Siddaramaiah: ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ: ವಿರೋಧಿಗಳಿಗೆ ಠಕ್ಕರ್ ಕೊಟ್ಟ ಸಿದ್ದರಾಮಯ್ಯ
ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ವಿರೋಧಿಗಳಿಗೆ ಠಕ್ಕರ್ ಕೊಟ್ಟಿದ್ದಾರೆ.

ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.
ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ , ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.
ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ವಿವರಗಳನ್ನು ಕೇಳಲಾಗಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು , ಕಾರ್ಖಾನೆ ಮಾಲಿಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದರು.
2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು. ಇನ್ನೂ ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ದರೋಡೆ ಕಳುವಿನ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications