‘ಮರ್ ಜಾ ಮೋದಿ’: ಅನುಕಂಪ ಗಳಿಸಲು ಪ್ರಧಾನಿ ನಾಟಕ- ಸಿದ್ದರಾಮಯ್ಯ ಹೇಳಿದ್ದೇನು? ವರದಿ, ವಿವರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ತಿಂಗಳಷ್ಟೇ ಬಾಕಿ ಇವೆ. ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರೀಯ ಬಿಜೆಪಿ ನಾಯಕರು ರಾಜ್ಯಕ್ಕೆ ಆಗಮಿಸುತ್ತಲೇ ಇದ್ದಾರೆ. ಮೂರು ದಿನಗಳ ಹಿಂದೆ ಪ್ರಧಾನಿ ಮೋದಿ ಬೆಳಗಾವಿಯಲ್ಲಿ ಮಾಡಿದ ಭಾಷಣಕ್ಕೆ ವಿರೋಧ ಪಕ್ಷದ ನಾಯಕ ಮತ್ತೊಮ್ಮೆ ಟಾಂಗ್‌

ಬೆಂಗಳೂರು, ಮಾರ್ಚ್‌ 03: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ತಿಂಗಳಷ್ಟೇ ಬಾಕಿ ಇವೆ. ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರೀಯ ಬಿಜೆಪಿ ನಾಯಕರು ರಾಜ್ಯಕ್ಕೆ ಆಗಮಿಸುತ್ತಲೇ ಇದ್ದಾರೆ. ಮೂರು ದಿನಗಳ ಹಿಂದೆ ಪ್ರಧಾನಿ ಮೋದಿ ಬೆಳಗಾವಿಯಲ್ಲಿ ಮಾಡಿದ ಭಾಷಣಕ್ಕೆ ವಿರೋಧ ಪಕ್ಷದ ನಾಯಕ ಮತ್ತೊಮ್ಮೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಚಾರವಾಗಿ ಅವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದಾರೆ. ಅವರ ಫೋಸ್ಟ್‌ ಈ ಕೆಳಗಿನಂತಿದೆ.

'ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಾಧನೆಗಳ ಆಧಾರದಲ್ಲಿ ಮತ ಯಾಚಿಸಲಾಗದೆ ಪ್ರಧಾನಿ ಮೋದಿಯವರು 'ಮರ್ ಜಾ ಮೋದಿ' ಎಂದು ಕಾಂಗ್ರೆಸ್‌ನವರು ಘೋಷಣೆ ಕೂಗುತ್ತಿದ್ದಾರೆ ಎಂದು ಅನುಕಂಪ ಗಳಿಸಲು ನಾಟಕ ಮಾಡುತ್ತಿರುವುದು ದುರದೃಷ್ಟಕರ.

Siddaramaiah questions PM Modi for visiting Karnataka only for political gains

ಮರ್ ಜಾ ಮೋದಿ ಎಂದು ಯಾರು, ಎಲ್ಲಿ ಕೂಗಿದ್ದರು ಎನ್ನುವುದನ್ನು ಮೋದಿಯವರು ಬಹಿರಂಗ ಪಡಿಸಬೇಕು. ಇಂಟಲಿಜೆನ್ಸ್, ಪೊಲೀಸ್, ತನಿಖಾ ಸಂಸ್ಥೆಗಳು ಎಲ್ಲವೂ ಕೈಯಲ್ಲಿರುವಾಗ ಸಾಯಲು ಹೇಳಿದವರನ್ನು ಎಳೆದು ತಂದು ಜೈಲಿಗೆ ಹಾಕಲು ಏನು ಅಡ್ಡಿ ಇದೆ?

ಈ ದೇಶದಲ್ಲಿ ಒಬ್ಬ ಪ್ರಧಾನಿಗೆ ರಕ್ಷಣೆ ಇಲ್ಲ ಎಂದಾದರೆ ಇನ್ನು ಈ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ನೀಡುತ್ತಾರೆ? ಇನ್ನು ಯಾಕೆ ಹಾಗೆ ಕೂಗಿದರವರ ಮೇಲೆ ಕ್ರಮ ತೆಗೆದುಕೊಂಡಿಲ್ಲ? ಇವೆಲ್ಲ ಅನುಕಂಪ ಗಳಿಸಲು ಮಾಡುತ್ತಿರುವ ಗಿಮಿಕ್ ಗಳಷ್ಟೆ. ಜನರು ಮೂರ್ಖರಲ್ಲ, ಅವರಿಗೆ ಈ ನಾಟಕ ಅರ್ಥವಾಗುತ್ತದೆ.

ಟಿಪ್ಪುವಿನಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಹತ್ಯೆಗೆ ಪ್ರಚೋದಿಸಿದ್ದ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ಪ್ರಧಾನಿ ಮೋದಿಯವರು ತಲೆಗೆ ಕುಟ್ಟಿ ಬುದ್ದಿ ಹೇಳಬಹುದು ಎಂದು ಅಂದ್ಕೊಂಡಿದ್ದೆ. ಆದರೆ ಅವರು ತನ್ನನ್ನು ಮರ್ ಜಾ ಎಂದು ಹೇಳುತ್ತಿದ್ದಾರೆ ಎಂದು ಅನುಕಂಪಗಿಟ್ಟಿಸಿಕೊಳ್ಳಲು ಹೊರಟಿದ್ದಾರೆ.

Siddaramaiah questions PM Modi for visiting Karnataka only for political gains

ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಅವಮಾನಿಸುತ್ತಿದೆ ಎಂದು ಪ್ರಧಾನಿ ಮೋದಿಯವರು ಕಣ್ಣೀರು ಹಾಕುತ್ತಿದ್ದಾರೆ. ಇವರು ಕಡೆಗಣಿಸಿದ ನಾಯಕರು ಒಬ್ಬರು, ಇಬ್ಬರೇ?

ಗುಜರಾತ್ ಗಲಭೆ ನಿಯಂತ್ರಿಸಲಾಗದ ನರೇಂದ್ರಮೋದಿಯವರನ್ನು ಕಿತ್ತುಹಾಕಲು ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ನಿರ್ಧರಿಸಿದ್ದರು. ಆಗ ಇವರನ್ನು ರಕ್ಷಿಸಿದ್ದು ಲಾಲ್ ಕೃಷ್ಣ ಅಡ್ವಾಣಿ. ಅಂತಹ ಹಿರಿಯನನ್ನೇ ಮೂಲೆಗೆ ತಳ್ಳಿರುವ ಮೋದಿಯವರಿಗೆ ಇತರರಿಗೆ ಉಪದೇಶ ಮಾಡುವ ಯಾವ ನೈತಿಕತೆ ಇದೆ?

ಬಿಜೆಪಿಯಲ್ಲಿಯೇ ನರೇಂದ್ರ ಮೋದಿಯವರು ಕಡೆಗಣಿಸಿದ ನಾಯಕರು ಒಬ್ಬರು, ಇಬ್ಬರೇ? ಅಟಲಬಿಹಾರಿ ವಾಜಪೇಯಿ,ಅಡ್ವಾಣಿ, ಮುರಳಿ ಮನೋಹರ ಜೋಷಿ, ಜಸ್ವಂತ್ ಸಿಂಗ್ ಮಾತ್ರವಲ್ಲ ತಮ್ಮದೇ ರಾಜ್ಯದ ಹಿರಿಯ ಬಿಜೆಪಿ ನಾಯಕ ಕೇಶುಭಾಯಿ ಪಟೇಲ್ ಅವರಿಗೆ ಮೋದಿಯವರು ಮಾಡಿದ್ದ ಅವಮಾನ ಏನು ಕಡಿಮೆಯೇ?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು ಎನ್ನುವುದು ನೆನಪಿರಲಿ. ಕೊನೆಗೆ ಅವರು ಪಕ್ಷವನ್ನೇ ಬಿಟ್ಟುಹೋಗುವಂತೆ ಮಾಡಿದ್ದು ಯಾರು? ಪಕ್ಷ ತೊರೆದು ಹೋದ ಅವರನ್ನು ತುಚ್ಚೀಕರಿಸಿ ಹಿಂಸಿಸಿದ್ದು ಯಾರು? ಅವರೆಲ್ಲರೂ ಮೋದಿಯವರ ಶಿಷ್ಯರೇ ಅಲ್ಲವೇ?

Siddaramaiah questions PM Modi for visiting Karnataka only for political gains

ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರ ವರೆಗೆ ಈಗ ಎಲ್ಲರೂ ಬಿ.ಎಸ್. ಯಡಿಯೂರಪ್ಪನವರನ್ನು ಹಾಡಿ ಹೊಗಳುತ್ತಿರುವುದು ಅವರ ಮೇಲಿನ ಪ್ರೀತಿಯಿಂದ ಖಂಡಿತ ಅಲ್ಲ. ಲಿಂಗಾಯತ ಮತಬ್ಯಾಂಕ್ ಮೇಲೆ ಕಣ್ಣಿಟ್ಟು ಮೋದಿ ಮತ್ತು ಬಳಗ ಈ ನಾಟಕ ಮಾಡುತ್ತಿದೆ. ಇದನ್ನು ಅರ್ಥಮಾಡಿಕೊಳ್ಳುವಷ್ಟು ಶಕ್ತಿ ಸಾಮರ್ಥ್ಯ ಲಿಂಗಾಯತ ಸಮುದಾಯಕ್ಕಿದೆ.

ರಾಜ್ಯದಲ್ಲಿ ಬಿಜೆಪಿಗೆ ಮತ ತಂದುಕೊಡುವ ಯಾವ ನಾಯಕರ ಮುಖವೂ ಇಲ್ಲ ಎಂದು ನರೇಂದ್ರಮೋದಿಯವರಿಗೆ ಮನವರಿಕೆಯಾಗಿದೆ. ಅದೇ ರೀತಿ ತನ್ನ ಮುಖ ತೋರಿಸಿದರೂ ಹಿಂದಿನಂತೆ ಜನ ಮತಹಾಕುವುದಿಲ್ಲ ಎನ್ನುವುದು ಖಾತರಿಯಾಗಿದೆ. ಅದಕ್ಕೆಲ್ಲ ಈ ನಾಟಕ ಮಾಡುತ್ತಿದ್ದಾರೆ.

ಕರ್ನಾಟಕದ ನಾಯಕರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಅನುಕಂಪ ತೋರುತ್ತಿರುವ ಪ್ರಧಾನಿ ಮೋದಿಯವರು ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿಯ 25 ಸಂಸದರನ್ನು ಹೇಗೆ ನಡೆಸಿಕೊಂಡಿದ್ದಾರೆ? ಅವರೇನು ಕರ್ನಾಟಕದವರಲ್ಲವೇ? ಮೋದಿಯವರು ಅವರನ್ನು ಎಂದಾದರೂ ತಮ್ಮೆದುರು ತಲೆ ಎತ್ತಿ ಮಾತನಾಡಲು ಬಿಟ್ಟಿದ್ದರಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+