ಸಿದ್ದರಾಮಯ್ಯ 1.30 ಕೋಟಿ ಲಂಚ ಪಡೆದಿದ್ದಾರೆ: ಏನಿದು ಆರೋಪ?
ಬೆಂಗಳೂರು, ಅಕ್ಟೋಬರ್ 19: ಟರ್ಫ್ ಕ್ಲಬ್ ಮೆಂಬರ್ ಶಿಫ್ ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರವಾಗಿ ಆರೋಪ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್‍ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರರಹಿತರು? ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ ಹೋಗಿ 1997ರ ನಂತರದ ಎಲ್ಲ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿವೆ ಎಂದು ಕೇಳಿದರು. ಅವನ್ನು ಸುಟ್ಟು ಹಾಕಲಾಗಿದೆ ಎಂದು ದೂರಿದರು.

ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ, ಮುಡಾ ಚಯರ್‍ಮನ್ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು, ಬೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಬೈರತಿ ಸುರೇಶ್ ಬಂಧನವಾದೊಡನೆ ಸತ್ಯ ಹೊರಕ್ಕೆ ಬರಲಿದೆ. ಅವರ ತನಿಖೆ ನಡೆಸಬೇಕಿದೆ. ತಪಾಸಣೆ ಮಾಡಬೇಕಿದೆ. ಅವರು ತಂದ ಕಡತಗಳ ವಿವರ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮುಡಾ ಕಾರ್ಯದರ್ಶಿಯನ್ನು ಅಮಾನತು ಮಾಡಿದ್ದಾರೆ. ಬಳಿಕ ಅಮಾನತು ವಾಪಸ್ ಪಡೆದಿದ್ದಾರೆ. ಸಿದ್ದರಾಮಯ್ಯನವರು 2013ರಲ್ಲಿ ತಮ್ಮ ಕೇಸುಗಳಿಂದ ಹೊರಕ್ಕೆ ಬರಲು ಲೋಕಾಯುಕ್ತವನ್ನು ಮುಚ್ಚಿದ್ದರು. ಸಿಎಂ ಪತ್ನಿಗೆ ನಿವೇಶನ ಕೊಡುವ ಸಂಬಂಧ ಮುಡಾ ನಿರ್ಧಾರವಾದಾಗ ಸಿದ್ದರಾಮಯ್ಯರ ಮಗ ಯತೀಂದ್ರ ಶಾಸಕರಾಗಿದ್ದರು, ಮುಡಾ ಸದಸ್ಯರೂ ಆಗಿದ್ದರು. ಅವರ ಮೂಗಿನ ನೇರಕ್ಕೆ ನಿರ್ಧಾರವಾಗಿದ್ದು, ದಬಾವಣೆಯಿಂದ ನಿವೇಶನಗಳು ಸಿಕ್ಕಿವೆ ಎಂದು ಆರೋಪಿಸಿದರು.
ಇಷ್ಟೆಲ್ಲ ನಡೆದಾಗ ಸಿದ್ದರಾಮಯ್ಯನವರು ಸಾಂವಿಧಾನಿಕ ಹುದ್ದೆಗಳಲ್ಲಿದ್ದರು. ಪ್ರಭಾರ ಬೀರಿ ಅತ್ಯಂತ ಹೆಚ್ಚು ಮೌಲ್ಯಯುತ ಪ್ರದೇಶದಲ್ಲಿ ನಿವೇಶನ ಪಡೆದು ವಾಪಸ್ ಕೊಡಲಾಗಿದೆ. ನಿವೇಶನ ವಾಪಸ್ ಕೊಟ್ಟಿದ್ದೇ ಅಪರಾಧಕ್ಕೆ ಮೊದಲ ಸಾಕ್ಷಿ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದರು.
ಸರಕಾರದ ಬೊಕ್ಕಸದ ಹಣ ಕೂಡ ಇವತ್ತು ಕಾಂಗ್ರೆಸ್ ಪಕ್ಷಕ್ಕೆ ವರ್ಗಾವಣೆ ಆಗುತ್ತಿದೆ. ಸಿದ್ದರಾಮಯ್ಯನವರು ತಾನು ಬಹಳ ಶುದ್ಧ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ, ಅವರ ಪರಿಶುದ್ಧತೆಯ ಒಂದೊಂದೇ ಮುಖವಾಡಗಳು ಕಳಚಿಬೀಳುತ್ತಿವೆ. ಮೈಸೂರಿನಲ್ಲಿ ನಡೆದ ಮುಡಾ ಹಗರಣ ಸಂಬಂಧ ಮೈಸೂರಿನ ಡಿ.ಸಿ. ಮೈಸೂರು ಮುಡಾದಲ್ಲಿ ಒಂದು ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಗರಣ ಆಗಿದ್ದು, ಇದರ ತನಿಖೆ ಮಾಡಿ ವರದಿ ಕೊಟ್ಟಿದ್ದರು. ಮೈಸೂರು ಲೋಕಾಯುಕ್ತವು ಮೊನ್ನೆ ದೇವರಾಜು ಮತ್ತು ಸಿದ್ದರಾಮಯ್ಯನವರ ಭಾಮೈದನನ್ನು ತನಿಖೆ ಮಾಡಿದ್ದರು. ಆದರೆ, ಸಿದ್ದರಾಮಯ್ಯರು ತಪ್ಪಿಸಿಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನಿಮಗೋಸ್ಕರ ನೀವು ಕಾನೂನು ತಿದ್ದುಪಡಿ ಮಾಡಿದ್ದೀರೆಂದು ಹೇಳಿದ ರಾಜ್ಯ ಹೈಕೋರ್ಟ್, ಸಿದ್ದರಾಮಯ್ಯರಿಗೆ, ಕಾಂಗ್ರೆಸ್ ಸರಕಾರಕ್ಕೆ ಛೀಮಾರಿ ಹಾಕಿತ್ತು. ಲೋವರ್ ಕೋರ್ಟಿನ ಮ್ಯಾಜಿಸ್ಟ್ರೇಟ್ ಇದರ ಬಗ್ಗೆ ತನಿಖೆ ಆಗಬೇಕೆಂದಿದ್ದಾರೆ. ಮಾನ್ಯ ಗವರ್ನರ್ ಅವರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದು, ಅದನ್ನು ಚಾಲೆಂಜ್ ಮಾಡಿದ್ದರು. ಮೂಡಾ ಹಗರಣ ನಡೆದುದು ಸಾಬೀತಾಗಿದ್ದು, ಇ.ಡಿ. ತನಿಖೆ ನಡೆಯುತ್ತಿದೆ. ಕಾನೂನನ್ನು ಬದಲಿಸಿದ್ದನ್ನು ಇಡಿ ಕೂಡ ಹೇಳಿದೆ ಎಂದರು.
ಸ್ವಾಧೀನವಾಗಿದ್ದ ಕೃಷಿಯೇತರ ಭೂಮಿಯನ್ನು ಕೃಷಿ ಭೂಮಿ ಎಂದು ಹೇಳಿಕೊಂಡರು. ಅದರ ಪರಿವರ್ತನೆ ಮಾಡಿದ್ದು, ಮುಡಾ ತೆಗೆದುಕೊಂಡಿತ್ತು. ವಿಜಯನಗರ 3, 4ನೇ ಹಂತದಲ್ಲಿ ನಿಮ್ಮ ಪತ್ನಿ 2015ರಲ್ಲಿ ಶೇ 50-50 ಅನುಪಾತದಲ್ಲಿ 14 ನಿವೇಶನ ಪಡೆದಿದ್ದರು. ಮುಡಾ ಕಾರ್ಯದರ್ಶಿಗಳಿಗೆ ಒತ್ತಡ ಹೇರಿ ಇದನ್ನು ಮಾಡಿಸಿದ್ದರು ಎಂದು ಟೀಕಿಸಿದರು. ದೇವರಾಜು ನಿಜವಾದ ಮಾಲೀಕರೇ ಅಲ್ಲ. ನಿಮ್ಮ ಭಾಮೈದನಿಗೆ ಅದು ಹೇಗೆ ಬಂತು? ಅದು ದಾನವಾಗಿ ಯಾಕೆ ಬಂತು? ಪಾರ್ವತಿ ಸಿದ್ದರಾಮಯ್ಯರಿಗೆ ಈ ರೀತಿ ಮಾರ್ಗದರ್ಶನ ಮಾಡಿದ ಅಥವಾ ತಪ್ಪಾಗಿ ಮಾರ್ಗದರ್ಶನ ಕೊಟ್ಟವರು ಯಾರು ಎಂದು ಪ್ರಶ್ನೆಗಳನ್ನು ಮುಂದಿಟ್ಟರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications