ಸುಳ್ಳು ಅಭ್ಯರ್ಥಿಗಳ ಪಟ್ಟಿಯನ್ನು ನಂಬಬೇಡಿ: ಸಿದ್ದರಾಮಯ್ಯ

Written By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 10: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೂ ಕಾಂಗ್ರೆಸ್ ಹೈಕಮಾಂಡ್ ಮಾನ್ಯ ಮಾಡಿಲ್ಲ ಹಾಗಾಗಿ ಯಾರೂ ಸಹ ಸುಳ್ಳು ಅಭ್ಯರ್ಥಿಗಳ ಪಟ್ಟಿಯನ್ನು ನಂಬಬಾರದು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಇಂದು ಮಧ್ಯಾಹ್ನದಿಂದ ಸಾಮಾಜಿಕ ಜಾಳತಾಣಗಳಲ್ಲಿ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹರಿದಾಡುತ್ತಿರುವ ಕಾರಣ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, 'ಸುಳ್ಳು ಸುದ್ದಿ'ಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

siddaramaiah-request-not-circulate-the-fake-candidates-list

ಸಾಮಾಜಿಕ ಜಾಲತಾಣಗಳಲ್ಲಿ 131 ಜನಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯೊಂದು ಹರಿದಾಡುತ್ತಿದೆ. ಆದರೆ ಇದು ಹೈಕಮಾಂಡ್‌ನಿಂದ ಮಾನ್ಯವಾದ ಪಟ್ಟಿ ಅಲ್ಲವಾಗಿದೆ.

ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರುಗಳು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ನಾಳೆ ಅಥವಾ ನಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah today tweeted that congress high command not yet approved congress candidates list, so don't believe the circulating fake congress candidates list.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ