ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ
ಮೈಸೂರು: ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಬದಲಾಗಿ ಪ್ರೀತಿಯನ್ನೇ ಕಲಿಸುತ್ತದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಹಾಗೂ ಸಮಾಜದ ಬಡವರು ಮತ್ತು ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಮಿಕವಾಗಿ ನುಡಿದರು.
ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಧ್ಯಾತ್ಮ, ಸಾಮಾಜಿಕ ನ್ಯಾಯ ಮತ್ತು ತಮ್ಮ ರಾಜಕೀಯ ಜೀವನದ ಏರಿಳಿತಗಳ ಕುರಿತು ಮನಬಿಚ್ಚಿ ಮಾತನಾಡಿದರು. ಬಾಲ್ಯದ ನೆನಪುಗಳನ್ನು ಮೆಲುಕು ಹಾಕುತ್ತಾ, ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನತೆ ನೀಡಿದ ಬೆಂಬಲವೇ ತಮ್ಮನ್ನು ಇಂದು ಈ ಉನ್ನತ ಸ್ಥಾನಕ್ಕೆ ತಂದು ನಿಲ್ಲಿಸಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು.ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.
ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ
ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. 'ದೇವನೊಬ್ಬ ನಾಮ ಹಲವು' ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ. ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.
ಸಮಾನತೆ ಸ್ಥಾಪಿಸುವುದೇ ಸರ್ಕಾರದ ಯೋಜನೆಗಳ ಗುರಿ
ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ದೊರೆತಾಗ ಮಾತ್ರ ಸಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications