Siddaramaiah: ಕೋಲಾರದಿಂದ ಸಿದ್ದು ಸ್ಪರ್ಧೆ ಇಲ್ಲ, ಗೋವಿಂದಗೌಡರಿಗೆ ಡಿಕೆಶಿ ಮಣೆ. ಬಾದಾಮಿಯಲ್ಲಾದ ರಾಜಕೀಯ ಬದಲಾವಣೆ?
ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇದಾದ ಬಳಿಕ ಕೋಲಾರದ ಅಭ್ಯರ್ಥಿ ಯಾರು? ಬಾದಾಮಿಯಲ್ಲಿನ ಬೆಳವಣಿಗೆ ಬಗ್ಗೆ ವಿಶ್ಲೇಷಣೆ ಇಲ್ಲಿದೆ.
ಬೆಂಗಳೂರು, ಮಾರ್ಚ್ 19: ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯ ಕಳೆದ ವಿಧಾನಸಭೆ ಚುನಾವಣೆ ಬಾದಾಮಿ ಯಲ್ಲಿ ಬಹುಮತಗಳಿಂದ ಗೆದ್ದಿದ್ದರು ಸಹ ಈ ಭಾರಿ ಕೋಲಾರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಅವರ ಹಿಂದಿನ ಎರಡು ಕ್ಷೇತ್ರದಲ್ಲಿನ ಅಭಿಮಾನಿಗಳ ಆಸೆ ಫಲಿಸುವ ಸಾಧ್ಯತೆ ಇದೆ.
ಹೌದು, ಕೆಲವು ವಾರಗಳ ಹಿಂದಷ್ಟೇ ತಾವು 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಸಲ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆ ಬಗ್ಗೆ ಸಾಕಷ್ಟು ಪರ ವಿರೋಧ ಟೀಕೆ ಟಿಪ್ಪಣಿಗಳು ಕೇಳಿ ಬಂದಿದ್ದವು. ಸಿದ್ದರಾಮಯ್ಯನವರ ಈ ಕೋಲಾರ ಸ್ಪರ್ಧೆ ನಿರ್ಧಾರ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಇದೀಗ ಕೋಲಾರ ಕ್ಷೇತ್ರದಿಂದ ತಾವು ಸ್ಫರ್ಧಿಸುವುದು ಬೇಡ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ. ಇದರ ಬೆನ್ನಲ್ಲೆ ಕೋಲಾರದಲ್ಲಿ ಬೇರೊಬ್ಬ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಸಿದ್ದರಾಮಯ್ಯನವರ ಈ ನಿರ್ಧಾರ ಹೊರ ಬೀಳುತ್ತಿದ್ದಂತೆ ಇತ್ತ ಸ್ವ ಕ್ಷೇತ್ರ 'ವರುಣದಲ್ಲಿ ರಾಜಕೀಯ ಚಟುವಟಿಕೆಗಳ ಗರಿಗೆದರಿದಂತೆ ಕಾಣುತ್ತಿವೆ. ಬಾದಾಮಿ ಕ್ಷೇತ್ರದಲ್ಲಿಯು ಸಿದ್ದರಾಮಯ್ಯನವರು ಸ್ಪರ್ಧಿಸಬೇಕೆಂಬುದು ಅವರ ಅಭಿಮಾನಿಗಳ ಆಸೆಯೂ ಆಗಿದೆ.
ನಡೆಸಿದ ಆಂತರಿಕ ಸಮೀಕ್ಷೆಗಳಲ್ಲೂ ಕೋಲಾರದಲ್ಲಿ ಗೆಲುವು ಕಷ್ಟ ಎನ್ನಲಾಗಿದೆ. ಕೋಲಾರಕ್ಕಿಂತ ವರುಣಾ ಕ್ಷೇತ್ರವೇ ಸೇಫ್ ಎಂದು ತಿಳಿದು ಬಂದಿವೆ. ಹೀಗಾಗಿ ತಾವು ವರುಣಾದಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಅದರ ಬೆನ್ನಲ್ಲೆ ಕೋಲಾರ, ವರುಣ ಮತ್ತು ಬಾದಾಮಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಚುನಾವಣೆ ದೂರವಿರುವಾಗಲೂ ಕೋಲಾರದಿಂದ ಸ್ಪರ್ಧೆ ಎಂದ ಘೋಷಿಸಿದ್ದ ಸಿದ್ದರಾಮಯ್ಯನವರಿಗೆ ಚುನಾವಣೆ ಹತ್ತಿರುವ ಬರುತ್ತಿದ್ದಂತೆ ಆಗಿರುವ ಈ ಬದಲಾವಣೆಗಳಿಂದ ಎಲ್ಲಿಂದ ಸ್ಪರ್ಧಿಸಬೇಕು ಎಂಬುದು ತೋಚದಂತಾಗಿದೆ. ಇತ್ತ ಬಾದಾಮಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಆಸೆ ಮತ್ತೆ ಮೊಳಕೆಯೊಡದಿದೆ.
ಕೋಲಾರದಿಂದ ಗೋವಿಂದಗೌಡ ಸ್ಪಧೆ ಸಾಧ್ಯತೆ
ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಇಲ್ಲ ಎಂಬುದು ಬಹುತೇಕ ಖಚಿತಗೊಳ್ಳುತ್ತಿದ್ದಂತೆ ಕೋಲಾರದಿಂದ ಬೇರೊಬ್ಬ ಪ್ರಭಾವಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಣೆ ಹಾಕಿದ್ದಾರೆ.

ಡಿಸಿಸಿ ಬ್ಯಾಂಕ್ ಮೂಲಕ ಸ್ವ ಸಹಾಯ ಹಾಗೂ ಸ್ತ್ರೀ ಶಕ್ತಿಗಳಿಗೆ ಸಾಲ ಒದಗಿಸುವ 'ಬ್ಯಾಲಹಳ್ಳಿ ಗೋವಿಂದಗೌಡ' ಅವರು ಈ ಭಾಗದಲ್ಲಿ ಜನಮನ್ನಣೆ ಗಳಿಸಿದ್ದಾರೆ. ಅವರು ಸಹ ಒಕ್ಕಲಿಗ ಸಮುದಾಯ ಎಂದು ತಿಳಿದು ಬಂದಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕೋಲಾರದಿಂದ ಚುನಾವಣೆ ಎದುರಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಗೋವಿಂದಗೌಡರು ಕೋಲಾರ ಹಾಗೂ ಶಿಡ್ಲಘಟ್ಟ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು.
ಆದರೆ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ ವಿಚಾರ ಘೋಷಣೆಯಾಗುತ್ತಿದ್ದಂತೆ ಮೌನವಾಗಿದ್ದರು. ರಾಹುಲ್ ಗಾಂಧಿ ಸಲಹೆಯನ್ನು ಸಿದ್ದರಾಮಯ್ಯನವರು ಸ್ವೀಕರಿಸುತ್ತಿದ್ದಂತೆ ಚುನಾವಣಾ ಅಖಾಡಕ್ಕೆ ಇಳಿಯಲು ಗೋವಿಂದಗೌಡ ಸಜ್ಜಾಗಿದ್ದಾರೆ. ಆದರೆ ಈ ಬಗ್ಗೆ ಯಾವುದು ಅಧಿಕೃತಗೊಂಡಿಲ್ಲ.
ನಾನು ಕೋಲಾರದ ಆಕಾಂಕ್ಷೆ ಅಷ್ಟೇ
ಈ ಸಂಬಂಧ ಪ್ರತಿಕ್ರಿಯಸಿದ ಗೋವಿಂದಗೌಡರು, ಕೆಪಿಸಿಸಿ ಅಧ್ಯಕ್ಷರು ಎರಡು ದಿನಕ್ಕೊಮ್ಮೆ ನಮ್ಮೊಂದಿಗೆ ರಾಜಕೀಯವಾಗಿ ಚರ್ಚಿಸುತ್ತಲೇ ಇರುತ್ತಾರೆ. ಕಾರಣ ಅವರ ಉದ್ಧೇಶ ಪಕ್ಷ ಗೆಲ್ಲಿಸುವುದು ಅಷ್ಟೇ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಇನ್ನು ಹಿಂದೆ ಸರಿದಿಲ್ಲ. ಹೈಕಮಾಂಡ್ ಇನ್ನು ಸ್ಪಷ್ಟವಾಗಿ ಎಲ್ಲೂ ಹೇಳಿಲ್ಲ. ನಾನು ಒಬ್ಬ ಅಕಾಂಕ್ಷಿಯಾಗಿದ್ದಾನೆ. ಆದ್ರೆ, ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ರೂಲ್ಡ್ ಔಟ್ ಆಗಿಲ್ಲ. ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತ ನಮ್ಮಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಬಾದಾಮಿ ಕ್ಷೇತ್ರದ ಅಭಿಮಾನಿಗಳ ಆಸೆ ಇದು
2018ರಂತೆ ಈ ಭಾರಿಯು ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪಧಿಸಬೇಕು ಎಂಬುದು ಅವರ ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರ ಆಸೆಯಾಗುತ್ತು. ಈ ಸಂಬಂಧ ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೂ ಸುಮಾರು 250ಕ್ಕೂ ಹೆಚ್ಚು ವಾಹನಗಳ ಮೂಲಕ ಆಗಮಿಸಿದ್ದರು ಅಭಿಮಾನಿಗಳು ಸ್ಪರ್ಧೆ ಬಗ್ಗೆ ಒತ್ತಾಯಿಸಿದ್ದರು. ಬಾದಾಮಿಯಿಂದ ಸುಮಾರು 250ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದರು.
ಸಿದ್ದರಾಮಯ್ಯ ಅವರು ಇದೇ ತಿಂಗಳ ಮಾರ್ಚ್ 24 ರಂದು ಬಾದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅಡಿಗಲ್ಲು ಹಾಕಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದಾಮಿ ಎಪಿಎಂಸಿ ಆವರಣದಲ್ಲಿ ಬೃಹತ್ ಕಾರ್ಯಕ್ರಮದ ಸಿದ್ಧತೆಗಳು ನಡೆದಿವೆ. ಈ ವೇಳೆಯು ಅವರ ಅಭಿಮಾನಿಗಳು ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಡ ತರಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications