Siddaramaiah first reaction: ಬಿಜೆಪಿ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ: ಸಿದ್ದರಾಮಯ್ಯ ಹೇಳಿಕೆ
ರಾಜ್ಯ ವಿಧಾನಸಭಾ ಚುನಾವಣಾದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆಯಲ್ಲಿದ್ದು ಅಧಿಕಾರದತ್ತ ಹೆಜ್ಜೆಯಿಟ್ಟಿರುವುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು ಸ್ವಂತ ಶಕ್ತಿಯಲ್ಲಿ ಅಧಿಕಾರಕ್ಕೆ ಬರುವುದು ನಿಶ್ಷಿತ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಎಷ್ಟೇ ಬಾರಿ ಬಂದರು ಅದು ರಾಜ್ಯದ ಮತದಾರರ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ ಸಿದ್ದರಾಮಯ್ಯ. ಇದೇ ವೇಳೆ ಅವರು ವರುಣ ಕ್ಷೇತ್ರದಲ್ಲಿ ಹೆಚ್ಚಿನ ಅಂತದ ಗೆಲುವು ಸಧಿಸುವ ಭರವಸೆ ವ್ಯಕ್ತಪಡಿಸಿದರು.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪ್ರಚಾರದ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. "ಅವರು ಎಷ್ಟೇ ಬಾರಿ ರಾಜ್ಯಕ್ಕೆ ಆಗಮಿಸಿದರೂ ಅದು ಮತದಾರರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಯಾಕೆಂದರೆ ಜನರು ಬೀಸತ್ತಿದ್ದಾರೆ, ಅವರ ಭಷ್ಟಾಚಾರ, ದುರಾಡಳಿತ, ಅಭಿವೃದ್ಧಿ ವಿರೋಧಿ ಕೆಲಸಗಳಿಂದಾಗಿ ಜನರು ಬೇಸತ್ತಿದ್ದಾರೆ. ಅದೇ ರೀತಿಯಲ್ಲಿ ಜನರು ತೀರ್ಪು ನೀಡಿದ್ದಾರೆ" ಎಂದಿದ್ದಾರೆ ಸಿದ್ದರಾಮಯ್ಯ.

ಇನ್ನು ಸದ್ಯ ಕಾಂಗ್ರೆಸ್ ಈ ಚುನಾವಣೆಯಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿದ್ದು ಅಧಿಕಾರೇರುವತ್ತ ಹೆಜ್ಜೆಯಿಟ್ಟಿದೆ. ಈಗಾಗಲೇ ಬಹುಮತಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಅಧಿಕಾರಕ್ಕೇರುವುದು ನಿಚ್ಚಳವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಚಟುವಟಿಕೆ ತೀವ್ರವಾಗಿದ್ದು ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ.
ಇತ್ತ ಅಧಿಕಾರದಲ್ಲಿರುವ ಬಿಜೆಪಿ ಈ ಚುನಾವಣೆಯಲ್ಲಿ ಭಾರೀ ಹಿನ್ನಡೆಯನ್ನು ಅನುಭವಿಸುತ್ತಿದೆ. 120ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದರೆ ಬಿಜೆಪಿ 70ಕ್ಕೂ ಕಡಿಮೆ ಕ್ಷೇತ್ರಗಳಿಗೆ ಕುಸಿಯುವ ಆತಂಕದಲ್ಲಿದೆ. ಮತ್ತೊಂದೆಡೆ ಜೆಡಿಎಸ್ 30ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.












Click it and Unblock the Notifications