Get Updates
Get notified of breaking news, exclusive insights, and must-see stories!

ಸದನದಲ್ಲಿ ಮೋದಿ ಗ್ಯಾರಂಟಿ ಜಾಹೀರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್‌ 17: ನಮ್ಮ ಗ್ಯಾರಂಟಿಗಳನ್ನು ಟೀಕಿಸಿ, ನಮ್ಮ ಗ್ಯಾರಂಟಿಗಳನ್ನೇ ಕದ್ದು "ಮೋದಿ ಗ್ಯಾರಂಟಿ" ಎಂದು ಹೆಸರು ಬದಲಾಯಿಸಿ ಬಿಜೆಪಿ ಘೋಷಿಸಿದ್ದನ್ನು ವಿವರಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮೋದಿ ಗ್ಯಾರಂಟಿ" ಜಾಹಿರಾತು ಪ್ರದರ್ಶಿಸಿದರು. ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಬಿಡತ್ತೆ ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಗುಡುಗಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ ಎಂದರು.

Siddaramaiah Lashes Out At BJP for Misinformation Against Guarantee Schemes

ನಿಮ್ಮ ಟೀಕೆ, ಆಪಾದನೆಗಳು ಮಾಡಿದ ನಂತರ ಉಪಚುನಾವಣೆಗಳು ನಡೆದಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಗೆದ್ದಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದಿದ್ದೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ13 ಸಾವಿರ ಅಂತರದಿಂದ ಹಾಗೂ ಸಂಡೂರು ಕ್ಷೇತ್ರದಲ್ಲಿ 9 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ. ಮೂರೂ ಕಡೆ ಮಕಾಡೆ ಮಲಗಿದಿರಿ ನೀವು. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದರು.

ಎರಡು ಬಾರಿ ಅಧಿಕಾರ ಮಾಡಿರುವ ನೀವು ಜನರ ಆಶೀರ್ವಾದದಿಂದ ಗೆದ್ದಿದ್ದೀರೇ? ಆಪರೇಶನ್ ಕಮಲ ಮಾಡಿ 18 ಕ್ಷೇತ್ರಗಳನ್ನು ಗೆದ್ದಿರಿ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಟೀಕಿಸಿದರು. ಬಸವರಾಜ ಬೊಮ್ಮಾಯಿ ಅವರ ಮಗನ ವಿರುದ್ಧ ಗೆಲ್ಲಬೇಕಾದರೆ ಎಲ್ಲಾ ಜಾತಿ ಜನರು ಮತ ನೀಡಿದ್ದರಿಂದ ನಾವು ಗೆದ್ದಿದ್ದೇವೆ. ನಾವು ಅಪರೇಶನ್ ಕಾಂಗ್ರೆಸ್ ಮಾಡಿಲ್ಲ. ನಾವು ಗ್ಯಾರಂಟಿ ಕೊಡದೇ ಹೋಗಿದ್ದರೆ ಬಡವರು ಮತ ಹಾಕುತ್ತಿರಲಿಲ್ಲ . ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪುವ ಈ ಯೋಜನೆಗಳು ಬಡವರ ಬದುಕಿಗೆ ಭರವಸೆ ನೀಡಿವೆ.

ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ.
ಸಚಿವ ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

2-2-2025 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. ಅಲ್ಲಿರುವುದು ಬಿಜೆಪಿ ಸರ್ಕಾರ. 5-3-2025 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋದರು. ಇವರೆಲ್ಲಾ ಸುಮ್ಮನೆ ಬಂದು ಹೋಗುತ್ತಾರೆಯೇ? ಎಂದು ಮುಖ್ಯಮಂತ್ರಿಗಳು ನೇರವಾಗಿ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ. ಈ ಎರಡೂ ವರದಿಗಳು ಸರ್ಕಾರಕ್ಕೆ ಉಪಯುಕ್ತವಾಗಿದ್ದರೂ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದೀರಿ. ನಿಮಗೆ ಎಷ್ಟು ಹುಡುಕಿದರೂ ಮೊಸರಲ್ಲಿ ಕಲ್ಲು ಸಿಗುವುದಿಲ್ಲ.

ನೀವು ಮಾಡುತ್ತಿರುವುದು ಇದೊಂದು ರಾಜಕೀಯ ಪ್ರೇರಿತ ಕೆಲಸ. ಈಗಲಾದರೂ ಸಕಾರಾತ್ಮಕವಾಗಿ ಟೀಕೆ ಮಾಡಬೇಕೆಂದು ಸಿಎಂ ಮನವಿ ಮಾಡಿದರು. ತಪ್ಪುಗಳಿದ್ದರೆ ಸರ್ಕಾರದ ಖಜಾನೆಗೆ ತೊಂದರೆಯಿದ್ದಾರೆ ಸರ್ಕಾರದ ಗಮನಕ್ಕೆ ತರುವುದು ವಿರೋಧಪಕ್ಷದ ಕೆಲಸ. ಆ ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿ ವರೆಗೆ ನಾವು, ನಮ್ಮ ಸರ್ಕಾರ ಬರೋಬ್ಬರಿ 76,509 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ 76509 ಕೋಟಿ ಕೊಡಲು ಸಾಧ್ಯವಿತ್ತೆ ಎಂದು ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+