ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ವಾಪಸ್, ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16 : ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.

12 ದಿನಗಳ ವಿದೇಶ ಪ್ರವಾಸದ ಬಳಿಕ ಸಿದ್ದರಾಮಯ್ಯ ಭಾನುವಾರ ಮುಂಜಾನೆ 2.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹಲವಾರು ಕಾರ್ಯಕರ್ತರು ಅವರನ್ನು ಬರಮಾಡಿಕೊಂಡರು.

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮೊದಲ ದಲಿತ ಸಿಎಂ ಆಗಲಿದ್ದಾರೆಯೇ?ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮೊದಲ ದಲಿತ ಸಿಎಂ ಆಗಲಿದ್ದಾರೆಯೇ?

ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು,'ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ' ಎಂದು ಹೇಳಿದರು.

ಸಿದ್ದರಾಮಯ್ಯ ಯುರೋಪ್ ಪ್ರವಾಸದ ರಹಸ್ಯ ಬಟಾಬಯಲು!ಸಿದ್ದರಾಮಯ್ಯ ಯುರೋಪ್ ಪ್ರವಾಸದ ರಹಸ್ಯ ಬಟಾಬಯಲು!

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಹ ಬೆಂಗಳೂರಿಗೆ ಬಂದಿದ್ದು, ಸರಣಿ ಸಭೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಅವರು ವಾಪಸ್ ಆದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ, ವಿವಿಧ ಜಿಲ್ಲೆಗಳ ಪ್ರವಾಸದಲ್ಲಿದ್ದ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಎರಡು ದಿನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಎಸೆದ ಬಾಂಬ್ 2019ರ ಚುನಾವಣೆಯ ತಂತ್ರವೇ?ಸಿದ್ದರಾಮಯ್ಯ ಎಸೆದ ಬಾಂಬ್ 2019ರ ಚುನಾವಣೆಯ ತಂತ್ರವೇ?

ವಿವಿಧ ನಾಯಕರ ಭೇಟಿ

ವಿವಿಧ ನಾಯಕರ ಭೇಟಿ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಯಾದರು.

ಡಾ.ಜಿ.ಪರಮೇಶ್ವರ ಭೇಟಿ

ಡಾ.ಜಿ.ಪರಮೇಶ್ವರ ಭೇಟಿ

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕಾವೇರಿ ನಿವಾಸಕ್ಕೆ ಆಗಮಿಸಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಬಂದು ಹೋದ ಬಳಿಕ ಪರಮೇಶ್ವರ ಅವರು ಬಂದಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕುಮಾರಕೃಪದಲ್ಲಿ ಸಭೆ

ಕುಮಾರಕೃಪದಲ್ಲಿ ಸಭೆ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಕುಮಾರ ಕೃಪಾ ಅತಿಥಿ ಗೃಹದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ ಅವರ ಜೊತೆ ಅವರು ಮೊದಲು ಸಭೆ ನಡೆಸಿದರು.

ಭಾನುವಾರ ಸಂಜೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ಕೆ.ಸಿ.ವೇಣುಗೋಪಾಲ್ ಸಭೆ ನಡೆಸಲಿದ್ದಾರೆ.

ಶಾಸಕರು ರೆಸಾರ್ಟ್‌ಗೆ?

ಶಾಸಕರು ರೆಸಾರ್ಟ್‌ಗೆ?

ಆಪರೇಷನ್ ಕಮಲದ ಸುದ್ದಿಗಳ ಹಿನ್ನಲೆಯಲ್ಲಿ ಎರಡು ದಿನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅಲ್ಲಿಯ ತನಕ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ರೆಸಾರ್ಟ್‌ ರಾಜಕೀಯ ಆರಂಭಿಸುವ ಸಾಧ್ಯತೆ ಇದೆ.

English summary
Karnataka Former Chief Minister Siddaramaiah returned to Bengaluru on Sunday, September 16, 2018 morning after foreign trip.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X