Breaking: ಪತ್ರಕರ್ತ ಜುಬೇರ್ ಬಂಧನದ ವಿರುದ್ಧ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು, ಜೂನ್ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆ ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೇರ್ ಅನ್ನು ಬಂಧಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
"ಆಲ್ಟ್ ನ್ಯೂಸ್ ಸ್ಥಾಪಕರಲ್ಲೊಬ್ಬರಾದ ಪತ್ರಕರ್ತ ಮುಹಮ್ಮದ್ ಜುಬೇರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹತಾಶ ಪ್ರಯತ್ನವಾಗಿದೆ," ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
"ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಹೇರಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಹೋರಾಡಲು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಟ್ಟಾಗಬೇಕಾಗಿದೆ," ಎಂದು ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಆಲ್ಟ್ ನ್ಯೂಸ್ ಸ್ಥಾಪಕರಲ್ಲೊಬ್ಬರಾದ ಪತ್ರಕರ್ತ ಮುಹಮ್ಮದ್ ಜುಬೇರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹತಾಶ ಪ್ರಯತ್ನ.
— Siddaramaiah (@siddaramaiah) June 28, 2022
ಅಘೋಷಿತ ತುರ್ತುಪರಿಸ್ಥಿತಿ ಹೇರಲು ಹೊರಟಿರುವ @narendramodi ಸರ್ಕಾರದ ವಿರುದ್ಧ ಹೋರಾಡಲು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಟ್ಟಾಗಬೇಕಾಗಿದೆ.#IStandWithZubair
ಸೋಮವಾರ ಮೊಹಮ್ಮದ್ ಜುಬೇರ್ ಬಂಧನ:
ಧಾರ್ಮಿಕ ವಿಷಯದಲ್ಲಿ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇರೆಗೆ ಸತ್ಯ ತಪಾಸಣೆ ವೆಬ್‌ಸೈಟ್ ಆಲ್ಟ್‌ನ್ಯೂಸ್ ಪತ್ರಕರ್ತನನ್ನು ಬಂಧಿಸಲಾಗಿತ್ತು. ಜುಬೇರ್ ಅನ್ನು ಈ ಪ್ರಕರಣದಲ್ಲಿ ಬಂಧಿಸಿದ್ದು, ಬೇರೆ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ ಪ್ರತೀಕ್ ಸಿನ್ಹಾ ದೂಷಿಸಿದ್ದರು.

ಮಂಗಳವಾರ ಮ್ಯಾಜಿಸ್ಟ್ರೇಟ್ ಎದುರು ಹಾಜರು:
ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೈರ್ ಅನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಪೊಲೀಸರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು.











Click it and Unblock the Notifications