ವಾಟಾಳ್ ನಾಗರಾಜ್ ಅವರನ್ನು ಹಾಡಿ ಹೊಗಳಿದ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 02: ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ,ಜಲಗಳ ಸಂರಕ್ಷಣೆಗೆ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ ಎಂದು ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಡಿ ಹೊಗಳಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ ಎಂದು ಶುಭ ಕೋರಿದ ಸಿದ್ದರಾಮಯ್ಯ ಅವರು, ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ , ವೀರೇಂದ್ರ ಪಾಟೀಲ್, ದೇವರಾಜ ಅರಸು , ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ.

ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷೆಯನ್ನು ಕೇಳುತ್ತಾ ಬಂದಿದ್ದೇನೆ ಎಂದು ಸ್ಮರಿಸಿದರು. ವಾಟಾಳ್ ನಾಗರಾಜ್ ಅವರನ್ನು 'ನಾಯಕರು' ಎಂದು ತಾನು ಸಂಭೋದಿಸುತ್ತಿದ್ದು, ಜನ ಅವರನ್ನು ನಾಯಕರಾಗಿ ಕಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ. 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.
ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು 'ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ' ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು. ಕನ್ನಡ ನಾಡಿನ ಏಕೀಕರಣಕ್ಕೆ, ಏಳಿಗೆಗೆ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತನವಿರಬೇಕೇ ಹೊರತು ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು. ಬೇರೆ ಭಾಷೆ ಕಲಿತರೂ, ಕನ್ನಡ ತಾಯಿಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸಧ್ಯದಲ್ಲಿಯೇ ಸ್ಥಾಪಿಸಲಾಗುವುದು ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications