ಸಿದ್ದರಾಮಯ್ಯ ವಿರುದ್ಧ ಆರ್‌. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ

ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಜಟಾಪಟಿ ಜೋರಾಗುತ್ತಿರುವ ಈ ನಡುವೆ, ರಾಜ್ಯದ ಆರ್ಥಿಕ ಹಂಚಿಕೆ, ಕೇಂದ್ರ-ರಾಜ್ಯ ಸಂಬಂಧಗಳು ಮತ್ತು ನಾಯಕತ್ವದ ನಿಷ್ಠೆಯ ಕುರಿತಾಗಿ ಹೊಸ ಚರ್ಚೆಗೆ ಕಾರಣವಾಗಿರುವ ಹೇಳಿಕೆ ಈಗ ಬಯಲಾಗಿದೆ. ಮುಖ್ಯಮಂತ್ರಿ ವಿರುದ್ಧ ಆರ್‌ ಅಶೋಕ್‌ ಅವರ ಅಭಿಪ್ರಾಯದಲ್ಲಿ ಸುಳ್ಳು ಆರೋಪಗಳು, ರಾಜಕೀಯ ಒತ್ತಡಗಳು ಮತ್ತು ವಯಕ್ತಿಕ ಟೀಕೆಗಳು ಪ್ರಮುಖವಾಗಿ ಹೊರಹೊಮ್ಮಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದೆ.

"ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಒಂದು ಸುಳ್ಳನ್ನ ನೂರು ಬಾರಿ ಅಲ್ಲ, ಸಾವಿರ ಬಾರಿ ಹೇಳಿದರೂ ಅದು ಸತ್ಯವಾಗುವುದಿಲ್ಲ.ತೆರಿಗೆ ಹಂಚಿಕೆ ಹೇಗೆ ನಡೆಯುತ್ತದೆ, ಅದಕ್ಕಿರುವ ಮಾನದಂಡಗಳು ಏನು, ಇವೆಲ್ಲಾ ತಮಗೆ ಚೆನ್ನಾಗಿ ಗೊತ್ತು. ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು" ಎಂದು ಆರ್‌. ಅಶೋಕ್‌ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Siddaramaiah Row

ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ತಮ್ಮಂತಹವರು ಕೇವಲ ಹೈಕಮಾಂಡ್ ನಾಯಕರ ಮೆಚ್ಚುಗೆಗಾಗಿ ಪದೇ ಪದೇ ಇಲ್ಲಸಲ್ಲದ ಆರೋಪ ಮಾಡಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ತಮಗೆ ಶೋಭೆ ತರುವುದಿಲ್ಲ.

ಪಾಪ ಕಾಂಗ್ರೆಸ್ ಪಕ್ಷದ ಇನ್ನುಳಿದ ನಾಯಕರಿಗೇನೋ ಅನಿವಾರ್ಯ. ಇಷ್ಟ ಇದೆಯೋ ಇಲ್ಲವೋ ಅಧಿಕಾರಕ್ಕಾಗಿ ವಿಧಿ ಇಲ್ಲದೆ ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ಮಾಡಿಕೊಂಡಿದ್ದಾರೆ. ಆದರೆ ತಮಗೆ, ಅದೂ ಇಂದೋ ನಾಳೆಯೋ ಕುರ್ಚಿ ಬಿಡುವ ಪರಿಸ್ಥಿತಿಯಲ್ಲಿರುವ ತಮಗೆ ಹೈಕಮಾಂಡ್ ಮುಲಾಜು ಏಕೆ? ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕೆ ಆತ್ಮವಂಚನೆ ಮಾಡಿಕೊಳ್ಳುತ್ತಿದ್ದೀರಾ?

ಒಟ್ಟಿನಲ್ಲಿ ತಮ್ಮ ಮೊದಲ ಅವಧಿಯಲ್ಲಿದ್ದ ಗತ್ತು, ಗಾಂಭೀರ್ಯ, ಆತ್ಮವಿಶ್ವಾಸ ಇವ್ಯಾವುದೂ ಈಗ ತಮ್ಮಲ್ಲಿ ಕಾಣುತ್ತಿಲ್ಲ. ಜನತಾ ಪರಿವಾರದಿಂದ, ಸಮಾಜವಾದಿ ಹಿನ್ನೆಲೆಯಿಂದ ಬಂದ ತಮಗೆ ಈ ರೀತಿ ಕುರ್ಚಿಗಾಗಿ, ಮಗನ ಭವಿಷ್ಯಕ್ಕಾಗಿ, ನಕಲಿ ಗಾಂಧಿ ಕುಟುಂಬದ ಓಲೈಕೆ ಮಾಡುವ ಪರಿಸ್ಥಿತಿ ಬರಬಾರದಿತ್ತು.

ರಾಜಕೀಯ ಜೀವನದ ಸಂಧ್ಯಾ ಕಾಲದಲ್ಲಿ ನಿಮಗೆ ಬಂದಿರುವ ಈ ದುಸ್ಥಿತಿ ಬಗ್ಗೆ ನನಗೆ ಕನಿಕರವಿದೆ. ಆದರೆ ಸುಳ್ಳಿನ ಮೇಲೆ ಸುಳ್ಳು ಹೇಳಿ ತಮ್ಮ ವರ್ಚಸ್ಸಿಗೆ ತಾವೇ ಇನ್ನಷ್ಟು ಮಸಿ ಬಳಿಸಿಕೊಳ್ಳಬೇಡಿ. ಪ್ರಜ್ಞಾವಂತ ಕನ್ನಡಿಗರ ಮುಂದೆ ಇನ್ನಷ್ಟು ಸಣ್ಣವರಾಗಬೇಡಿ.

ಬಜೆಟ್ ಕುರಿತ ಚರ್ಚೆ

ಕರ್ನಾಟಕ ಬಜೆಟ್ ಕುರಿತ ಚರ್ಚೆ ಸದನದಲ್ಲಿ ತೀವ್ರವಾಗುತ್ತಿದ್ದಂತೆ ರಾಜಕೀಯ ವಾಗ್ವಾದಕ್ಕೂ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತು ನೀಡಿದ ಹೇಳಿಕೆಗಳ ವಿರುದ್ಧ ವಿರೋಧ ಪಕ್ಷ ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಸಾಲದ ಬಳಕೆ ಮತ್ತು ಬಂಡವಾಳ ವೆಚ್ಚದ ವಿಚಾರದಲ್ಲಿ ಸರ್ಕಾರದ ನೀತಿಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ರಾಜ್ಯದ ಆರ್ಥಿಕ ಸ್ಥಿತಿ, ಸಾಲದ ಪ್ರಮಾಣ ಮತ್ತು ಅದರ ಬಳಕೆಯ ಕುರಿತ ಚರ್ಚೆ ಇದೀಗ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+