ಸಿದ್ದರಾಮಯ್ಯ ಸಚಿವಾಲಯದ ಇಬ್ಬರು ಚುನಾವಣಾ ಕಣಕ್ಕೆ?
ಬೆಂಗಳೂರು, ನವೆಂಬರ್ 30 : ಮುಖ್ಯಮಂತ್ರಿಗಳ ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸಿಂಧೆ ಭೀಮಸೇನರಾವ್, ಆಪ್ತ ಕಾರ್ಯದರ್ಶಿ ಹೀರಾ ನಾಯ್ಕ್ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಬೀದರ್ ಮತ್ತು ದಾವಣಗೆರೆ ಜಿಲ್ಲೆಗಳಿಂದ ಇಬ್ಬರು ಅಧಿಕಾರಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ.

ಸಿಂಧೆ ಭೀಮಸೇನರಾವ್ ಅವರು ಬೀದರ್ ಜಿಲ್ಲೆಯ ಔರಾದ ಕ್ಷೇತ್ರದಿಂದ, ಹೀರಾ ನಾಯ್ಕ್ ಅವರು ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾಯಕೊಂಡ ಕ್ಷೇತ್ರದ ಶಾಸಕ ಶಿವಮೂರ್ತಿ ನಾಯ್ಕ್ ವಿರುದ್ಧ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರುದ್ಧ ಮನಿಸಿಕೊಂಡಿದ್ದಾರೆ. ಹೀರಾ ನಾಯ್ಕ್ ಅವರು ಸ್ಪರ್ಧಿಸಿದರೆ ಉತ್ತಮ ಎಂದು ಅವರು ಸಿದ್ದರಾಮಯ್ಯ ಬಳಿ ಹೇಳಿದ್ದಾರೆ.












Click it and Unblock the Notifications