ಟ ಸುಖ ಏನೆಂದು ಕೇಳಲಿಲ್ಲ. ಕರ್ನಾಟಕದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಡಬಲ್ ಇಂಜಿನ್ ಸರ್ಕಾರವಾಗುತ್ತದೆ ಎಂದಿದ್ದರು. ಬಿಜೆಪಿ ಸರ್ಕಾರ 3 ವರ್ಷ ಹತ್ತು ತಿಂಗಳು ಲೂಟಿ ಮಾಡಿದ್ದು ಬಿಟ್ಟರೆ ಬಡವರು, ರೈತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಏನೂ ಕೆಲಸ ಮಾಡಲಿಲ್ಲ ಎಂದರು.
ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಬದಲಾವಣೆ ತೆರೆಯಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದರು.
ಕರ್ನಾಟಕದಲ್ಲಿ ಲೂಟಿ ಹೊಡೆಯುವ ಗ್ಯಾಂಗ್ ಇದೆ ಎಂದು ನರೇಂದ್ರ ಮೋದಿ ಹೇಳುತ್ತಾರೆ . ಬಿಜೆಪಿ ಸರ್ಕಾರವನ್ನು ಗುತ್ತಿಗೆದಾರರ ಸಂಘ 40% ಸರ್ಕಾರ ಎಂದು ಆರೋಪಿಸಿದಾಗ ಮೋದಿಯವರು ಪ್ರತಿಕ್ರಿಯೆ ನೀಡಲಿಲ್ಲ. 40% ಸರ್ಕಾರ ಎಂದು ಜನ ಹೇಳುವಾಗಲೂ ಸುಮ್ಮನೆ ಸಹಿಸಿಕೊಂಡು ಇದ್ದಿರಿ. ಅದರ ಅರ್ಥ ಭ್ರಷ್ಟಾಚಾರವನ್ನು ಸಹಿಸಿಕೊಂಡಿರಿ. ಭ್ರಷ್ಟರನ್ನು ಸರ್ಕಾರಕ್ಕೆ ಸೇರ್ಪಡೆ ಗೊಳಿಸುತ್ತಿದ್ದೀರಿ ಎಂದು ವ್ಯಂಗ್ಯವಾಡಿದರು.
ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದರು. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುವುದಾಗಿ ಹೇಳಿದರು, ಯಾವುದೂ ಕಡಿಮೆ ಆಗಲಿಲ್ಲ. ರೈತರ , ಬಡವರ ಜೀವನ ಅತ್ಯಂತ ಸುಲಭ ಮಾಡುತ್ತೇನೆ ಎಂದರು. ಇಲ್ಲಿಯವರೆಗೆ ಅದನ್ನು ಮಾಡಲಿಲ್ಲ ಎಂದರು. ಜನರನ್ನು ಭ್ರಮಾಲೋಕದಲ್ಲಿ ತೇಲಾಡುವಂತೆ ಮಾಡಿ ದೇಶದಲ್ಲಿ ಯಾವ ಭರವಸೆಯನ್ನೂ ಈಡೇರಿಸಲಿಲ್ಲ. ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪ ಮಾಡಿ, ಭಾವನೆಗಳನ್ನು ಕೆರಳಿಸಿದರು. ಜನರ ಕಷ್ಟಗಳಿಗೆ ಪರಿಹಾರ ಕೊಡಲಿಲ್ಲ. ಹಾಗಾಗಿ ಬಡವರ ಬದುಕು ದುಸ್ತರವಾಯಿತು.
ರಾಜ್ಯದಲ್ಲಿ ಜನರ ಜೀವನ ಸುಧಾರಣೆ ಮಾಡುವ ಸಲುವಾಗಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಶಕ್ತಿ ಯೋಜನೆಯಡಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನ ಪ್ರಶಂಸಿದ್ದಾರೆ. ರಾಜ್ಯದ ಜನರಿಗೆ ಅಕ್ಕಿ ಪೂರೈಸಲು ಕೇಂದ್ರ ಒಪ್ಪದೇ, ರಾಜ್ಯದ ಬಡವರಿಗೆ ಅನ್ಯಾಯ ಮಾಡಿದರು. ಆದ್ದರಿಂದ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ ಬದಲು 170 ರೂ. ನೀಡುತ್ತಿದೆ. 1.60 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಿಂದ ಲಾಭವಾಗಿದೆ.
1.20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ನಿರುದ್ಯೋಗಿ ಯುವಜನತೆಗೆ ಯುವನಿಧಿ ಯೋಜನೆಯನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಿ ಮತ ಕೇಳುವ ಕೆಲಸವನ್ನು ಕಾಂಗ್ರೆಸ್ ಎಂದೂ ಮಾಡಿಲ್ಲ. ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿ ಜನರಿಗೆ ಕರೆ ನೀಡಿದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications