ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಜೊತೆಗೆ ಮೀನು ಹಿಡಿಯಲು ನಾನೂ ಹೋಗಿದ್ದೆ: ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಸೆ. 11: ಸಾಹಿತ್ಯಾಸಕ್ತಿ ಇರುವ ಯಾವ ಕನ್ನಡಿಗರಿಗೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ಗೊತ್ತಿಲ್ಲ ಹೇಳಿ? ಕೃಷಿಕ, ಸಾಹಿತಿ, ಚಿಂತಕ, ವಿಜ್ಞಾನಿ ಎಲ್ಲವೂ ಆಗಿದ್ದ ತೇಜಸ್ವಿ ಅವರಿದ್ದರೆ ಸೆಪ್ಟಂಬರ್ 8ಕ್ಕೆ 80 ವರ್ಷಗಳನ್ನು ಪೂರೈಸುತ್ತಿದ್ದರು. ಬೆಂಗಳೂರಿನಲ್ಲಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರೊಂದಿಗೆ ಕಳೆದ ಕೌತುಕದ ಕ್ಷಣಗಳನ್ನು ಸಿದ್ದರಾಮಯ್ಯ ನೆನಪಿಸಿಕೊಂಡರು.

"ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯ ನನಗಿರಲಿಲ್ಲ. ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು, ಮೈಸೂರಿನಲ್ಲಿ ಕೆ. ರಾಮದಾಸ್ ಎನ್ನುವವರು ತೇಜಸ್ವಿಯವರ ಆಪ್ತ ಸ್ನೇಹಿತರಾಗಿದ್ದರು. ಇವರು ಕೂಡ ಶಿವಮೊಗ್ಗ ಜಿಲ್ಲೆಯವರು. ತೇಜಸ್ವಿಯವರಿಗೆ ಶ್ರೀ ರಾಮ್ ಎನ್ನುವ ಇನ್ನೊಬ್ಬ ಸ್ನೇಹಿತರಿದ್ದರು. ನಾನು ಹಲವು ಬಾರಿ ರಾಮದಾಸ್ ಮನೆಗೆ ಹೋಗಿದ್ದೆ, ಅಲ್ಲಿ ನನಗೆ ತೇಜಸ್ವಿಯವರು ಪರಿಚಯವಾಗಿ ನಮ್ಮ‌ ನಡುವೆ ಆತ್ಮೀಯತೆ ಬೆಳೆಯಿತು" ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ 'ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ' ಲೋಕ ಸಾಕ್ಷ್ಯಚಿತ್ರ, ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು.

ಒಂದಿಡೀ ದಿನ ಅವರ ತೋಟದ ಮನೆಯಲ್ಲಿ ಇದ್ದೆ

ಒಂದಿಡೀ ದಿನ ಅವರ ತೋಟದ ಮನೆಯಲ್ಲಿ ಇದ್ದೆ

"ತೇಜಸ್ವಿ ಅವರು ಹಲವು ಬಾರಿ ತಮ್ಮ ತೋಟದ ಮನೆಗೆ ಬರುವಂತೆ ನನಗೆ ಆಹ್ವಾನ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹೋಗಲು ಸಾಧ್ಯವಾಯಿತು. ಒಂದು ಇಡೀ ದಿನ ಅವರ ತೋಟದ ಮನೆಯಲ್ಲಿ ಇದ್ದೆ" ಎಂದು ಸಿದ್ದರಾಮಯ್ಯ ಅವರು ನೆನಪಿಸಿಕೊಂಡರು.

"ತೇಜಸ್ವಿ ಒಬ್ಬ ಸಾಹಿತಿಯಷ್ಟೇ ಅಲ್ಲ, ಮಹಾನ್ ಪರಿಸರ ಪ್ರೇಮಿ ಜೊತೆಗೆ ಉತ್ತಮ ಛಾಯಾಗ್ರಾಹಕರಾಗಿದ್ದರು. ಅವರಿಗೆ ಮೀನು ಹಿಡಿಯುವ ಹವ್ಯಾಸವಿತ್ತು. ಮೀನು ಸಿಕ್ಕಲಿ, ಸಿಗದಿರಲಿ ಗಂಟೆಗಟ್ಟಲೆ ಕೂತಲ್ಲೇ ಕೂತಿರುತ್ತಿದ್ದರು. ಅವರ ಜೊತೆ ಒಂದೆರಡು ಬಾರಿ ನಾನೂ ಮೀನು ಹಿಡಿಯಲು ಹೋಗಿದ್ದೆ" ಎಂದು ಸಿದ್ದರಾಮಯ್ಯ ನೆನಪಿಸಿಕೊಂಡಿದ್ದು ವಿಶೇಷವಾಗಿತ್ತು.

ತೇಜಸ್ವಿ ಅವರಷ್ಟು ಪ್ರಕೃತಿ ಪ್ರೀತಿಸಿದವರನ್ನು ನಾನು ನೋಡಿಲ್ಲ

ತೇಜಸ್ವಿ ಅವರಷ್ಟು ಪ್ರಕೃತಿ ಪ್ರೀತಿಸಿದವರನ್ನು ನಾನು ನೋಡಿಲ್ಲ

"ತೇಜಸ್ವಿ ಅವರಷ್ಟು ಪ್ರಕೃತಿಯನ್ನು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಮುಂದೆ ನಾನು ಕಾನೂನು ಪದವಿ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ" ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.

"ನನಗೆ ಪ್ರ್ರೊ. ನಂಜುಂಡಸ್ವಾಮಿ ಅವರ ಪರಿಚಯವಾಗದೆ ಇದ್ದಿದ್ದರೆ ಬಹುಶಃ ನಾನು ರಾಜಕಾರಣಕ್ಕೂ ಬರುತ್ತಾ ಇರಲಿಲ್ಲ. ತೇಜಸ್ವಿಯವರು ಕನ್ನಡ ಎಂ.ಎ ಓದಿ ಬರವಣಿಗೆ, ಛಾಯಾಗ್ರಹಣ, ಪರಿಸರದ ಬಗ್ಗೆ ಅರಿಯುವ ಕೆಲಸ ಮಾಡಿದರು. ಅವರ ವಿಭಿನ್ನ ಯೋಚನಾಶೈಲಿಯೇ ಅವರ ಹೆಗ್ಗುರುತು" ಎಂದು ವೃತ್ತಿ ಬದಲಾಗಿದ್ದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿ

ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿ

ತೇಜಸ್ವಿ ಅವರು ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ ಅದರಿಂದ ಲಾಭ ಪಡೆಯುವ ಪ್ರಯತ್ನ ಮಾಡಲೇ ಇಲ್ಲ. ಪ್ರಕೃತಿ, ಪರಿಸರದ ಬಗ್ಗೆ ಹಲವು ಲೇಖನ ಬರೆದಿದ್ದಾರೆ. ಪರಿಸರ ಪ್ರೇಮಿಗಳಿಗೆ ಇಂದಿಗೂ ತೇಜಸ್ವಿ ಅವರು ಸ್ಪೂರ್ತಿಯಾಗಿದ್ದಾರೆ. ರಾಜಕಾರಣದ ಬಗ್ಗೆ ಅವರು ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ರಾಜಕಾರಣಿಗಳ ಬಗ್ಗೆ ಅವರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ ಆದರೆ ಅವರಿಗೆ ನನ್ನ ಬಗ್ಗೆ ವೈಯಕ್ತಿಕವಾಗಿ ಪ್ರೀತಿ, ಅಭಿಮಾನವಿತ್ತು. ಇಂಥವರ ಸಂಪರ್ಕದಿಂದ ನಾನು ಒಳ್ಳೆಯ ಬದುಕು ರೂಪಿಸಿಕೊಳ್ಳಲು ಸಹಾಯವಾಯಿತು.

ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ. ನನ್ನ ಬದುಕು ರೂಪುಗೊಳ್ಳಲು ಅವರ ಒಡನಾಟ ಸಾಕಷ್ಟು ಸಹಕಾರಿಯಾಗಿದೆ. ಹಾಗಾಗಿ ಅವರನ್ನು ಈ ಒಂದು ದಿನ ಮಾತ್ರವಲ್ಲ ನಿತ್ಯವೂ ನೆನೆಯುತ್ತೇನೆ ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಪ್ರತೀ ಸೋಮವಾರ ಸಂಜೆ ತೇಜಸ್ವಿ ಭೇಟಿ!

ಪ್ರತೀ ಸೋಮವಾರ ಸಂಜೆ ತೇಜಸ್ವಿ ಭೇಟಿ!

ಪ್ರತೀ ಸೋಮವಾರ ಸಂಜೆ 5 ರಿಂದ 8 ಗಂಟೆ ವರೆಗೆ ತೇಜಸ್ವಿ ಅವರು, ರಾಮದಾಸ್ ಸೇರಿದಂತೆ ನಾವೆಲ್ಲ ಮೈಸೂರಿನ ಹೊಟೇಲ್ ಒಂದರಲ್ಲಿ ಸೇರುತ್ತಿದ್ದೆವು. ಆಗ ಬರೀ ರಾಜಕೀಯ ವಿಚಾರಗಳಷ್ಟೇ ಅಲ್ಲ ಬದುಕಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆವು.

ಪಶ್ಚಿಮ ಘಟ್ಟಗಳಲ್ಲಿ ಬೆಳೆಯುವ ಕುರಿಂಜಿ ಎಂಬ ವಿಶಿಷ್ಟ ಪ್ರಭೇಧದ ಹೂವುಗಳ ರಕ್ಷಣೆ ಇಂದು ಅಗತ್ಯವಾಗಿ ಆಗಬೇಕಿದೆ. ಬೆಂಕಿಯ ಜ್ವಾಲೆಗಿಂತ ಮನುಷ್ಯ ಪರಿಸರಕ್ಕೆ ಮಾರಕ. ಮನುಷ್ಯರಿಂದ ಇವುಗಳ ರಕ್ಷಣೆ ಆಗಬೇಕು.

ತೇಜಸ್ವಿಯವರ ಜನ್ಮದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮುದ್ರಣವಾದ ನಂತರ ಅತಿಥಿಗಳ ಪಟ್ಟಿಯಲ್ಲಿ ನನ್ನ ಹೆಸರಿದೆ ಎಂಬ ವಿಚಾರ ನನಗೆ ಗೊತ್ತಾಗಿದ್ದು. ತೇಜಸ್ವಿಯವರನ್ನು ನೆನಪು ಮಾಡಿಕೊಳ್ಳುವ ಇಂಥದ್ದೊಂದು ಸುವರ್ಣಾವಕಾಶ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿ.ಎಲ್ ಶಂಕರ್ ಅವರಿಗೆ ಹಾಗೂ ಕಾರ್ಯಕ್ರಮದ ಆಯೋಜಕರಿಗೆ ಧನ್ಯವಾದ ಎಂದು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಹೇಳಿದರು.

Recommended Video

ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿ ಕಿಕ್ಕಿರಿದು ಸೇರಿದ ಜನ, ಕೋವಿಡ್‌ ರೂಲ್ಸ್‌ ಸಂಪೂರ್ಣ ಉಲ್ಲಂಘನೆ

English summary
Former Chief Minister Siddaramaiah recalls the moments he had spent with KP Poornachandra Tejaswi on his birthday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X