ನಿತಿನ್ ಗಡ್ಕರಿ ಭೇಟಿಯಾದ ಸಿದ್ದರಾಮಯ್ಯ: 2 ಮಹತ್ವದ ರಸ್ತೆ ಯೋಜನೆಗೆ ಬೇಡಿಕೆ

ಬೆಂಗಳೂರು, ಏಪ್ರಿಲ್ 03: ಕಾಲು ನೋವಿನಿಂದ ಚೇತರಿಸಿಕೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ದಿನಗಳ ಬಳಿಕ ನವದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಅವರು ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿದರು. ದೆಹಲಿಯ ಕರ್ನಾಟಕದ ಭವನದ ಉದ್ಘಾಟನೆಯನ್ನು ಮಾಡಿದರು. ಬೆಂಗಳೂರು-ಪುಣೆ ಗ್ರೀನ್ ಎಕ್ಸ್‌ಪ್ರೆಸ್ ವೇ ಮತ್ತು ಬೆಂಗಳೂರು ನಗರದ ಸುರಂಗ ಮಾರ್ಗ ಯೋಜನೆಯ ಕುರಿತು ಅವರು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಕೆ ಮಾಡಿದ್ದಾರೆ.

ಸಿದ್ದರಾಮಯ್ಯ ದೆಹಲಿಯಲ್ಲಿ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ರಾಜ್ಯದಲ್ಲಿ ಬಾಕಿ ಉಳಿದಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಎಚ್. ಸಿ. ಮಹಾದೇವಪ್ಪ, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಜಯಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Siddaramaiah Meets Nitin Gadkari Requested For Several Road Project

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಜೊತೆ ಚರ್ಚಿಸಿದ ಅಂಶಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಯಾವ-ಯಾವ ಯೋಜನೆಗಳ ಬಗ್ಗೆ ಮಾತುಕತೆ ನಡೆಸಲಾಯಿತು?, ಕರ್ನಾಟಕದ ಬೇಡಿಕೆ ಏನು? ಎಂದು ವಿವರಣೆಯನ್ನು ನೀಡಿದ್ದಾರೆ.
ಯಾವ-ಯಾವ ರಸ್ತೆ ಯೋಜನೆಗಳು

* ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಪ್ರಮುಖ ಯೋಜನೆಗಳ ವಿವರಗಳನ್ನು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

* ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈ ಓವರ್ ನಿರ್ಮಾಣ.

* 30.35 ಕಿ. ಮೀ. ಉದ್ದದ ಹುಬ್ಬಳ್ಳಿ-ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ

* ರಾಷ್ಟ್ರೀಯ ಹೆದ್ದಾರಿ 369 ಇ (ಸಿಗಂದೂರು ಸೇತುವೆ)ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.

* ರಾಷ್ಟ್ರೀಯ ಹೆದ್ದಾರಿ 167 ಹಗರಿ-ಜೆಡ್ಚೆರ್ಲಾ ಸೆಕ್ಷನ್‌ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.

* ಹೊಸಪೇಟೆ-ಬಳ್ಳಾರಿ ಸೆಕ್ಷನ್‌ನ ಹಳೆಯ ರಾಷ್ಟ್ರೀಯ ಹೆದ್ದಾರಿ 63 (ಹೊಸ ರಾ.ಹೆ-67) ನ ಕಿ.ಮಿ. 340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.

* ರಾಷ್ಟ್ರೀಯ ಹೆದ್ದಾರಿ 150ಎರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್‌ನ ಕಿ.ಮೀ. 235.00 ರಿಂದ 254.800ವರೆಗೆ Two Lane with Paved Shouldersಗೆ ಅಗಲೀಕರಣ ಯೋಜನೆ.

ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ.

ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ನಿತಿನ್ ಗಡ್ಕರಿ ಅವರಿಗೆ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

10,000 ಪಿಯುಸಿ ಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಈ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

* ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ-275ರಲ್ಲಿ 9 ಗ್ರೇಡ್ ಸಪರೇಟರ್‌ಗಳ ನಿರ್ಮಾಣ.

* ರಾಷ್ಟ್ರೀಯ ಹೆದ್ದಾರಿ -75 (ಹಳೆಯ ರಾ.ಹೆ 48) ರ ಶಿರಾಡಿ ಘಾಟ್‌ನ 237+000 ರಿಂದ 263+000 ( ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್) ತರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ ಮಂಗಳೂರು ಬಂದರು (ದೇಶದ 7ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕವನ್ನು ಸುಧಾರಿಸುವುದು.

* ಪುಣೆ-ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ಅನ್ನು ಶೀಘ್ರವಾಗಿ ಮಂಜೂರು ಮಾಡುವುದು.

* ಮುಂಬರಲಿರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಇಮಂಜೂರು ಮಾಡುವುದು.

* ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್‌ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.

* ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.

* ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)

* ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ

* ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.

* ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ 2 ಎಲ್+ ಪಿಎಸ್ ಗ್ರೀನ್ ಫೀಲ್ಡ್ ಸಂಯೋಜಿತ ಬೈಪಾಸ್ ನಿರ್ಮಾಣ.

* ಕರ್ನಾಟಕ ರಾಜ್ಯದಲ್ಲಿ ಎಸ್‌ಪಿಯುಆರ್ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು.

* ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+