ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ, ಭಗವಾ ಧ್ವಜಕ್ಕೋ?- ಆರ್‌ಎಸ್‌ಎಸ್ ನಾಯಕರಿಗೆ ಸಿದ್ದರಾಮಯ್ಯ ಸವಾಲು
ಬೆಂಗಳೂರು, ಮೇ 28: ಆರ್‌ಎಸ್‌ಎಸ್ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಬಿಜೆಪಿಗರ ನಡುವೆ ವಾಗ್‌ಸಮರ ಮುಂದುವರಿದಿದೆ. RSS ಮೂಲವನ್ನು ಕೆದಕಿದ್ದ ಸಿದ್ದರಾಮಯ್ಯ ಇದೀಗ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿಗರನ್ನು ಬಿಟ್ಟು ಆರೆಸ್ಸೆಸ್ ನಾಯಕರಿಗೆ ಹಲವು ಸವಾಲುಗಳನ್ನು ಹಾಕಿದ್ದಾರೆ, ಪ್ರಶ್ನೆಗಳನ್ನು ಕೇಳಿದ್ಧಾರೆ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ, ಭಗವಾ ಧ್ವಜಕ್ಕೋ ಹೇಳಿ ಎಂದು ಆರೆಸ್ಸೆಸ್ ನಾಯಕರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
"ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ?" ಎಂದು ಇಂದು ಶನಿವಾರ ತಮ್ಮ ಒಂದು ಟ್ವೀಟ್‌ನಲ್ಲಿ ಅವರು ಬರೆದಿದ್ದಾರೆ. ಕುತೂಹಲವೆಂದರೆ ಸಿದ್ದರಾಮಯ್ಯ ತಮ್ಮ 12 ಟ್ವೀಟ್‌ಗಳಲ್ಲಿ #AryanRSS ಎಂಬ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.
|
ಆರೆಸ್ಸೆಸ್‌ನವರೇ ಉತ್ತರಿಸಲಿ
ಸಿದ್ದರಾಮಯ್ಯ ಆರ್‌ಎಸ್‌ಎಸ್ ಮೂಲ ಕೆದಕಿದಾಗ ರಾಜ್ಯ ಬಿಜೆಪಿ ಮುಖಂಡರು ತೀಕ್ಷ್ಣ ಪ್ರತಿಕ್ರಿಯೆಗಳನ್ನು ನೀಡಿದ್ದರು. ಈ ಬಗ್ಗೆ ಚಕಾರ ಎತ್ತಿರುವ ಸಿದ್ದರಾಮಯ್ಯ, ತಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್. ಎಂಬ ಸಂಸ್ಥೆಯನ್ನು. ಅದಕ್ಕೆ ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್‌ಎಸ್‌ಎಸ್ ನಾಯಕರು ಓದು ಬರಹ ಗೊತ್ತಿಲ್ಲದವರೇ ಎಂದು ಪ್ರಶ್ನೆ ಮಾಡಿದ್ದಾರೆ.
"ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್. ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ?
"ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್. ತೀರ್ಮಾನಿಸಿದೆ? ಆರ್.ಎಸ್.ಎಸ್. ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು?
"ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?" ಎಂದು ಸಿದ್ದರಾಮಯ್ಯ ತಮ್ಮ ಟ್ವೀಟ್‌ಗಳಲ್ಲಿ ನೇರವಾಗಿ ಕೇಳಿದ್ದಾರೆ.

ಹಿಂದೂ ಆಗಲು ಬ್ಲೂ ಫಿಲ್ಮ್ ನೋಡಬೇಕಾ?
ಆರ್.ಎಸ್.ಎಸ್.ಗೆ ಬಿಜೆಪಿಗರು ಮಾತ್ರವೇ ಹಿಂದೂಗಳಾ ಎಂಬ ತಮ್ಮ ಮೂಲ ಪ್ರಶ್ನೆಯನ್ನು ಬೆಳೆಸಿದ ಸಿದ್ದರಾಮಯ್ಯ, "ಆರ್.ಎಸ್.ಎಸ್. ದೃಷ್ಟಿಯಲ್ಲಿ ಹಿಂದೂ ಅಗಲು ೪೦ ಪರ್ಸೆಂಟ್ ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್‌ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು ಹೇಳಿಬಿಡಿ" ಎಂದು ರಾಜ್ಯ ಬಿಜೆಪಿಗೆ ಮೆತ್ತಿಕೊಂಡಿರುವ ಕಳಂಕವನ್ನು ಮತ್ತೆ ಕೆದಕಿದ್ದಾರೆ.
|
ದಲಿತರಿಗೆ ಏನು ಸ್ಥಾನಮಾನ
"ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ?
"ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಅಸ್ಪೃಶ್ಯತೆ ಬಗ್ಗೆ ಯಾಕೆ ಮಾತನಾಡಲ್ಲ?
ಅಸ್ಪೃಶ್ಯತೆ ಬಗ್ಗೆ ಯಾಕೆ ಮಾತನಾಡಲ್ಲ?
"ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ?
"ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ?" ಎಂದು ಮಾಜಿ ಮುಖ್ಯಮಂತ್ರಿಗಳು ಕೇಳಿದ್ದಾರೆ.
|
ಸಂವಿಧಾನಕ್ಕೋ ಮನುಸ್ಮೃತಿಗೋ ನಿಮ್ಮ ನಿಷ್ಠೆ?
"ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ?
"ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ?" ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ ಹಾಕಿದ್ದಾರೆ.

ರಾಜಕೀಯಕ್ಕೆ ಬಂದು ನೇರ ಎದುರಿಸಿ
ಇದೇ ವೇಳೆ, ನೇರವಾಗಿ ರಾಜಕೀಯಕ್ಕೆ ಬರುವಂತೆ ಆರೆಸ್ಸೆಸ್‌ಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. "ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ" ಎಂದು ಚಾಲೆಂಜ್ ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications