ಎಂಪಿ ಕ್ಷೇತ್ರ ಮರುವಿಂಗಡನೆಗೆ ವಿರೋಧ, ಮಹಿಳಾ ಮೀಸಲಾತಿಗಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಇದೀಗ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸ್ಪಷ್ಟಪಡಿಸಿದರು.

ಜಿಲ್ಲೆಯ ಇಂದು ರಾಣೇಬೆನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು.

Siddaramaiah

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಬಿಜೆಪಿ ಯಾವತ್ತು ಆಗ್ರಹಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

ಕ್ಷೇತ್ರ ಮರುವಿಂಗಡನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ

ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡನೆ ಮಾಡಲು ಹೊರಟಿಸಿದೆ. ಇದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ ಶೇ.50ರಷ್ಟು ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ನಾವು ಮಹಿಳೆಯರಿಗೆ ಮೀಸಲಾತಿ ನೀಡುವ ಪರ ಎಂದು ಪುನರುಚ್ಚರಿಸಿದರು.

ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. ಶೇ.50 ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ಆಕ್ಷೇಪವಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರಿಂದ ರಾಜಕೀಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಯಾವತ್ತಿಗೂ ವಿರೋಧಿಸಿಲ್ಲ. 450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ಮಾತ್ರ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ ಎಂದು ತುಮ್ಮ ನಿಲುವು ತಿಳಿಸಿದರು.

ವಿನಯ್ ಕುಲಕರ್ಣಿ ವಿಚಾರಕ್ಕೆ ಸಂಬಂಧಿಸಿಂತೆ ಜನಪ್ರತಿನಿಧಿಗಳು ಜೈಲು ಸೇರುತ್ತಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದಷ್ಟೆ ಉತ್ತರಿಸಿದರು.

ಮಟ್ಕಾ ದಂಧೆಗೆ ಕಡಿವಾಣ

ರಾಣೆಬೆನ್ನೂರು ಸುತ್ತ ಮುತ್ತ ಮಟ್ಕಾ ದಂಧೆ ವ್ಯಾಪಕವಾಗಿದೆ ಪ್ರಶ್ನೆಗೆ ಅವರು, ಈ ಬಗ್ಗೆ ಸ್ಥಳೀಯ ಶಾಸಕರು ಕ್ರಮ ಕೈಗೊಂಡಿದ್ದಾರೆ. ಸದ್ಯದ ಸನ್ನಿವೇಶದಲ್ಲಿ ಮಟ್ಕಾ ದಂಧೆ ನಿಯಂತ್ರಣದಲ್ಲಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+