Delhi Blast: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಮೈಸೂರು , ನವೆಂಬರ್‌ 11: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್ ಗಳು ಆಗುತ್ತಿವೆ ? ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ ವೇಳೆ ಪ್ರಭಾವ ಬೀರುತ್ತದೆಯೇ ಎಂದು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್ ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಬಾಂಬ್ ಬ್ಲಾಸ್ಟ್ ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ ಎಂದು ಹೇಳಿದರು.

Siddaramaiah Response On Delhi Bomb Blast During Elections

ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ‌ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.

DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎನ್ನುವ ಸೂಚನೆ ನೀಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+