ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ, ಮೂವರು ಡಿಸಿಎಂ: ಸಮುದಾಯವಾರು ಹಂಚಿಕೆ- ಇಲ್ಲಿದೆ ಸಿದ್ದ ಸೂತ್ರ
ಬೆಂಗಳೂರು, ಮೇ 13: ಕರ್ನಾಟಕದಲ್ಲಿ ಕಾಂಗ್ರೆಸ್ ( Karnataka Congress ) ಅಭೂತಪೂರ್ವ ಗೆಲುವು ಸಾಧಿಸಿದೆ. ಕಾಂಗ್ರೆಸ್ 135ಕ್ಕೂ ಅಧಿಕ ಸ್ಥಾನಗಳು ಬಂದಿವೆ. ಬಿಜೆಪಿ ಕೇವಲ 65 ಕ್ಷೇತ್ರಗಳಲ್ಲಿ ಜಯಗಳಿಸಲು ಸಫಲವಾಗಿದೆ. ಜೆಡಿಎಸ್ 19 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ. ಈ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನಲ್ಲಿ ಮುಖ್ಯವಾಗಿ ಇಬ್ಬರು ನಾಯಕರು ಮುಖ್ಯಮಂತ್ರಿ ಖುರ್ಚಿಗಾಗಿ ಯತ್ನ ನಡೆಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಸಿದ್ದರಾಮಯ್ಯನವರು ಕರ್ನಾಟಕದ ಮಾಸ್ ಲೀಡರ್. ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಭಾಗ್ಯಗಳನ್ನು ಜನರು ಇಂದಿಗೂ ನೆನೆಯುತ್ತಾರೆ. ಅಹಿಂದ ವರ್ಗದ ಮತಗಳು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿವೆ. ಆರ್ಥಿಕವಾಗಿ ಹಿಂದುಳಿದವರ ಮತಗಳೂ ಸಹ ಸಿದ್ದರಾಮಯ್ಯನವರ ಪರ ಇವೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯವರು ಕರ್ನಾಟಕದ ಜನಪ್ರಿಯ ನಾಯಕರಾಗಿದ್ದಾರೆ.
ಇನ್ನು ಡಿಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಲು ವ್ಯಾಪಕ ಕೆಲಸವನ್ನು ಮಾಡಿದ್ದಾರೆ. ಬಿಜೆಪಿ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮನೆಮನೆಗೆ ತಲುಪಿಸಲು ಡಿಕೆಶಿ ತಂತ್ರಗಳನ್ನು ರೂಪಿಸಿದರು. ತಮ್ಮದೇ ಆದ ಕಾರ್ಯಪಡೆಯನ್ನು ರಚಿಸಿಕೊಂಡು ಚುನಾವಣೆಗೆ ಸಿದ್ದತೆ ಮಾಡಿಕೊಂಡಿದ್ದರು. ದಕ್ಷಿಣ ಕರ್ನಾಟಕದ ಒಕ್ಕಲಿಗ ಪ್ರದೇಶಗಳಲ್ಲಿ ಸ್ವತಃ ತಾವೇ ಅಲೆದಾಡಿ ಪ್ರಚಾರ ಮಾಡಿದರು. ಅವರ ಯತ್ನಗಳು ಈಗ ಫಲ ಕೊಟ್ಟಿರುವುದು ಎದ್ದು ಕಾಣುತ್ತಿವೆ.

ಇನ್ನು ಮುಖ್ಯಮಂತ್ರಿ ಸ್ಥಾನದ ಅಭಿಲಾಸೆಯನ್ನು ಕಾಂಗ್ರೆಸ್ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ. ಮಾಜಿ ಡಿಸಿಎಂ ಹಾಗೂ ದಲಿತ ಸಮುದಾಯದ ನಾಯಕ ಜಿ ಪರಮೇಶ್ವರ್ ಹಾಗೂ ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಅವರು ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ದಲಿತ ಸಿಎಂಗಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಹೆಸರು ಹೇಳಿಬಂದಿದೆ.
ಸಿದ್ದಗೊಂಡಿತು 'ಸಿದ್ದ' ಸೂತ್ರ
ಈ ಎಲ್ಲ ಬೆಳವಣಿಗಗಳ ನಡುವೆ ಕಾಂಗ್ರೆಸ್‌ನ ಒಳಮನೆಯಲ್ಲಿ ಸೂತ್ರವೊಂದು ಸಿದ್ದಗೊಂಡಿದೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಮತ್ತೆ ಮುಖ್ಯಮಂತ್ರಿ ಮಾಡುವ ಲೆಕ್ಕಾಚಾರವನ್ನು ಕಾಂಗ್ರೆಸ್ ಹಾಕಿಕೊಂಡಿದೆ. ಸಿದ್ದರಾಮಯ್ಯನವರ ಜನಪ್ರಿಯತೆಯೇ ಇದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯನವರನ್ನು ಮತ್ತೆ ಮುಖ್ಯಮಂತ್ರಿ ಮಾಡಿದರೆ, ಕಾಂಗ್ರೆಸ್‌ಗೆ ಇನ್ನಷ್ಟು ಬಲ ಬರಲಿದೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ನಾಯಕರು ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ಮನಸ್ಸು ಮಾಡಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.
ಮೂವರು ಡಿಸಿಎಂ
ಮುಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಡಿಸಿಎಂಗಳು ಇರಲಿದ್ದಾರೆ ಎಂದು ಮೂಲಗಳು ಹೇಳಿವೆ. ಅದರಲ್ಲೂ ಸಮುದಾಯವಾರು ನಾಯಕರನ್ನು ಡಿಸಿಎಂ ಮಾಡಲು ಕಾಂಗ್ರೆಸ್ ಸಿದ್ದತೆ ನಡೆಸಿಕೊಂಡಿದೆ. ಲಿಂಗಾಯತ, ಒಕ್ಕಲಿಗ ಹಾಗೂ ಮುಸ್ಲಿಂರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಕರ್ನಾಟಕದ ದೊಡ್ಡ ಸಮುದಾಯಗಳಾಗಿವೆ. ಇನ್ನು ಅಲ್ಪಸಂಖ್ಯಾತ ಮುಸ್ಲಿಮರು ಕಾಂಗ್ರೆಸ್ ಪರ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅವರು ಬಹುದೊಡ್ಡ ಜನಸಂಖ್ಯೆಯನ್ನು ಒಳಗೊಳ್ಳುತ್ತಾರೆ. ಹೀಗಾಗಿ ಕಾಂಗ್ರೆಸ್ ಈ ಸೂತ್ರವನ್ನು ಬಳಸಿಕೊಳ್ಳಲು ಮುಂದಾಗಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications