ಹಾಲಿನ ಪ್ರೋತ್ಸಾಹ ಧನ 7 ರೂ. ಹೆಚ್ಚಳ : ಸಿದ್ದರಾಮಯ್ಯ ಘೋಷಣೆ
ಬೆಳಗಾವಿ: ಕರ್ನಾಟಕದ ರೈತರಿಗೆ ಕಾಂಗ್ರೆಸ್ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದು, ಇಷ್ಟು ದಿನ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ರೈತರ ಹಿತ ದೃಷ್ಟಿಯಿಂದ ರೈತರಿಗೆ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹ ಧನವನ್ನು 7 ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸ್ದು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.

ನಂಜುಂಡಪ್ಪ ವರದಿ ಜಾರಿಯಾದ ನಂತರದಲ್ಲಿ ಡೈರಿ ಚಟುವಟಿಕೆಗಳು ಹೆಚ್ಚಾಗಿದ್ದು, ಕೆಎಂಎಫ್ ನಲ್ಲಿ ಪ್ರತಿ ದಿನ 1 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಬೀದರ್, ಗುಲ್ಬರ್ಗ ಕಲಬುರ್ಗಿ ಮತ್ತು ಯಾದಗಿರಿ ಹಾಲು ಒಕ್ಕೂಟದಲ್ಲಿ ಪ್ರತಿದಿನಕ್ಕೆ 67 ಸಾವಿರ ಲೀಟರ್ ಉತ್ಪಾದನೆ ಆಗುತ್ತಿದೆ. ಈ ಎರಡರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಹಳೆ ಮೈಸೂರಿನಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ ಉತ್ತರ ಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ.
ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ ಒಮ್ಮೆ ಮೂರು ರೂ ಮತ್ತೊಮ್ಮೆ 400 ಗಳ ಸಹಾಯಧನವನ್ನು ಹೆಚ್ಚಳ ಮಾಡಿದೆ. ಈ ಮೊತ್ತ ಸಂಪೂರ್ಣವಾಗಿ ರೈತರಿಗೆ ಹೋಗುತ್ತಿದೆ. ಬಿಜೆಪಿ ಸರ್ಕಾರ ಬಿಟ್ಟು ಹೋಗಿದ್ದ 600 ಕೋಟಿ ಗಳನ್ನು ನಮ್ಮ ಸರ್ಕಾರ ತೀರಿಸಿದೆ. ಮೇವಿನ ವೆಚ್ಚ ಹೆಚ್ಚಳವಾಗಿದೆ ಎಂಬ ಕಾರಣಕ್ಕೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 7 ರೂಗಳ ಪ್ರೋತ್ಸಾಹ ಧನವನ್ನು ಈ ಅವಧಿಯಲ್ಲಿಯೇ ಕೊಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಬೆಳಗಾವಿ ಅಧಿವೇಶನದಲ್ಲಿ ಪ್ರೊ.ಆರ್.ಗೋವಿಂದರಾವ್ ಅವರು ನವೆಂಬರ್ ಕೊನೆಯವರೆಗೂ ಅಧಿಕಾರವಿತ್ತು. ಅವರು ಇನ್ನೂ ಎರಡು ತಿಂಗಳು ಅಗತ್ಯವಿದೆ ಎಂದು ತಿಳಿಸಿದ ಮೇರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಬಹುತೇಕ ಜನವರಿಯಲ್ಲಿ ವರದಿಯನ್ನು ಕೊಡುತ್ತಾರೆ. ಉತ್ತರ ಕರ್ನಾಟಕದ ಅಸಮತೋಲನ ನಿವಾರಣೆಗೆ ವರದಿಯನ್ನು ಜಾರಿ ಮಾಡುತ್ತೇವೆ. ಕಿತ್ತೂರು ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ 500 ಕೋಟಿ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರೊ.ಗೋವಿಂದರಾವ್ ವರದಿ ಬಂದ ನಂತರ ಮಾಡಲಾಗುವುದು ಎಂದು ತಿಳಿಸಲಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿಯೇ ಪ್ರೊ.ಗೋವಿಂದರಾವ್ ಸಮಿತಿ ರಚಿಸಲಾಗಿದೆ. ರಾಷ್ಟ್ರೀಯ 14 ನೇ ಹಣಕಾಸು ಸಮಿತಿಯ ಸದಸ್ಯರಾಗಿದ್ದರು. ಬಹುತೇಕ ಜನವರಿ 2026ನಲ್ಲಿ ವರದಿ ಬರಲಿದೆ ಎಂದರು. ಗೋವಿಂದರಾವ್ ಅವರು ಉತ್ತರ ಕರ್ನಾಟಕದ ಆರ್ಥಿಕ ತಜ್ಞರು. ವರದಿ ಪರಿಶೀಲಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು ಎಂದರು.
ಹೈದರಾಬಾದ್ ಕರ್ನಾಟಕವನ್ನು 1991ರಲ್ಲಿ ಹೆಚ್. ಕೆ.ಡಿ. ಬಿ ಪ್ರಾರಂಭವಾಯಿತು. ನಂತರ 6/11/2013 ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಸೇರ್ಪಡೆಯಾಯಿತು. . ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಶೇ. 80% ರಷ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೀಸಲಾತಿ ನೀಡಬೇಕೆಂದು ಹಾಗೂ ರಾಜ್ಯದ ಇತರ ಭಾಗಗಳಲ್ಲಿನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 8% ಮಾಡಬೇಕೆಂದು ಮಾಡಿದ್ದ ಶಿಫಾರಸ್ಸನ್ನು ಯಥಾವತ್ತು ಜಾರಿಗೆ ತರಲಾಯಿತು ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications