ಸಿದ್ದರಾಮಯ್ಯ ವಿದಾಯ ಭಾಷಣದ ಹೈಲೆಟ್ಸ್‌: ಡಾ.ರಾಜ್‌ಕುಮಾರ್ ಮಾತು ಉಲ್ಲೇಖಿಸಿ ಸಿದ್ದು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದು. ಡಿ.ಕೆ ಶಿವಕುಮಾರ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ಕನ್ನಡಿಗರ ಕಣ್ಮಣಿ, ವರ ನಟ ಡಾ. ರಾಜ್‌ಕುಮಾರ್ ಅವರನ್ನು ಸ್ಮರಿಸಿದ್ದಾರೆ. ಡಾ.ರಾಜ್‌ಕುಮಾರ್ ಅವರು ತಮ್ಮ ಅಭಿಮಾನಿಗಳನ್ನು ದೇವರು ಎನ್ನುತ್ತಿದ್ದರು. ನಾನು ರಾಜಕಾರಣಿ ಸಂವಿಧಾನವನ್ನೇ ಧರ್ಮ ಎಂದು ನಂಬಿದವರು. ಮತದಾರರೇ ದೇವರು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ವಿದಾಯದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ಭಾವುಕರಾಗಿದ್ದು, ಮಾತು ಗದ್ಗದಿತವಾಗಿತ್ತು. ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿ - ವಿದಾಯದ ಭಾಷಣದ ಹೈಲೆಟ್ಸ್‌ ಇಲ್ಲಿದೆ.ಬುದ್ಧ ಬಸವ,

ಅಂಬೇಡ್ಕರ್, ಗಾಂಧೀಜಿ ತತ್ವ ಪಾಲನೆ

ನಾನು ರಾಜಕಾರಣಕ್ಕೆ ಬಂದಾಗಿನಿಂದಲೂ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧಿಜಿ ಅವರ ತತ್ವಾದರ್ಶಗಳಲ್ಲಿ ನಂಬಿಕೆ ಇರಿಸಿದವನು. ಸಂವಿಧಾನದ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದೇನೆ. ಯಾವುದೇ ಜಾತಿ ಮತ ವಿಲ್ಲದೇ ನಾವೆಲ್ಲ ಒಂದೇ ಕುಟುಂಬದವರಾಗಿ ಬಾಳಬೇಕು ಎನ್ನುವುದು ನನ್ನ ಆಶಯ. ಸಮಸಮಾಜದಲ್ಲಿ ನಂಬಿಕೆ ಇರಿಸಿದವನು. ಇನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಈ ದೇಶದ ಸಂಪತ್ತು ಎಲ್ಲರಿಗೂ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ತತ್ವದಲ್ಲಿ ನಾನು ನಂಬಿಕೆ ಇರಿಸಿಕೊಂಡಿದ್ದೇನೆ. ಬಸವಣ್ಣ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ವಿಚಾರ ನಮಗೆ ಆದರ್ಶವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah

ನಾವು ಚುನಾವಣೆ ಪ್ರಣಾಳಿಕೆ ಭರವಸೆಗಳ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮೊದಲ ಅವಧಿಯಲ್ಲಿ ನೀಡಲಾಗಿದ್ದ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇವು. 2023ರ ಚುನಾವಣೆಯ ಪ್ರಣಾಳಿಕೆಯಲ್ಲಿ 550ಕ್ಕೂ ಹೆಚ್ಚು ಭರವಸೆಗಳನ್ನು ಕೊಡಲಾಗಿತ್ತು. ಈ ಭರವಸೆಗಳಲ್ಲಿ ಸುಮಾರು 300 ಭರವಸೆಗಳನ್ನು ನಾವು ಈಗಾಗಲೇ ಈಡೇರಿಸಿದ್ದೇವೆ. ಇದರೊಂದಿಗೆ 5 ಗ್ಯಾರಂಟಿಗಳನ್ನು ಸಹ ಘೋಷಣೆ ಮಾಡಿದ್ದೇವು. ಅಧಿಕಾರಕ್ಕೆ ಬಂದ ಮೊದಲನೇ ವರ್ಷವೇ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ.

ಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ಅಭಿಮಾನಿ ದೇವರು ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ಮತದಾರ ದೇವರು. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ.

ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.

ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.

ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.

ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.

ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.

ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ಮರಳಿನ ಮೇಲಿನ ಅಕ್ಷರಾಭ್ಯಾಸದ ಮೂಲಕ ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+