ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಜಾರಕಿಹೊಳಿ ಪಾಪ ಸುಳ್ಳು ಹೇಳುತ್ತಾರೆ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 30: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎರಡನೆಯ ಅವಧಿಯ ಮೊದಲ ವರ್ಷ ಇವತ್ತು (ಮೇ 30) ಪೂರೈಸಿದೆ. ಇದೇ ಸಂದರ್ಭದಲ್ಲಿ ಜುಲೈ 26ಕ್ಕೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಲಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ವರ್ಷವಾಗುವ ಮೊದಲೇ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ. ಬಿಜೆಪಿ ಹಿರಿಯ ಶಾಸಕರು ಮಾಜಿ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಇನ್ನೂ 5 ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದರು. ರಮೇಶ್ ಜಾರಕಿಹೊಳಿ ಹೇಳಿಕೆಗೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ 'ತಲ್ಲಣ'ಗೊಳ್ಳುವ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಕಾಂಗ್ರೆಸ್ 'ತಲ್ಲಣ'ಗೊಳ್ಳುವ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ

ರಮೇಶ್ ಜಾರಕಿಹೊಳಿ ಪಾಪ ಸುಳ್ಳು ಹೇಳುತ್ತಾರೆ. ಕಾಂಗ್ರೆಸ್‌ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಸುಳ್ಳು ಹೇಳ್ತಿದ್ದಾರೆ. ಅವರೊಂದಿಗೆ ಮಹೇಶ್ ಕುಮಟಳ್ಳಿ ಬಿಟ್ಟು ಬೇರೆಯವರು ಯಾರು ಹೋದರು? ಕುಮಟಳ್ಳಿ ಬಿಟ್ಟು ರಮೇಶ್ ಜೊತೆ ಯಾರೂ ಇಲ್ಲ. ಜೊತೆಗೆ ಈಗಾಗಲೇ ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಯಡಿಯೂರಪ್ಪ ನಮ್ಮ‌ ಲೀಡರ್ ಅಲ್ಲ ಅಂತ ಬಿಜೆಪಿ ಹಿರಿಯ ಎಂಎಲ್‌ಎ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ನಮ್ಮ ನಾಯಕರು ಎಂದು ಯತ್ನಾಳ್ ಹೇಳಿದ್ದಾರೆ. ಅವರ ಮಾತಿನಿಂದ ಏನು ಸಂದೇಶ ಹೋಗುತ್ತದೆ?

Siddaramaiah Reaction On Congress MLAs joining BJP Statement By Ramesh Jarakiholi

ಅಲ್ಲಿ ಎಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕ ಅಲ್ಲ. ಇದೊಂದು ಕೆಟ್ಟ ಸರ್ಕಾರ, ದರಿದ್ರ ಸರ್ಕಾರ. ಜೊತೆಗೆ ನನ್ನ ಬಾದಾಮಿ ಕ್ಷೇತ್ರಕ್ಕೆ 600 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ ಎನ್ನುವುದು ಸುಳ್ಳು. ನನ್ನ ಕ್ಷೇತ್ರಕ್ಕೆ ಅನುದಾನ ಸ್ವಲ್ಪ ಪಡೆದುಕೊಂಡಿದ್ದೆ. ಮಾಜಿ ಸಚಿವ ಉಮೇಶ್ ಕತ್ತಿ ನನ್ನ ಸ್ನೇಹಿತ. ಕತ್ತಿ ನಾನು ಜನತಾದಳದಲ್ಲಿ ಇದ್ದವರು. ಇಬ್ಬರೂ ಒಟ್ಟಿಗೆ ಸಚಿವರಾಗಿ ಕೆಲಸ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.

English summary
Former CM Siddaramaiah has said that Congress MLAs will not join the BJP as Minister Ramesh Jarkiholi has said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X