ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರುನಾಡಿಗೆ ಮೋದಿ: ಹಳೆ ನೆನಪುಗಳನ್ನು ಕೆದಕಿ ಸಿದ್ದರಾಮಯ್ಯ ಸರಣಿ ಟ್ವೀಟ್

|
Google Oneindia Kannada News

ಬೆಂಗಳೂರು, ಜೂನ್ 20: ಕರ್ನಾಟಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರಾಜ್ಯ ಭೇಟಿಯ ಆ ದಿನವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ.

ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

PM Modi Karnataka Visit Live: 12 ಗಂಟೆಗೆ ಬೆಂಗಳೂರಿಗೆ ಮೋದಿ ಆಗಮನPM Modi Karnataka Visit Live: 12 ಗಂಟೆಗೆ ಬೆಂಗಳೂರಿಗೆ ಮೋದಿ ಆಗಮನ

ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಳೆಯ ನೆನಪುಗಳ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಸರಣಿ ಟ್ವೀಟ್ ಕುರಿತು ಒಂದು ವರದಿ ಇಲ್ಲಿದೆ ಓದಿ.

ಮಾಜಿ ಪ್ರಧಾನಿಯನ್ನು ಸ್ಮರಿಸಿಕೊಂಡ ಸಿದ್ದರಾಮಯ್ಯ

ಮಾಜಿ ಪ್ರಧಾನಿಯನ್ನು ಸ್ಮರಿಸಿಕೊಂಡ ಸಿದ್ದರಾಮಯ್ಯ

"ಐದು ವರ್ಷಗಳ ಹಿಂದೆ (4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆಯಾದ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು," ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸ್ಮಾರಕ ರೂಪದಲ್ಲಿ ರೂಪಗೊಂಡ ಯೋಜನೆ ಬಗ್ಗೆ ಟ್ವೀಟ್

ಸ್ಮಾರಕ ರೂಪದಲ್ಲಿ ರೂಪಗೊಂಡ ಯೋಜನೆ ಬಗ್ಗೆ ಟ್ವೀಟ್

"ವಿಶ್ವಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿ.ಆರ್. ಅಂಬೇಡ್ಕರ್ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್," ಎಂದು ಯೋಜನೆ ಬಗ್ಗೆ ಬರೆದುಕೊಂಡಿದ್ದಾರೆ.

2019ರಲ್ಲೇ ಯೋಜನೆಗಾಗಿ 350 ಕೋಟಿ ರೂಪಾಯಿ ಮಂಜೂರು

2019ರಲ್ಲೇ ಯೋಜನೆಗಾಗಿ 350 ಕೋಟಿ ರೂಪಾಯಿ ಮಂಜೂರು

"ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು," ಎಂದು ಸಿದ್ದರಾಮಯ್ಯ ತಮ್ಮ ಟ್ವೀಟ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ನೂತನ ಆವರಣ ಉದ್ಘಾಟನೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ

"BASE ಕಟ್ಟಡದ ಶಂಕುಸ್ಥಾಪನೆ ಮಾಡಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ. ಈ ಕಟ್ಟಡವನ್ನು 6 ತಿಂಗಳಲ್ಲಿ ಪೂರ್ಣಗೊಳಿಸಿದ್ದು ನಮ್ಮ ಸರ್ಕಾರದ ಹೆಮ್ಮೆಯ ಸಾಧನೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿಯೇ ಇದ್ದ ಕಟ್ಟಡದಲ್ಲಿಯೇ 2017ರ ಜೂನ್ ನಲ್ಲಿ B.Sc(Honours) ಅರ್ಥಶಾಸ್ತ್ರದ ತರಗತಿಗಳು ಪ್ರಾರಂಭವಾಗಿತ್ತು," ಎಂಬುದನ್ನು ಸಿದ್ದರಾಮಯ್ಯ ನೆನಪಿಸಿಕೊಂಡರು.

"ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ," ಎಂದು ಟ್ವೀಟ್ ಮಾಡಿದ್ದಾರೆ.

Recommended Video

Narendra Modi Bangalore ನಲ್ಲಿ Ambedkar ಪ್ರತಿಮೆಯನ್ನು ಅನಾವರಣ ಗೊಳಿಸಿದರು | Oneindia Kannada

English summary
Siddaramaiah Remembers Former PM Manmohan Singh Visit to Karnataka During his Tenure as CM as he inaugurated Dr BR Ambedkar school of economics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X