ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ: ಚರ್ಚೆಯಾಗಿದ್ದೇನು?

ಬೆಂಗಳೂರು, ಮಾರ್ಚ್‌ 18: ಬೆಂಗಳೂರಿಗರು ನೀರಿನ ಸಮಸ್ಯೆಯೊಂದಿಗೆ ಹೋರಾಟ ನಡೆಸುತ್ತ, ದುಬಾರಿ ನೀರಿನ ಟ್ಯಾಂಕರುಗಳ ಮೂಲಕ ನೀರು ತರಿಸಿಕೊಂಡು ಜೀವನ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಮಸ್ಯೆಗೆ ಪರಿಹಾರವನ್ನ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆಗೆ ಸುದೀರ್ಘವಾಗಿ ಚರ್ಚೆ ನಡೆಸಿ,ಮಾಹಿತಿ ಪಡೆದಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. KRS ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ ಎಂದು ಹೇಳಿದ್ದಾರೆ.

Siddaramaiah Meeting With Officials On Drinking Water Issue In Bengaluru

14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 MLD ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗ್ತದೆ. 313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು.

ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ KMF ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ. ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರು‌ಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ. ಅಲ್ಲದೇ ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ, ಶುದ್ದೀಕರಿಸಿದ ನೀರು ಬಳಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕೆ.ಸಿ.ವ್ಯಾಲಿ ರೀತಿ ಬೆಂಗಳೂರಿನ‌ ಕೆರೆಗಳನ್ನೂ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಬತ್ತಿ ಹೋಗಿರುವ ಪ್ರಮುಖ 14 ಕೆರೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಅಂತರ್ಜಲ ಭರ್ತಿ ಆಗಿ ಬೋರ್ ವೆಲ್ ಗಳಿಗೆ ಮರುಜೀವ ಬರುತ್ತದೆ.ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ, ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ ಎಂದು ತಿಳಿಸಿದರು.

ಭವಿಷ್ಯದಲ್ಲಿ ಎಂಥಾದ್ದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ದೂರು ಬಂದರೆ BBMP, BWSSB ನವರು ಹೊಣೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ, ಬೆಂಗಳೂರಿಗೆ 500 MLD ನೀರು ಕೊರತೆ ಇದೆ. ಈ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬೋರ್ ವೆಲ್ ಗಳ ಮೇಲೆ ಅವಲಂಬಿತ ಜನರಿಗೆ ನೀರಿನ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ. 1700 ನೀರಿನ ಟ್ಯಾಂಕರ್ ನೋಂದಣಿ ಆಗಿವೆ. ಮಾಲ್ ಗಳು ಸೇರಿ ಖಾಸಗಿಯಾಗಿ ಇರುವ ಬೋರ್ ವೆಲ್ ಗಳಿಂದ ಟ್ಯಾಂಕರ್ ತುಂಬಿಸಿ ನೀರು ಸರಬರಾಜು ಮಾಡಲಾಗುತ್ತಿದೆ. ಎಲ್ಲೂ ನೀರಿಗೆ ತೊಂದರೆ ಆಗದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ, ಸಾರ್ವಜನಿಕರು ಕುಡಿಯುವ ನೀರಿನ ದುಂದುವೆಚ್ಚ ಮಾಡಬಾರದು. ಗಾರ್ಡನ್ ಗಳಿಗೆ ಕುಡಿಯುವ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.

ಮಳೆನೀರು ಕೊಯ್ಲು, ಬಳಕೆ ನೀರಿನ ಶುದ್ದೀಕರಿಸಿ ಹೆಚ್ಚಿನ ಪ್ರಮಾಣದಲ್ಲಿ ಮರು ಬಳಸುವಂತೆ ಸೂಚಿಸಲಾಗಿದೆ. ಕುಡಿಯಲು ಮತ್ತು ಕೈಗಾರಿಕೆಗಳಿಗೆ ಒಟ್ಟು 2600 ಎಂ.ಎಲ್. ಡಿ. ನೀರು ಅಗತ್ಯವಿದೆ. ಇದರಲ್ಲಿ 1450 ಎಂ.ಎಲ್. ಡಿ. ನೀರು ಕಾವೇರಿ ನದಿಯಿಂದ ದೊರೆಯುತ್ತಿದೆ. 650 ಎಂ ಎಲ್ ಡಿ ನೀರು ಕೊಳವೆ ಬಾವಿಯಿಂದ ದೊರೆಯುತ್ತಿದ್ದು, 500 ಎಂ.ಎಲ್ ಡಿ ನೀರಿನ ಕೊರತೆ ಇದೆ ಎಂದರು.

ಇನ್ನೂ ಮುಖ್ಯವಾಗಿ ಕೊಳೆಗೆರಿಗಳು, ಎತ್ತರದ ಪ್ರದೇಶಗಳು ಹಾಗೂ ಬಿಬಿಎಂಪಿ ಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಸಮಸ್ಯೆ ಆಗದಂತೆ ಸೂಚಿಸಲಾಗಿದೆ. ನೀರಿನ ದುರುಪಯೋಗ ತಡೆಗಟ್ಟಲು ಸೂಚಿಸಲಾಗಿದ್ದು, ಈ ಬಗ್ಗೆ 143 ಟಾಸ್ಕ್ ಫೋರ್ಸ್ ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪ್ರಮಾಣ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಕೇಂದ್ರೀಯ ಸಹಾಯವಾಣಿ ಸಂಖ್ಯೆ 1916 ಹಾಗೂ ವಾಟ್ಸಾಪ್ ಮೂಲಕ ದೂರು ದಾಖಲಿಸಬಹುದು. ಈ ದೂರುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಸೂಚಿಸಲಾಗಿದೆ. ಬೆಂಗಳೂರು ನಗರದ ಪ್ರಮುಖ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸೂಚಿಸಲಾಯಿತು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+