• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದ ಬಿಪಿಎಲ್ ಕುಟುಂಬಗಳಿಗೆ ವಿಶೇಷ ಆರ್ಥಿಕ ಸಹಾಯಕ್ಕೆ ಸಿದ್ದರಾಮಯ್ಯ ಒತ್ತಾಯ!

|
Google Oneindia Kannada News

ಬೆಂಗಳೂರು, ಜೂ. 23: ಜನರ ಜೀವ ಹಿಂಡುತ್ತಿರುವ ಕೊರೊನಾವೈರಸ್‌ ಜನರ ಜೀವನದೊಂದಿಗೂ ಆಟವಾಡುತ್ತಿದೆ. ಇಡೀ ರಾಜ್ಯಾದ್ಯಂತ ಲಾಕ್‌ಡೌನ್ ಹಾಗೂ ಕೋವಿಡ್ ಸೃಷ್ಟಿಸಿರುವ ಸಂಕಷ್ಟಗಳಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಅದರಲ್ಲೂ ಬಡವರ ಸ್ಥಿತಿ ಅಯೋಮಯವಾಗಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎದುರು ಮಹತ್ವದ ಬೇಡಿಕೆಗಳನ್ನು ಇಟ್ಟಿದ್ದಾರೆ.

ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೊನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್‌ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ. ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‌ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ.

ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೆ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲಿಕರು ಮಾತ್ರವಲ್ಲ ದೊಡ್ಡ ಹೋಟೆಲ್‌ಗಳ ಮಾಲಿಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಊಟಕ್ಕೂ ಪರದಾಟ!

ಊಟಕ್ಕೂ ಪರದಾಟ!

"ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ" ಎಂದು ವಿವರಿಸಿದ್ದಾರೆ.

ಶಾಲಾ ಶುಲ್ಕ: ಖಾಸಗಿ ಶಾಲೆಗಳ ಲಾಬಿಗೆ ಮಣಿಯಿತೇ ರಾಜ್ಯ ಬಿಜೆಪಿ ಸರ್ಕಾರ?ಶಾಲಾ ಶುಲ್ಕ: ಖಾಸಗಿ ಶಾಲೆಗಳ ಲಾಬಿಗೆ ಮಣಿಯಿತೇ ರಾಜ್ಯ ಬಿಜೆಪಿ ಸರ್ಕಾರ?

"ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡಿ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ" ಎಂದು ವಸತಿ ಗೃಹಗಳ ಮಾಲೀಕರ ಸ್ಥಿತಿಗತಿಗಳನ್ನು ಸಿದ್ದರಾಮಯ್ಯ ಅವರು ಉಲ್ಲೇಖಿಸಿದ್ದಾರೆ.

ಕಣ್ಣೀರಿನಲ್ಲಿ ಕೈಗತೊಳೆಯುತ್ತಿದ್ದಾರೆ

ಕಣ್ಣೀರಿನಲ್ಲಿ ಕೈಗತೊಳೆಯುತ್ತಿದ್ದಾರೆ

"ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್‌ಗಳು, ಡೆಕೊರೇಟರ್ ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಾವಿರಾರು ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ."

"ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೆ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನೆಪ ಮಾತ್ರಕ್ಕೆ ಹಣ ಹಂಚಿಕೆ

ನೆಪ ಮಾತ್ರಕ್ಕೆ ಹಣ ಹಂಚಿಕೆ

"ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‌ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣವನ್ನು ನೆಪಮಾತ್ರಕ್ಕೆ ಹಂಚಿಕೆ ಮಾಡಿದ್ದಾರೆ" ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯ ಮಾಡಿದ್ದಾರೆ.

ಕೊರೊನಾ ಸಂಕಷ್ಟ: ನಾನು ಹೀಗೆ ಮಾಡಲಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ಯಾಕೆ?ಕೊರೊನಾ ಸಂಕಷ್ಟ: ನಾನು ಹೀಗೆ ಮಾಡಲಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ಯಾಕೆ?

"ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂ.ಗಳ ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ 2 ಸಾವಿರ ಕೋಟಿ ರೂಪಾಯಿಗಳಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೆ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ 1500 ಕೋಟಿ ರೂಗಳು ಮಾತ್ರ. ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜ್‌ನ್ನು ಘೋಷಿಸಿ ಅಕ್ಕ ಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ" ಎಂದು ಸಲಹೆ ನೀಡಿದ್ದಾರೆ.

  ಲಂಕಾ ಸರಣಿಯಲ್ಲಿ Dravid ಇದನ್ನ ಮಾಡಿ ತೋರಿಸ್ತಾರೆ ಎಂದ Sachin | Oneindia Kannada
  ಸಾಲ ವಸೂಲಾತಿ ಮುಂದೂಡಿ!

  ಸಾಲ ವಸೂಲಾತಿ ಮುಂದೂಡಿ!

  "ಹೀಗಾಗಿ ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಎಲ್ಲ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್‌ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು" ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

  "ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು" ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

  English summary
  Leader of the Opposition Siddaramaiah has written a letter to Chief Minister B.S. Yediyurappa demanding a compensation of Rs 10,000 each to all BPL families in the state. Know more.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X