Siddaramaiah:ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ: ವೇದಿಕೆಯಲ್ಲೇ ಎರಡು ಬಾರಿ ಘೋಷಣೆ ಮೊಳಗಿಸಿದ ಪ್ರದೀಪ್ ಈಶ್ವರ್

Siddaramaiah : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸ್ಪಷ್ಟಪಡಿಸಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಮಾವೇಶದಲ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಅವರನ್ನು ಹಾಡಿಹೊಗಳಿದರು. ನನ್ನ ಎದೆಯಲ್ಲಿ ರಾಮನೂ ಇದ್ದಾನೆ, ಸಿದ್ದರಾಮಯ್ಯರೂ ಇದ್ದಾರೆ ಎಂದು ಹೇಳಿದ ಅವರು, ಸಿದ್ದರಾಮಯ್ಯ ಕೇವಲ ಕುರುಬ ಸಮುದಾಯದ ನಾಯಕರಲ್ಲ, ಅವರು ಅಹಿಂದ ನಾಯಕ ಎಂದು ಬಣ್ಣಿಸಿದರು.

Siddaramaiah Next CM Chikkaballapur Congress MLA Pradeep Eshwar Raises Slogan Twice at Karnataka Convention

Siddaramaiah:ದಾಖಲೆ ಬಜೆಟ್‌ಗಳನ್ನು ಮಂಡಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರನ್ನು ಕೆಲವರು ಕುರಿ ಕಾಯುವ ವ್ಯಕ್ತಿ ಎಂದು ಟೀಕಿಸುತ್ತಿದ್ದರು. ಆದರೆ ಅದೇ ಸಿದ್ದರಾಮಯ್ಯ ರಾಜ್ಯದಲ್ಲಿ ದಾಖಲೆ ಬಜೆಟ್‌ಗಳನ್ನು ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಪ್ರದೀಪ್ ಈಶ್ವರ್ ಹೇಳಿದರು.

ಇದಾದ ಬಳಿಕ ವೇದಿಕೆಯಲ್ಲೇ "ಮಾಜಿ ಮುಖ್ಯಮಂತ್ರಿ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪ್ರದೀಪ್ ಈಶ್ವರ್ ಘೋಷಣೆ ಕೂಗಿದರು. ವಿಶೇಷವೆಂದರೆ ಒಂದಲ್ಲ, ಎರಡು ಬಾರಿ ಇದೇ ಘೋಷಣೆಯನ್ನು ಮೊಳಗಿಸಿದರು. ಈ ವೇಳೆ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್‌ನೊಳಗಿನ ಮುಖ್ಯಮಂತ್ರಿ ವಿಚಾರದ ಇದೀಗ ಮತ್ತೆ ಚರ್ಚೆಗೆ ಕಾರಣವಾಗಿದೆ.

Siddaramaiah:ಚುನಾವಣಾ ರಾಜಕೀಯದಿಂದ ನಿವೃತ್ತಿ

ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವುದಿಲ್ಲ, ಆದರೆ ಚುನಾವಣಾ ರಾಜಕೀಯದಿಂದ ಮಾತ್ರ ಹಿಂದೆ ಸರಿಯುವುದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ನಾನು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಆದರೆ ಚುನಾವಣಾ ರಾಜಕಾರಣದಿಂದ ಮಾತ್ರ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದರು.

ಚುನಾವಣಾ ವ್ಯವಸ್ಥೆ ಅತ್ಯಂತ ದುಬಾರಿಯಾಗಿದ್ದು, ಅದರಲ್ಲಿ ಸುಧಾರಣೆ ಅಗತ್ಯವಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ವಯಸ್ಸಾಗಿದೆ ಎಂಬ ಕಾರಣಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿಲ್ಲ. ಬದಲಿಗೆ ಚುನಾವಣಾ ವ್ಯವಸ್ಥೆ ಹದಗೆಟ್ಟಿರುವುದರಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ಅವರು ವಿವರಿಸಿದರು.

ಜಾತಿ ವ್ಯವಸ್ಥೆ ತೊಲಗುವವರೆಗೆ ನಿಮ್ಮ ಜೊತೆ ಇರುತ್ತೇನೆ

ಸಮಾಜದಲ್ಲಿರುವ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗುವವರೆಗೆ ಹಿಂದುಳಿದ ವರ್ಗಗಳ ಪರವಾಗಿ ಹೋರಾಟ ಮುಂದುವರಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ಜಾತಿ ವ್ಯವಸ್ಥೆ ತೊಲಗುವವರೆಗೆ ನಿಮ್ಮ ಜೊತೆ ಇರುತ್ತೇನೆ, ಹೋರಾಟ ಮಾಡುತ್ತೇನೆ. ನೀವ್ಯಾರೂ ಆತಂಕಪಡಬೇಕಿಲ್ಲ ಎಂದು ಅವರು ಸಮಾವೇಶದಲ್ಲಿ ನೆರೆದಿದ್ದವರಿಗೆ ಭರವಸೆ ನೀಡಿದರು.

ತಮ್ಮನ್ನು ಹಿಂದುಳಿದ ಜಾತಿಗೆ ಸೇರಿದ ವ್ಯಕ್ತಿ ಎಂದು ಹೇಳಿಕೊಳ್ಳಲು ಯಾವುದೇ ಮುಜುಗರವಿಲ್ಲ ಎಂದ ಸಿದ್ದರಾಮಯ್ಯ, ದೇಶದಲ್ಲಿ ಹಿಂದೆ ಶ್ರೇಣಿಕೃತ ವ್ಯವಸ್ಥೆ ಇತ್ತು ಎಂದು ಹೇಳಿದರು. ತಾವು ಶೂದ್ರ ಜಾತಿಗೆ ಸೇರಿದವರು ಎಂದು ಹೇಳಿದ ಅವರು, ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳು ಶೂದ್ರ ವರ್ಗಕ್ಕೆ ಸೇರಿದವರು ಎಂದು ಅಭಿಪ್ರಾಯಪಟ್ಟರು.

ಹಿಂದೆ ಬ್ರಾಹ್ಮಣರು, ಕ್ಷತ್ರಿಯರು ಮತ್ತು ವೈಶ್ಯರಿಗೆ ಮಾತ್ರ ಅಕ್ಷರ ಕಲಿಯುವ ಅವಕಾಶವಿತ್ತು. ಇದರಿಂದ ಶೂದ್ರ ವರ್ಗದ ಜನರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಸಮಾವೇಶದಲ್ಲಿ ತಮ್ಮನ್ನು ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಿರುವುದು ಆಹ್ವಾನ ಪತ್ರಿಕೆ ನೋಡಿದ ಬಳಿಕವೇ ಗೊತ್ತಾಯಿತು. ಆದರೆ ಇಂತಹ ಅಭಿನಂದನಾ ಕಾರ್ಯಕ್ರಮದ ಅಗತ್ಯವಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+