ಮೋದಿಯವರೇ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ? : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಏಪ್ರಿಲ್ 21: ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ? ನೀವೇ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ರಾಮನಗರದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಸುರೇಶ್‌ ಅವರ ಪರವಾಗಿ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Siddaramaiah Questioned Why Permission Is Not Being Given To The Mekedatu Project

ಬೆಲೆ ಏರಿಕೆ ಭಾರತೀಯರ ಶತ್ರು. ನಾನು ಪ್ರಧಾನಿಯಾದರೆ ಬೆಲೆ ಏರಿಕೆ ತಡೆಯುವುದಾಗಿ ಇಡಿ ಭಾರತೀಯರನ್ನು ಮೋದಿ ನಂಬಿಸಿದ್ದರು. ಆದರೆ ಇದೇ ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಸೇರಿ ಎಲ್ಲದರ ಬೆಲೆಯನ್ನೂ ಗಗನಕ್ಕೆ ಏರಿಸಿದರು ಎಂದು ಬೆಲೆ ಏರಿಕೆಯ ಪಟ್ಟಿ ನೀಡಿದರು.

ಮೋದಿಯವರ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಮಧ್ಯಮ ವರ್ಗದ ಜನ ಮತ್ತು ದುಡಿಯುವ ವರ್ಗಗಳು ಹಾಗೂ ಬಡ ಜನರ ಬದುಕಿಗೆ ಸ್ಪಂದಿಸುವ ಉದ್ದೇಶದಿಂದ ನಾನು ಐದು ಗ್ಯಾರಂಟಿಗಳನ್ನು ರೂಪಿಸಿ ಐದನ್ನೂ ಜಾರಿ ಮಾಡಿದ್ದೇವೆ. ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ‌. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ ಎಂದರು.

ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿ.ಕೆ.ಸುರೇಶ್ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ: ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+