Siddaramaiah: 13 ಚುನಾವಣೆ, 8ಕ್ಕೂ ಹೆಚ್ಚು ಬಾರಿ ಗೆಲುವು: ಅರಸು ಸುದೀರ್ಘ ಸಿಎಂ ದಾಖಲೆ ಮುರಿದ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು: ಜನವರಿ 6 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಹೊಸ ಮೈಲಿಗಲ್ಲನ್ನು ದಾಟಲಿದ್ದು, ರಾಜ್ಯದಲ್ಲಿ ಅತಿ ದೀರ್ಘ ಕಾಲ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಜನರಾಗಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಯಿಸಿದ್ದಾರೆ.
ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು.

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು.
ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು.ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲಾಗುವುದು. ಅವರು ಸಮಯ ನೀಡಿದರೆ ಚರ್ಚಿಸಲಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂದರು.
ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಕುರಿತು ಮಾತನಾಡಿ, ರಾಜ್ಯಕ್ಕೆ ಜಿಎಸ್ ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications