ಮೆಕ್ಕೆಜೋಳಕ್ಕೆ 2,400 ರೂ. ಬೆಂಬಲ ಬೆಲೆಯಾಗಿ ನಿಗದಿ: ಸಿದ್ದರಾಯ್ಯ ರಿಯಾಕ್ಷನ್

ಬೆಂಗಳೂರು, ಡಿಸೆಂಬರ್‌ 02: ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ.

Siddaramaiah response on fixing Rs 2 400 support price for maize

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ.

ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶುಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು .ಎಥನಾಲ್ ಹಾಗೂ ಎಂ ಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು.

ಸಮಯ ಸಿಕ್ಕು ಭೇಟಿಗೆ ಅವಕಾಶ ನೀಡಿಯೇ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತೇವೆ. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು. ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+