ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ವಿಶೇಷ ಕೊರೊನಾ ಪ್ಯಾಕೇಜ್: 'ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ'

|
Google Oneindia Kannada News

ಬೆಂಗಳೂರು, ಮೇ 18: ಕೊರೊನಾ ಇಪ್ಪತ್ತು ಲಕ್ಷ ವಿಶೇಷ ಪ್ಯಾಕೇಜ್ ಪ್ರಕಟಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ದ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸಾಲು ಸಾಲು, ಹತ್ತು ಟ್ವೀಟ್ ಅನ್ನು ಮಾಡಿದ್ದಾರೆ. ಅದು ಹೀಗಿದೆ:

1. ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ ರೂ.20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಅಷ್ಟೆ. ಟಿವಿ ಪರದೆಯಲ್ಲಿ,ಪತ್ರಿಕೆಯ ಪುಟದಲ್ಲಿ ಕಾಣುತ್ತಿದೆ, ಜನರ ಕೈಗೆ ಸಿಗುತ್ತಿಲ್ಲ. ಹಣಕಾಸು ಸಚಿವರು ಐದು ಕಂತುಗಳಲ್ಲಿ ಬಿಚ್ಚಿಟ್ಟ ಪ್ಯಾಕೇಜ್ ಅಂಕಿ ಅಂಶಗಳ ಕಸರತ್ತು. ಹಳೆಯ ಸರಕಿಗೆ ಹೊಸ ಹೊದಿಕೆ.

2. ಕೊರೊನಾ ಹಾವಳಿಯಿಂದ ದೇಶ ಸ್ವತಂತ್ರ ಭಾರತದ ಅತ್ಯಂತ ದೊಡ್ಡ ಮಾನವೀಯತೆಯ ಬಿಕ್ಕಟ್ಟನ್ನು ಎದುರಿಸಿದೆ. ಲಕ್ಷಾಂತರ ವಲಸೆ ಕಾರ್ಮಿಕರು, ಮಹಿಳೆಯರು, ಮಕ್ಕಳು ಊರು ಸೇರಲು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಜನರ ಪ್ರಸ್ತಾವವೇ ಇಲ್ಲದ ಪ್ಯಾಕೇಜ್ ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ.

3.. ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಪ್ರಖ್ಯಾತ ಆರ್ಥಿಕ ತಜ್ಞರು ಹೇಳುತ್ತಲೇ ಇದ್ದಾರೆ. ಪ್ರಧಾನಿ ಮೋದಿಯವರು ಖಾಲಿಯಾಗಿರುವ ಸರ್ಕಾರದ ಖಜಾನೆ ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ಮಿಕರಿಗೆ,ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ದಕ್ಕಿದ್ದೆಷ್ಟು? ಅವರಿಗಾದ ಲಾಭ ಎಷ್ಟು ಎಂಬ ವಿವರ ನೀಡುವಿರಾ?

ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು‌ ಸರ್ಕಾರ ದಿವಾಳಿ‌ ಆಗಿದೆಯೇ?

ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು‌ ಸರ್ಕಾರ ದಿವಾಳಿ‌ ಆಗಿದೆಯೇ?

4.. ದೇಶದಲ್ಲಿ ಗುರುತಿಸಲಾಗಿರುವ 13 ಕೋಟಿ ಬಡವರಿಗೆ ಮಾಸಿಕ ರೂ.5,000 ನೀಡಿದರೆ ಆಗುವ ವೆಚ್ಚ ರೂ.65,000 ಕೋಟಿ. ರೂ.7,000 ನೀಡಿದರೆ ಆಗುವ ವೆಚ್ಚ 97,500 ಕೋಟಿ.ಇಷ್ಟು ಕೊಟ್ಟು ಪುಣ್ಯ ಕಟ್ಕೊಳ್ಳಿ ಎಂದು ನಮ್ಮ ಪಕ್ಷ ಹೇಳುತ್ತಲೇ ಇದೆ. ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು‌ ಸರ್ಕಾರ ದಿವಾಳಿ‌ ಆಗಿದೆಯೇ?

ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?

ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?

5..ದೇಶದಲ್ಲಿ ಜನ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಹೋಗಲು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಕಾಶದಲ್ಲಿ ವಿಮಾನದ ಮೂಲಕ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಲಭ ಮಾಡಿ ದುಡ್ಡು ಮಾಡಿಕೊಳ್ಳುವುದು ಹೇಗೆ ಎನ್ನುವುದಕ್ಕೆ ಪ್ಯಾಕೇಜ್ ಘೋಷಿಸುತ್ತಿದೆ. ಇದು ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?

ನರೇಗಾ ಯೋಜನೆ

ನರೇಗಾ ಯೋಜನೆ

6. ನರೇಗಾ ಯೋಜನೆಯ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ ಮತ್ತು ಈ ಯೋಜನೆಯನ್ನು ನಗರಪ್ರದೇಶದ ಬಡವರಿಗೂ ವಿಸ್ತರಿಸಿ ಎಂದು ಪ್ರಾರಂಭದಿಂದಲೇ ನಮ್ಮ ಪಕ್ಷ ಹೇಳುತ್ತಲೇ ಬಂದಿದೆ. ಲಕ್ಷ ಲಕ್ಷ ಪ್ಯಾಕೇಜ್ ನಲ್ಲಿ ಇದರ ಪ್ರಸ್ತಾವವೇ ಇಲ್ಲ.

ರೈತರು ಮುಂಗಾರು ಬೆಳೆಯ ಸಿದ್ದತೆಯಲ್ಲಿದ್ದಾರೆ

ರೈತರು ಮುಂಗಾರು ಬೆಳೆಯ ಸಿದ್ದತೆಯಲ್ಲಿದ್ದಾರೆ

7. ರೈತರು ಮುಂಗಾರು ಬೆಳೆಯ ಸಿದ್ದತೆಯಲ್ಲಿದ್ದಾರೆ. ಈಗಾಗಲೇ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ರೈತರು ದಿವಾಳಿಯಾಗಿದ್ದಾರೆ. ಅವರ ಹಳೆ ಸಾಲ ಮನ್ನಾ ಮಾಡಿ, ರಸಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಸಲಕರಣೆಗಳ ಮೇಲಿನ ಜಿಎಸ್ ಟಿ ರದ್ದುಪಡಿಸಿ ಎಂಬ ಬೇಡಿಕೆ ಬಗ್ಗೆ ಪ್ಯಾಕೇಜ್ ನಲ್ಲಿ ಪ್ರಸ್ತಾವವೇ ಇಲ್ಲ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆ

ಸಣ್ಣ ಮತ್ತು ಮಧ್ಯಮ ಕೈಗಾರಿಕೆ

8.. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡಿರುವ ಆರ್ಥಿಕ ನೆರವಿನ ಪ್ಯಾಕೇಜನ್ನು ಹಣಕಾಸು ಸಚಿವರು ಘೋಷಿಸಿದ್ದಾರೆ. ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎಂದು ಅನಿಸಿದರೂ ಒಳಗಿನ ಗುಟ್ಟು ಬೇರೆ ಇದೆ. ದೇಶದಲ್ಲಿ 6.2 ಲಕ್ಷ ಕೋಟಿ ಕಿರು ಉದ್ದಿಮೆಗಳಿವೆ, ಅವುಗಳಲ್ಲಿ 45 ಲಕ್ಷ ದೊಡ್ಡಗಾತ್ರದ ಕಿರು ಉದ್ದಿಮೆಗಳಿಗೆ ಮಾತ್ರ ಈ ನೆರವು ಲಭ್ಯ. ಕೇಂದ್ರ ಸರ್ಕಾರದ ಆದ್ಯತೆ ಏನು?

ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆ

ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆ

9. ಸಣ್ಣ ಕೈಗಾರಿಕೆಗಳಿಗೆ ಸಾಲ ಮತ್ತು ಸಾಲಕ್ಕೆ ಖಾತರಿ ನೀಡಿಕೆಯ ಬಗ್ಗೆ ಪ್ಯಾಕೇಜ್ ನಲ್ಲಿ ಹೇಳಲಾಗಿದೆ. ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆಗಳಿಗೆ ಸಾಲ ಪಡೆಯುವ ಚೈತನ್ಯ ಎಲ್ಲಿದೆ? ಅವುಗಳಲ್ಲಿರುವ ಕಾರ್ಮಿಕರ ಸಂಬಳ ನೀಡಿಕೆಗೆ ನೆರವು, ಅವರ ಹಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮೊದಲಾದ ನೆರವಿನಿಂದ ಮಾತ್ರ.

ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದೆ

ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದೆ

10. ದೇಶಪ್ರೇಮದ ವಾರಸುದಾರರೇ ತಾವೆಂದು ‌ಕೊಚ್ಚಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಈಗ ರಕ್ಷಣಾ ಇಲಾಖೆಯ FDI ಮಿತಿಯನ್ನು ಶೇ 74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದೆ.

English summary
Special Corona Package: Siddaramaiah Ten Tweet To PM Modi Led Union Government,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X