ಜಾರ್ಜ್ ಫರ್ನಾಂಡಿಸ್‌ಗೆ ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ

ನವದೆಹಲಿ, ಜನವರಿ 30 : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಜಾರ್ಜ್ ಫರ್ನಾಂಡಿಸ್ ಅಂತ್ಯಕ್ರಿಯೆ ಗುರುವಾರ ದೆಹಲಿಯಲ್ಲಿ ನಡೆಯಲಿದೆ.

ಬುಧವಾರ ಸಿದ್ದರಾಮಯ್ಯ ಅವರು ದೆಹಲಿಯ ಜಾರ್ಜ್ ಫರ್ನಾಂಡಿಸ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸಚಿವ ಜಮೀರ್ ಅಹಮದ್ ಖಾನ್ ಈ ಸಂದರ್ಭದಲ್ಲಿ ಜೊತೆಗಿದ್ದರು.

Siddaramaiah paid last tribute to George Fernandes

ಜನವರಿ 29ರ ಮಂಗಳವಾರ ಬೆಳಗ್ಗೆ ಜಾರ್ಜ್ ಫರ್ನಾಂಡಿಸ್ ಅವರು ನಿಧನ ಹೊಂದಿದ್ದರು. ಪಾರ್ಥಿವ ಶರೀರವನ್ನು ದೆಹಲಿಯ ನಿವಾಸದಲ್ಲಿ ಇಡಲಾಗಿದ್ದು, ಅಮೆರಿಕದಿಂದ ಪುತ್ರ ಬಂದ ಬಳಿಕ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ.

ಜೂನ್ 3, 1930ರಲ್ಲಿ ಕರ್ನಾಟಕದ ಮಂಗಳೂರಿನಲ್ಲಿ ಜನಿಸಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆ, ಅಲ್ಜೀಮರ್ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಹಲವು ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದರು.

Siddaramaiah paid last tribute to George Fernandes

ರಾಮಮನೋಹರ ಲೋಹಿಯಾ, ಜಯ ಪ್ರಕಾಶ್ ನಾರಾಯಣ್ ಅವರಿಂದ ಪ್ರಭಾವಿತರಾಗಿದ್ದ ಜಾರ್ಜ್ ಫರ್ನಾಂಡಿಸ್ ಅವರು ಬಹುಕಾಲವನ್ನು ಹೋರಾಟದ ಹಾದಿಯಲ್ಲಿಯೇ ಕಳೆದಿದ್ದರು. ರಕ್ಷಣಾ, ರೈಲ್ವೆ ಸಚಿವರಾಗಿ ಕೆಲಸ ಮಾಡಿದರೂ ಸರಳ ಜೀವನ ಶೈಲಿ ಅಳವಡಿಸಿಕೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+