ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಪತ್ರಕರ್ತ ಜುಬೇರ್ ಬಂಧನದ ವಿರುದ್ಧ ಸಿದ್ದರಾಮಯ್ಯ ಟ್ವೀಟ್

|
Google Oneindia Kannada News

ಬೆಂಗಳೂರು, ಜೂನ್ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆ ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೇರ್ ಅನ್ನು ಬಂಧಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

"ಆಲ್ಟ್ ನ್ಯೂಸ್ ಸ್ಥಾಪಕರಲ್ಲೊಬ್ಬರಾದ ಪತ್ರಕರ್ತ ಮುಹಮ್ಮದ್ ಜುಬೇರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹತಾಶ ಪ್ರಯತ್ನವಾಗಿದೆ," ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಜುಬೈರ್ ಬಂಧನ: ಬಿಜೆಪಿ ಸೇಡಿನ ರಾಜಕಾರಣ ಎಂದು ಆಕ್ರೋಶಪತ್ರಕರ್ತ ಜುಬೈರ್ ಬಂಧನ: ಬಿಜೆಪಿ ಸೇಡಿನ ರಾಜಕಾರಣ ಎಂದು ಆಕ್ರೋಶ

"ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಹೇರಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಹೋರಾಡಲು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಟ್ಟಾಗಬೇಕಾಗಿದೆ," ಎಂದು ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಸೋಮವಾರ ಮೊಹಮ್ಮದ್ ಜುಬೇರ್ ಬಂಧನ:

ಧಾರ್ಮಿಕ ವಿಷಯದಲ್ಲಿ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇರೆಗೆ ಸತ್ಯ ತಪಾಸಣೆ ವೆಬ್‌ಸೈಟ್ ಆಲ್ಟ್‌ನ್ಯೂಸ್ ಪತ್ರಕರ್ತನನ್ನು ಬಂಧಿಸಲಾಗಿತ್ತು. ಜುಬೇರ್ ಅನ್ನು ಈ ಪ್ರಕರಣದಲ್ಲಿ ಬಂಧಿಸಿದ್ದು, ಬೇರೆ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ ಪ್ರತೀಕ್ ಸಿನ್ಹಾ ದೂಷಿಸಿದ್ದರು.

Siddaramaiah Opposed Journalist Mohammed Zubair Arrest

ಮಂಗಳವಾರ ಮ್ಯಾಜಿಸ್ಟ್ರೇಟ್ ಎದುರು ಹಾಜರು:

ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೈರ್ ಅನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಪೊಲೀಸರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು.

English summary
Mohammed Zubair Arrest: Siddaramaiah Calls to come together to fight the Central govt that is going to impose an unannounced emergency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X