ಅತ್ತೆ ಮನೆಗೆ ಬಂದಂತೆ ಬರ್ತೀರಾ? ಮಾಹಿತಿಗಾಗಿ ನಿಮ್ಮ ಮನೆಗೆ ಬರ್ಲಾ ನಾನು: ಅರಣ್ಯಾಧಿಕಾರಿಗೆ ಚಳಿ ಬಿಡಿಸಿದ ಸಿದ್ದರಾಮಯ್ಯ
ಮೈಸೂರು, ನವೆಂಬರ್ 10: ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯದ ಪ್ರಮಾಣ ಎಷ್ಟಿದೆ? ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ ಎನ್ನುವ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಸಿಎಂ ಪ್ರಶ್ನಿಸಿದರು. ಅಧಿಕಾರಿ ಸರಿಯಾದ ಅಂಕಿ ಅಂಶ ನೀಡದೆ, ಮಾಹಿತಿ ನೀಡಲು ತಡಬಡಾಯಿಸಿದ ಅಧಿಕಾರಿ ಬಗ್ಗೆ ಸಿಎಂ ಗರಂ ಆದರು.
ಪಶು ಸಂಗೋಪನಾ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರಿಯಾದ ಮಾಹಿತಿ ತರದೆ ಅತ್ತೆ ಮನೆಗೆ ಬಂದಂತೆ ಕೈ ಬೀಸಿಕೊಂಡು ಬರ್ತೀರಾ ? 25 ವರ್ಷದಿಂದ ಕೆಲಸ ಮಾಡಿ ರೈತರ ಜಮೀನಿನಲ್ಲಿ ಎಷ್ಟು ಗಿಡ ನೆಟ್ಟಿದ್ದೀರಿ ? ಎಷ್ಟು ಎಕರೆ ಗಿಡ ಬೆಳೆಸಿದ್ದೀರಿ ಎನ್ನುವ ಮಾಹಿತಿ ಇಲ್ಲದಿದ್ದರೆ ನಿಮ್ಮ ಕಾರ್ಯಕ್ಷಮತೆ ಇಷ್ಟೆನಾ ಎಂದು ಗರಂ ಆಗಿ ಮಾಹಿತಿಗಾಗಿ ನಾನು ನಿಮ್ಮ ಮನೆಗೆ ಬರಬೇಕಾ ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ರಾಸುಗಳಿಗೆ ಕಾಲುಬಾಯಿ ರೋಗ ಬರದಂತೆ ತಡೆಯಲು ಹಾಕಲಾದ ಲಸಿಕೆ ಪ್ರಮಾಣ ಎಷ್ಟಿದೆ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು. ಶೇ೯೬.೫೫ ರಷ್ಟು ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕುರಿ ಮೇಕೆಗಳಲ್ಲಿ ಕರುಳುಬೇನೆ ರೋಗದ ವಿರುದ್ಧ ಶೇ ೧೦೧.೬೯ ರಷ್ಟು ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜಾನವಾರುಗಳಲ್ಲಿ ಕಂದು ರೋಗದ ವಿರುದ್ಧ ಶೇ೯೩.೩೩ ರಷ್ಟು ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದರ‍್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು. ನೀಲಗಿರಿ ನಿಷೇದ ಆದ ಮೇಲೂ ಮತ್ತೆ ನೀಲಗಿರಿ ಪ್ಲಾಂಟೇಷನ್ ಕಾಣಿಸುತ್ತಿರುವುದರ ಬಗ್ಗೆ ಶಾಸಕರಾದ ತನ್ವೀರ್ ಸೇಠ್ ಅವರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಅರಣ್ಯಾಧಿಕಾರಿಗಳು ಹೊಸದಾಗಿ ನೀಲಗಿರಿ ಪ್ಲಾಂಟೇಷನ್ ಗೆ ಅವಕಾಶ ನೀಡಿಲ್ಲ. ಇರುವ ಬೆಳೆ ಕಟಾವು ಆದ ಬಳಿಕ ಅಲ್ಲಿ ಮತ್ತೆ ಬೆಳೆಯಲು ಅವಕಾಶವಿಲ್ಲ ಎಂದು ಉತ್ತರಿಸಿದರು.
ಹಾಲಿನ ಉತ್ಪಾದನೆ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರ ಅಂಕಿ ಅಂಶಗಳನ್ನು ಮುಂದಿಟ್ಟ ಮುಖ್ಯಮಂತ್ರಿಗಳು ಉತ್ಪಾದನೆ ಹೆಚ್ಚಾದ ಹಾಗೆ ಮಾರುಕಟ್ಟೆ ವಿಸ್ತರಿಸಲು ಸಿದ್ಧತೆ ಮಾಡಿಕೊಳ್ಳಿ ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು. ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7000 ಅರ್ಜಿಗಳಲ್ಲಿ 5900 ಅರ್ಜಿಗಳು ತಿರಸ್ಕರಿಸಲ್ಪಟ್ಟಿರುವುದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು.
ಇವು 2019-20 ರಿಂದ ತಿರಸ್ಕರಿಲ್ಪಟ್ಟ ಅರ್ಜಿಗಳು. ತಿರಸ್ಕರಿಸುವಾಗ ಸ್ಪಷ್ಟವಾದ, ನೈಜವಾದ ಕಾರಣ ನೀಡದಿದ್ದರೆ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಅವರು ತಿಳಿಸಿದರು. ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎನ್ನುವ ಸೂಚನೆ ನೀಡಿದರು.












Click it and Unblock the Notifications