ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ 31: ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯ ಬಳಿಕ ಹಲವು ಟೆಂಡರ್ ಪ್ರಕ್ರಿಯೆಗಳನ್ನ ತಡೆಹಿಡಿಯಲಾಗಿತ್ತು. ಅಲ್ಲದೇ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು.

Chief Minister Siddaramaiah

ಇನ್ನೂ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸುವ ಬಗ್ಗೆ ಇಲಾಖೆಯು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಂದುವರೆಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದಾರೆ.

ನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ವಕೀಲರ ಸಂಘ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ‌ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಬಿ.ವೀರಪ್ಪ ಅವರು ಮುಖ್ಯ ನ್ಯಾಯಮೂರ್ತಿ ಆಗುವಾಗಲೂ ನಾನು ಮುಖ್ಯಮಂತ್ರಿ ಆಗಿದ್ದೆ. ಈಗ ಇವರ ನಿವೃತ್ತಿ‌ ಸಂದರ್ಭದಲ್ಲೂ ನಾನು ಮುಖ್ಯಮಂತ್ರಿ ಆಗಿರುವುದು ಸುಸಂದರ್ಭ.

Chief Minister Siddaramaiah

ನಮಗೆ ಉನ್ನತ ಸ್ಥಾನ ಸಿಕ್ಕಾಗ ಪ್ರಾಮಾಣಿಕವಾಗಿ ಜನಸೇವೆ ಮಾಡಿದರೆ ಆ ಸ್ಥಾನದ ಘನತೆ ಹೆಚ್ಚುತ್ತದೆ. ಸಮಾಜದ ಅರಿವಿದ್ದವರು, ಬದುಕನ್ನು ಅರ್ಥ ಮಾಡಿಕೊಂಡವರು, ಜನರ ಸಂಕಷ್ಟಗಳನ್ನು ಅನುಭವಿಸಿದ್ದವರು, ಆ ಬಗ್ಗೆ ಸಹಾನುಭೂತಿ ಹೊಂದಿದ್ದವರು ಮಾತ್ರ ಸಮಾಜಮುಖಿಯಾಗಿದ್ದು ಉನ್ನತ ಸ್ಥಾನದ ಘನತೆ ಹೆಚ್ಚಿಸಬಲ್ಲರು.

ಬಿ.ವೀರಪ್ಪ ಅವರು ದಕ್ಷತೆ, ಪ್ರಾಮಾಣಿಕತೆ ಜತೆಗೆ ವಕೀಲ ಸಮೂಹದ ಪ್ರೀತಿಯನ್ನೂ ಗಳಿಸಿದ್ದರು ಎನ್ನುವುದಕ್ಕೆ ಇಲ್ಲಿ ಸೇರಿರುವ ಅಪಾರ ವಕೀಲ ಸಮೂಹವೇ ಸಾಕ್ಷಿ. ದುರ್ಬಲ ವರ್ಗದವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಕೆಳ ಹಂತದಲ್ಲೇ ದುರ್ಬಲ ವರ್ಗಗಳಿಗೆ ನ್ಯಾಯ ಸಿಗುವಂತಾಗಬೇಕು. ಬಿ.ವೀರಪ್ಪ ಅವರು ಈ ದೃಷ್ಟಿಯಲ್ಲಿ ಮೌಲ್ಯಯುತವಾದ ತೀರ್ಪುಗಳನ್ನು ನೀಡಿದ್ದಾರೆ. ಇವು ಕಿರಿಯ ವಕೀಲರಿಗೆ ಮಾದರಿ ಆಗಿವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+