ಕುರುಬ ಸಮುದಾಯವನ್ನು ST ಗೆ ಸೇರ್ಪಡೆ: ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?
ಬೆಂಗಳೂರು, ಅಕ್ಟೋಬರ್07: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.
ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು. ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.
ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು. ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications