• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎರಡು ವರ್ಷದ ಹಿಂದೆ ಸಿದ್ದರಾಮಯ್ಯ ಆಡಿದ ಮಾತು ಇಂದು ಬದಲಾಯಿತೇ?

|
   ಕಾಂಗ್ರೆಸ್ ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ಸಿದ್ದರಾಮಯ್ಯ | Oneindia Kannada

   ಬೆಂಗಳೂರು, ಸೆಪ್ಟೆಂಬರ್ 4: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ವ್ಯಾಪಕ ಚರ್ಚೆಯಾಗುತ್ತಿದೆ.

   ಡಿಕೆ ಶಿವಕುಮಾರ್ ಅವರ ಬಂಧನ ಅಧಿಕಾರ ದುರುಪಯೋಗದ ಕೃತ್ಯ. ರಾಜಕೀಯ ವಿರೋಧಿಗಳನ್ನು ಎದುರಿಸಲು ಸಾಧ್ಯವಾಗದೆ ಈ ರೀತಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಆದರೆ, ಅವರು ಎರಡು ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಅನ್ನು ಹುಡುಕಿ ತೆಗೆದಿರುವ ಅವರ ವಿರೋಧಿಗಳು, ಎರಡೂ ಹೇಳಿಕೆಗಳಲ್ಲಿನ ವೈರುಧ್ಯಗಳನ್ನು ತೋರಿಸಿ ಟೀಕಿಸುತ್ತಿದ್ದಾರೆ.

   ಕೈ ನಾಯಕರನ್ನು ಒಬ್ಬೊಬ್ಬರನ್ನಾಗಿ ಮುಗಿಸುವ ಕೆಲಸ ನಡೆಯುತ್ತಿದೆ: ಸಿದ್ದರಾಮಯ್ಯ

   2017ರಲ್ಲಿ ಈಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರನ್ನು ಸಿಲುಕಿಸಲು ಪ್ರಯತ್ನಿಸಿದ್ದರು ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದಿದ್ದವು.

   ಅಕ್ರಮ ಡಿನೋಟಿಫೈ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಅವರು ಎಸಿಬಿ ಸಂಸ್ಥೆ ಮತ್ತು ತಮ್ಮ ಆಪ್ತ ಅಧಿಕಾರಿಗಳನ್ನು ಬಳಸಿಕೊಂಡು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

   ಅಧಿಕಾರ ದುರುಪಯೋಗದ ಕೃತ್ಯ

   ಅಧಿಕಾರ ದುರುಪಯೋಗದ ಕೃತ್ಯ

   ಸಹೋದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಸಿದ್ದರಾಮಯ್ಯ ಅವರು ಬುಧವಾರ ರಾತ್ರಿ ಟ್ವೀಟ್ ಮಾಡಿದ್ದರು.

   ತನಿಖೆ ಎದುರಿಸಲಾಗದವರು ಹೇಳುವುದಿದು

   ತನಿಖೆ ಎದುರಿಸಲಾಗದವರು ಹೇಳುವುದಿದು

   ಇದಕ್ಕೆ ಟ್ವಿಟ್ಟರ್‌ನಲ್ಲಿ ಸ್ಪಷ್ಟೀಕರಣ ನೀಡಿದ್ದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸೇಡಿನ ರಾಜಕಾರಣ ಮಾಡುತ್ತಿದ್ದೇನೆ ಎನ್ನುವ ವಿಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಭ್ರಷ್ಟಾಚಾರಗಳನ್ನು ಮಾಡಿ ಜೈಲಿಗೆ ಹೋದವರು ತನಿಖೆಗಳನ್ನು ಎದುರಿಸಲಾಗದೆ ಹೇಳುವ ಮಾತಿದು' ಎಂದು 2017ರ ಆಗಸ್ಟ್ 18ರಂದು ಟ್ವೀಟ್ ಮಾಡಿದ್ದರು.

   ಡಿಕೆಶಿ ಬೆಂಬಲಿಗನ ಕೆನ್ನೆಗೆ ಬಾರಿಸಿದ ಸಿದ್ದರಾಮಯ್ಯ

   ನಿಮ್ಮ ಹೇಳಿಕೆ ಅನ್ವಯವಾಗುತ್ತದೆಯಲ್ಲವೇ?

   ನಿಮ್ಮ ಹೇಳಿಕೆ ಅನ್ವಯವಾಗುತ್ತದೆಯಲ್ಲವೇ?

   ಈ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಹಂಚಿಕೊಳ್ಳುತ್ತಿರುವ ಕಾಂಗ್ರೆಸ್ ವಿರೋಧಿಗಳು ಮತ್ತು ಬಿಜೆಪಿ ಅನುಯಾಯಿಗಳು ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿದ್ದಾರೆ. ತಾವು ಸೇಡಿನ ರಾಜಕಾರಣ ಮಾಡುವುದಿಲ್ಲ. ತನಿಖೆ ಎದುರಿಸಲು ಸಾಧ್ಯವಾಗದೆ ಇರುವವರು ಹೀಗೆ ಆರೋಪಿಸುತ್ತಿದ್ದಾರೆ ಎಂದು ಎರಡು ವರ್ಷದ ಹಿಂದೆ ಹೇಳಿದ್ದೀರಿ. ಹಾಗಾದರೆ, ಈಗಲೂ ಅದೇ ಅನ್ವಯವಾಗುತ್ತದೆಯಲ್ಲವೇ? ತನಿಖೆ ಎದುರಿಸಲಾಗದೆ ನೀವು ಸುಮ್ಮನೆ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

   ಯಡಿಯೂರಪ್ಪ ವಿರುದ್ಧ ಅಧಿಕಾರ ದುರ್ಬಳಕೆ

   ಯಡಿಯೂರಪ್ಪ ವಿರುದ್ಧ ಅಧಿಕಾರ ದುರ್ಬಳಕೆ

   ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯಲು ರಾಜ್ಯ ಸರ್ಕಾರವು ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಆಗ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪ ವಿರುದ್ಧ ಎಸಿಬಿಯು ಅಕ್ರಮ ಡಿನೋಟಿಫೈ ಸಂಬಂಧ ಎಫ್‌ಐಆರ್ ದಾಖಲಿಸಿತ್ತು. ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸುಳ್ಳು ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.

   ಡಿ.ಕೆ. ಶಿವಕುಮಾರ್ ಬಂಧನ : ಸಿದ್ದರಾಮಯ್ಯ ಹೇಳಿದ್ದೇನು?

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   BJP followers trolling former CM Siddaramaiah digging his old tweet on revenge politics, after he condemned Congress leader DK Shivakumar's arrest by ED on corruption charges.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more