• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜನರ ಬಾಯಲ್ಲಿ ರಾಜಕಾರಣಗಳೆಲ್ಲಾ ಲಫಂಗರು ಎಂದು ಹೇಳಿಸಿಕೊಳ್ಳುವ ಹಾಗಾಗಿದೆ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮಾರ್ಚ್ 06: ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಘಟನೆಗಳನ್ನು ನಾನು ನೋಡಿರಲಿಲ್ಲ. ಕೆಲವು ಸಚಿವರುಗಳು ಮುಂಜಾಗ್ರತೆಯಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿ ಸಿಡಿ ಇದೆ ಎಂದು ಗೊತ್ತಿದ್ದರೆ ಮಾತ್ರ ಅದನ್ನು ರಾಜಕೀಯ ಷಡ್ಯಂತ್ರ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ಸುಧಾಕರ್ ಅವರದು ಸಿಡಿ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್

ಕೆಲವರು ಮಾಡುವ ತಪ್ಪುಗಳಿಂದ ಜನ ಶಾಪ ಹಾಕುತ್ತಿದ್ದಾರೆ. ರಾಜಕಾರಣಿಗಳು ಎಂದರೆ ಲಫಂಗರು ಎನ್ನುವ ರೀತಿ ಆಗಿದೆ. ಸಮಾಜಕ್ಕೆ ರಾಜಕಾರಣಿಗಳ ಬಗ್ಗೆ ತಪ್ಪು ಗ್ರಹಿಕೆ ರವಾನೆಯಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದಿನ ಬಜೆಟ್‍ನಲ್ಲೂ ಕೂಡ ಜನಪ್ರಿಯ ಬಜೆಟ್ ಮಾಡುತ್ತೇನೆ, ಮಹಿಳೆಯರಿಗೆ, ಹಿಂದುಳಿದವರಿಗೆ, ಯುವಕರಿಗೆ ಆದ್ಯತೆ ನೀಡುತ್ತೇನೆ ಎಂದಿದ್ದರು. ಆದರೆ, ಹೇಳಿದಂತೆ ನಡೆದುಕೊಂಡಿದ್ದಾರೆಯೇ, ಇವೆಲ್ಲವೂ ಹೇಳಲು ಮಾತ್ರ ಚೆಂದ ಆದರೂ ಯಾವುದೂ ಜಾರಿಯಾಗುವುದಿಲ್ಲ ಎಂದರು.

ಜಾರಕಿಹೊಳಿ ಸಿಡಿ ಸ್ಪೋಟವಾಗುತ್ತಿದ್ದಂತೆ ಕೋರ್ಟ್‌ ಮೊರೆ ಹೋದ ಆರು ಸಚಿವರು!ಜಾರಕಿಹೊಳಿ ಸಿಡಿ ಸ್ಪೋಟವಾಗುತ್ತಿದ್ದಂತೆ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಹೊಸ ಯೋಜನೆಗಳಿಗೆ ಹಣ ಇಲ್ಲ. ಹಳೆ ಯೋಜನೆಗಳನ್ನು ಮುಂದುವರಿಸಲು ಆಸಕ್ತಿ ಇಲ್ಲ. ಈ ಹಿಂದೆ ನಾವು ರೂಪಿಸಿದ್ದ ಕಾರ್ಯಕ್ರಮಗಳನ್ನು ಕೂಡ ನಿಲ್ಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೊದಲು ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿ, ನಂತರ ಅದು ಜನಪ್ರಿಯ ಬಜೆಟ್ ಅಥವಾ ಜನವಿರೋಧಿ ಬಜೆಟ್ ಎಂಬುದನ್ನು ಚರ್ಚೆ ಮಾಡೋಣ ಎಂದರು.

ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡುವುದಿಲ್ಲ

ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡುವುದಿಲ್ಲ

ಈಗಾಗಲೇ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಕೊಟ್ಟಿರುವುದರಿಂದ ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಅವರ ಬೆಂಬಲಿಗರು ಪ್ರತಿಭಟನೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಎಂದರು.

ಕಾಂಗ್ರೆಸ್ ಶಾಸಕರು, ಮುಖಂಡರನ್ನು ಹೆಸರಿಸಿ ಸುಳ್ಳುಕೇಸ್ ದಾಖಲು

ಕಾಂಗ್ರೆಸ್ ಶಾಸಕರು, ಮುಖಂಡರನ್ನು ಹೆಸರಿಸಿ ಸುಳ್ಳುಕೇಸ್ ದಾಖಲು

ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರನ್ನು ಹೆದರಿಸಲು ಸುಳ್ಳು ಕೇಸು ಹಾಕಲಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ ಅವರ ಕುಟುಂಬದ ಮೇಲೆ ಕೇಸು ಹಾಕಿ ಅವರ ಪುತ್ರನನ್ನು ಬಂಧಿಸಲಾಗಿದೆ.

ಇದರ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರ ಹಾಗೂ ಸಂಸದ ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರ ಕೈವಾಡವಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಶಾಸಕರು ಮತ್ತು ಅವರ ಮಕ್ಕಳ ಮೇಲೆ ಕೇಸು ಹಾಕಿದ್ದಾರೆ. ಈ ರೀತಿ ಸುಳ್ಳು ಕೇಸು ಹಾಕುವ ಅಧಿಕಾರ ಯಾರಿಗೂ ಇಲ್ಲ. ರಾಜಕೀಯವಾಗಿಯೂ ಕೂಡ ಇದು ಸರಿಯಲ್ಲ ಎಂದರು.

ಕೋರ್ಟ್ ಮೊರೆ ಹೋಗುತ್ತಿರುವ ಸಚಿವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಎಚ್ಚರಿಕೆ! ಕೋರ್ಟ್ ಮೊರೆ ಹೋಗುತ್ತಿರುವ ಸಚಿವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಎಚ್ಚರಿಕೆ!

ಸದಾನಂದ ಗೌಡರು ಕೊಟ್ಟಿರುವ ಹೇಳಿಕೆ ಬಗ್ಗೆ ತಿಳಿದಿಲ್ಲ

ಸದಾನಂದ ಗೌಡರು ಕೊಟ್ಟಿರುವ ಹೇಳಿಕೆ ಬಗ್ಗೆ ತಿಳಿದಿಲ್ಲ

ಸದಾನಂದಗೌಡ ಅವರು ಸಚಿವರ ಬಗ್ಗೆ ನೀಡಿರುವ ಹೇಳಿಕೆಯನ್ನು ನಾನು ನೋಡಿಲ್ಲ. ಹಾಗಾಗಿ ಗೊತ್ತಿಲ್ಲದೆ ಪ್ರತಿಕ್ರಿಯಿಸುವುದಿಲ್ಲ. ರಮೇಶ್ ಜಾರಕಿಹೊಳಿ ಅವರ ಬಗ್ಗೆಯಾಗಲಿ ಅಥವಾ ಬೇರೆ ಯಾವ ಸಚಿವರ ಬಗ್ಗೆಯಾಗಲೀ ನನಗೆ ಅನುಕಂಪ ಇಲ್ಲ. ಬಿಜೆಪಿ ಸರ್ಕಾರದಲ್ಲಿ ಎಲ್ಲರೂ ಕಳ್ಳರೇ ಎಂದು ಸಿದ್ದರಾಮಯ್ಯ ಹೇಳಿದರು.

ಯಡಿಯೂರಪ್ಪ ಹೇಳುವುದೆಲ್ಲಾ ಸುಳ್ಳು

ಯಡಿಯೂರಪ್ಪ ಹೇಳುವುದೆಲ್ಲಾ ಸುಳ್ಳು

ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರತಿ ಬಾರಿ ಬಜೆಟ್ ಮಂಡಿಸಿದಾಗಲೂ ಜನಪ್ರಿಯ ಕಾರ್ಯಕ್ರಮಗಳನ್ನು ನೀಡುವುದಾಗಿ ಹೇಳುತ್ತಲೇ ಬಂದಿದ್ದಾರೆ. ಆದರೆ, ಯಾವ ಕಾಲದಲ್ಲೂ ಅವರು ಸತ್ಯ ಹೇಳಿಲ್ಲ. ಸುಳ್ಳೇ ಅವರ ಮನೆ ದೇವರು. ನೀಡಿದ ಭರವಸೆಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

English summary
Opposition Leader Siddaramaiah reaction to BJP's 6 Ministers petition to court to block news publishing against them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X