ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಗೆ ಕಾದಿದೆಯಾ ಕಂಟಕ?

By: ಮೈಸೂರು ಪ್ರತಿನಿಧಿ
Subscribe to Oneindia Kannada

ಚಾಮರಾಜನಗರ, ಡಿಸೆಂಬರ್ 14 : ವಿಧಾನಪರಿಷತ್ ಚುನಾವಣೆಯ ಬಿಸಿ ಆಡಳಿತ ಪಕ್ಷದ ಕಾಂಗ್ರೆಸ್‍ಗೆ ತಟ್ಟಿದೆ. ಶತಾಯಗತಾಯ ತವರು ಜಿಲ್ಲೆ ಮತ್ತು ಹಳೆ ಮೈಸೂರು ವ್ಯಾಪ್ತಿಯಲ್ಲಿ ಗೆದ್ದೇ ಗೆಲ್ಲಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಮಹದೇವಪ್ರಸಾದ್, ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್, ಹುಣಸೂರು ಶಾಸಕ ಮಂಜುನಾಥ್, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಸೋಮಶೇಖರ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. [ಕಾಂಗ್ರೆಸ್ಸಿಗೆ ಬಂಡಾಯದ ಬಿಸಿ, ಜೆಡಿಎಸ್ ನಿರಾಳ]

legislative council

ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಜತೆಗೆ ಚಾಮರಾಜನಗರದ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸುವ ಮೂಲಕ ಒಲವನ್ನು ಮತವಾಗಿ ಪರಿವರ್ತಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. [ಡಿಸೆಂಬರ್ 27ರ ವಿಧಾನಪರಿಷತ್ ಚುನಾವಣೆ ಬಗ್ಗೆ ತಿಳಿಯಿರಿ]

ಈಗಾಗಲೇ ಹಲವೆಡೆ ಎದ್ದಿದ್ದ ಬಂಡಾಯವನ್ನು ಶಮನಗೊಳಿಸಲಾಗಿದೆ. ಆದರೂ ಕೆಲವರಿಗೆ ಚುನಾವಣಾ ಕಣದಿಂದ ಹಿಂದೆ ಸರಿಸುವಂತೆ ಮಾಡಿದ ಮನವಿ ವಿಫಲವಾಗಿದ್ದು, ಅಂತಹ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸುವ ಸೂಚನೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. [ಬಂಡಾಯ ಅಭ್ಯರ್ಥಿ ಯತ್ನಾಳ್ ಗೆ ಬಿಜೆಪಿಯಿಂದ ಗೇಟ್ ಪಾಸ್]

siddaramaiah

ಚುನಾವಣಾ ಕಣದಲ್ಲಿರುವ ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗಾಗಿ ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟನೆ ಮಾಡುವುದು ಅನಿವಾರ್ಯ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಬೆಂಗಳೂರು ನಗರ ಕ್ಷೇತ್ರ, ಉಡುಪಿಯಲ್ಲಿ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Rebel trouble for ruling Congress party in Legislative council election scheduled on December 27, 2015. Karnataka Chief Minister Siddaramaiah launched party’s campaign for polls in Chamarajanagar. Party may expel rebel leaders.
Please Wait while comments are loading...