ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ
ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಜಟಾಪಟಿ ಜೋರಾಗುತ್ತಿರುವ ಈ ನಡುವೆ, ರಾಜ್ಯದ ಆರ್ಥಿಕ ಹಂಚಿಕೆ, ಕೇಂದ್ರ-ರಾಜ್ಯ ಸಂಬಂಧಗಳು ಮತ್ತು ನಾಯಕತ್ವದ ನಿಷ್ಠೆಯ ಕುರಿತಾಗಿ ಹೊಸ ಚರ್ಚೆಗೆ ಕಾರಣವಾಗಿರುವ ಹೇಳಿಕೆ ಈಗ ಬಯಲಾಗಿದೆ. ಮುಖ್ಯಮಂತ್ರಿ ವಿರುದ್ಧ ಆರ್ ಅಶೋಕ್ ಅವರ ಅಭಿಪ್ರಾಯದಲ್ಲಿ ಸುಳ್ಳು ಆರೋಪಗಳು, ರಾಜಕೀಯ ಒತ್ತಡಗಳು ಮತ್ತು ವಯಕ್ತಿಕ ಟೀಕೆಗಳು ಪ್ರಮುಖವಾಗಿ ಹೊರಹೊಮ್ಮಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದೆ.
"ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಒಂದು ಸುಳ್ಳನ್ನ ನೂರು ಬಾರಿ ಅಲ್ಲ, ಸಾವಿರ ಬಾರಿ ಹೇಳಿದರೂ ಅದು ಸತ್ಯವಾಗುವುದಿಲ್ಲ.ತೆರಿಗೆ ಹಂಚಿಕೆ ಹೇಗೆ ನಡೆಯುತ್ತದೆ, ಅದಕ್ಕಿರುವ ಮಾನದಂಡಗಳು ಏನು, ಇವೆಲ್ಲಾ ತಮಗೆ ಚೆನ್ನಾಗಿ ಗೊತ್ತು. ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು" ಎಂದು ಆರ್. ಅಶೋಕ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ತಮ್ಮಂತಹವರು ಕೇವಲ ಹೈಕಮಾಂಡ್ ನಾಯಕರ ಮೆಚ್ಚುಗೆಗಾಗಿ ಪದೇ ಪದೇ ಇಲ್ಲಸಲ್ಲದ ಆರೋಪ ಮಾಡಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ತಮಗೆ ಶೋಭೆ ತರುವುದಿಲ್ಲ.
ಪಾಪ ಕಾಂಗ್ರೆಸ್ ಪಕ್ಷದ ಇನ್ನುಳಿದ ನಾಯಕರಿಗೇನೋ ಅನಿವಾರ್ಯ. ಇಷ್ಟ ಇದೆಯೋ ಇಲ್ಲವೋ ಅಧಿಕಾರಕ್ಕಾಗಿ ವಿಧಿ ಇಲ್ಲದೆ ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ಮಾಡಿಕೊಂಡಿದ್ದಾರೆ. ಆದರೆ ತಮಗೆ, ಅದೂ ಇಂದೋ ನಾಳೆಯೋ ಕುರ್ಚಿ ಬಿಡುವ ಪರಿಸ್ಥಿತಿಯಲ್ಲಿರುವ ತಮಗೆ ಹೈಕಮಾಂಡ್ ಮುಲಾಜು ಏಕೆ? ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕೆ ಆತ್ಮವಂಚನೆ ಮಾಡಿಕೊಳ್ಳುತ್ತಿದ್ದೀರಾ?
ಒಟ್ಟಿನಲ್ಲಿ ತಮ್ಮ ಮೊದಲ ಅವಧಿಯಲ್ಲಿದ್ದ ಗತ್ತು, ಗಾಂಭೀರ್ಯ, ಆತ್ಮವಿಶ್ವಾಸ ಇವ್ಯಾವುದೂ ಈಗ ತಮ್ಮಲ್ಲಿ ಕಾಣುತ್ತಿಲ್ಲ. ಜನತಾ ಪರಿವಾರದಿಂದ, ಸಮಾಜವಾದಿ ಹಿನ್ನೆಲೆಯಿಂದ ಬಂದ ತಮಗೆ ಈ ರೀತಿ ಕುರ್ಚಿಗಾಗಿ, ಮಗನ ಭವಿಷ್ಯಕ್ಕಾಗಿ, ನಕಲಿ ಗಾಂಧಿ ಕುಟುಂಬದ ಓಲೈಕೆ ಮಾಡುವ ಪರಿಸ್ಥಿತಿ ಬರಬಾರದಿತ್ತು.
ರಾಜಕೀಯ ಜೀವನದ ಸಂಧ್ಯಾ ಕಾಲದಲ್ಲಿ ನಿಮಗೆ ಬಂದಿರುವ ಈ ದುಸ್ಥಿತಿ ಬಗ್ಗೆ ನನಗೆ ಕನಿಕರವಿದೆ. ಆದರೆ ಸುಳ್ಳಿನ ಮೇಲೆ ಸುಳ್ಳು ಹೇಳಿ ತಮ್ಮ ವರ್ಚಸ್ಸಿಗೆ ತಾವೇ ಇನ್ನಷ್ಟು ಮಸಿ ಬಳಿಸಿಕೊಳ್ಳಬೇಡಿ. ಪ್ರಜ್ಞಾವಂತ ಕನ್ನಡಿಗರ ಮುಂದೆ ಇನ್ನಷ್ಟು ಸಣ್ಣವರಾಗಬೇಡಿ.
ಬಜೆಟ್ ಕುರಿತ ಚರ್ಚೆ
ಕರ್ನಾಟಕ ಬಜೆಟ್ ಕುರಿತ ಚರ್ಚೆ ಸದನದಲ್ಲಿ ತೀವ್ರವಾಗುತ್ತಿದ್ದಂತೆ ರಾಜಕೀಯ ವಾಗ್ವಾದಕ್ಕೂ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತು ನೀಡಿದ ಹೇಳಿಕೆಗಳ ವಿರುದ್ಧ ವಿರೋಧ ಪಕ್ಷ ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಸಾಲದ ಬಳಕೆ ಮತ್ತು ಬಂಡವಾಳ ವೆಚ್ಚದ ವಿಚಾರದಲ್ಲಿ ಸರ್ಕಾರದ ನೀತಿಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ರಾಜ್ಯದ ಆರ್ಥಿಕ ಸ್ಥಿತಿ, ಸಾಲದ ಪ್ರಮಾಣ ಮತ್ತು ಅದರ ಬಳಕೆಯ ಕುರಿತ ಚರ್ಚೆ ಇದೀಗ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.
ಸ್ವಾಮಿ ಸಿಎಂ @siddaramaiah ನವರೇ, ಒಂದು ಸುಳ್ಳನ್ನ ನೂರು ಬಾರಿ ಅಲ್ಲ, ಸಾವಿರ ಬಾರಿ ಹೇಳಿದರೂ ಅದು ಸತ್ಯವಾಗುವುದಿಲ್ಲ.
— R. Ashoka (@RAshokaBJP) April 2, 2026
ತೆರಿಗೆ ಹಂಚಿಕೆ ಹೇಗೆ ನಡೆಯುತ್ತದೆ, ಅದಕ್ಕಿರುವ ಮಾನದಂಡಗಳು ಏನು, ಇವೆಲ್ಲಾ ತಮಗೆ ಚೆನ್ನಾಗಿ ಗೊತ್ತು. ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ… https://t.co/TKxqIiyuxZ pic.twitter.com/WC52YREbH4
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ













Click it and Unblock the Notifications