ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಬಸ್ ಬ್ರೇಕ್‍ಫೈಲ್; ಪಂಚರತ್ನ ಯಾತ್ರೆ ನಡುವೆ ಪಂಕ್ಚರ್ ಹಾಕುವ ಕಾರ್ಯ: ನಳಿನ್‍ಕುಮಾರ್ ಕಟೀಲ್ ವ್ಯಂಗ್ಯ

|
Google Oneindia Kannada News

ಬೆಂಗಳೂರು, ಜನವರಿ 30: ಕಾಂಗ್ರೆಸ್ ಬಸ್ ಹೊರಟಿದೆ. ಹೋಗ್ತ ಹೋಗ್ತ ಬ್ರೇಕ್‍ಫೈಲ್ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ಬಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವ್ಯಂಗ್ಯವಾಡಿದ್ದಾರೆ.

ಸೋಮವಾರ ನಗರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮುಖಂಡರ ಮತ್ತು ಬೆಂಬಲಿಗರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡೂ ಯಾತ್ರೆಗಳು ಮುಂದಿನ ಚುನಾವಣೆವರೆಗೆ ಪೂರ್ತಿ ಆಗುವುದಿಲ್ಲ. ಆದರೆ, ಬಿಜೆಪಿ ಸಂಕಲ್ಪ ಯಾತ್ರೆ ವಿಜಯಿ ಯಾತ್ರೆಯಾಗಿ ಪರಿವರ್ತನೆ ಹೊಂದುತ್ತಿದೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದೇಗೆಲ್ಲಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಬಿಜೆಪಿ ಒಳಜಗಳವೇ ನಮಗೆ ವರದಾನ: ದಿನೇಶ್ ಗುಂಡೂರಾವ್ ಸಂದರ್ಶನಬಿಜೆಪಿ ಒಳಜಗಳವೇ ನಮಗೆ ವರದಾನ: ದಿನೇಶ್ ಗುಂಡೂರಾವ್ ಸಂದರ್ಶನ

ಈ ಬದಲಾವಣೆ ಕೇವಲ ವಾಸು ಅವರ ಮನೆಯಲ್ಲಿ ಆಗಿಲ್ಲ. ಒಬ್ಬ ಕಾಂಗ್ರೆಸ್ ಶಾಸಕನ ಮನೆಯಲ್ಲಿ ಅವರ ಮಗ ಬಿಜೆಪಿ ಸೇರಿದಂತೆ, ಮುಂದಿನ ದಿನದಲ್ಲಿ ಸಿದ್ರಾಮಣ್ಣನ ಮಗನೂ, ಡಿಕೆಶಿ ಮನೆಯಿಂದಲೂ ಬಿಜೆಪಿಗೆ ಬರುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಡಬಲ್ ಎಂಜಿನ್ ಸರಕಾರ ಅಭಿವೃದ್ಧಿಯ ಕೆಲಸ ಮಾಡಲಿದೆ ಎಂದು ತಿಳಿಸಿದರು.

Siddaramaiahs Son Will Also Join BJP In The Next Day Says Nalin Kumar Kateel

ಬಿಜೆಪಿ ಕೆಲಸವನ್ನು ನೋಡುತ್ತದೆ. ಮನೆತನದ, ಕುಟುಂಬದ ಹಿನ್ನೆಲೆ ನೋಡುವುದಿಲ್ಲ. ಬಿಜೆಪಿ ಸಮಾಜದ ಜೊತೆಗಿನ ಒಡನಾಟ, ಸಿದ್ಧಾಂತದ ಮೇಲಿನ ನಂಬಿಕೆ, ಕೆಲಸಗಳನ್ನು ಗುರುತಿಸಿ ಅವಕಾಶ ಕೊಡುತ್ತದೆ. ಇದಕ್ಕೆ ಚಹಾ ಮಾರಾಟ ಮಾಡುತ್ತಿದ್ದ ಹುಡುಗ ಪ್ರಧಾನಿ ಆದುದು, ಭಿತ್ತಿಪತ್ರ ಹಚ್ಚುವ ಹುಡುಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದುದು ಉದಾಹರಣೆ ಎಂದರು.

ಪ್ರಧಾನಿಯವರು ತಮ್ಮ ತಾಯಿ ನಿಧನರಾದಾಗ ದೆಹಲಿಯಿಂದ ಸಾಮಾನ್ಯ ಕಾರ್ಯಕರ್ತರಂತೆ ಬಂದು ಕೇವಲ ಮೂರು ಗಂಟೆಗಳಲ್ಲೇ ತಮ್ಮ ಕರ್ತವ್ಯಕ್ಕೆ ಹಿಂತಿರುಗಿದರು. ನರೇಂದ್ರ ಮೋದಿಯವರ ಈ ಆದರ್ಶವನ್ನು ಬಿಜೆಪಿ ಸದಾ ಪಾಲಿಸುತ್ತಿದೆ ಎಂದು ತಿಳಿಸಿದರು. ಇಡೀ ದೇಶ ಮತ್ತು ರಾಜ್ಯದಲ್ಲಿ ಇಂದು ರಾಜಕೀಯ ಪರಿವರ್ತನೆ ಆಗುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದು, ರಾಜ್ಯದ ರಾಜಕೀಯ ತಿರುವನ್ನು ಪಡೆದಿದೆ. 5 ವರ್ಷಗಳ ಹಿಂದೆ ರಾಜ್ಯದ ಜನರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದರು. ಜನರು ಮತದಾನದ ಮೂಲಕ ಬಿಜೆಪಿಗೆ ಅತಿ ಹೆಚ್ಚಿನ ಗೌರವ ಕೊಟ್ಟಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕುಟುಂಬವಾದ ಮತ್ತು ಪರಿವಾರವಾದ ಒಂದಾಗಿ ಅನೈತಿಕವಾಗಿ ಸರಕಾರ ರಚಿಸಿದ್ದರು ಎಂದರು.

ಸರಕಾರ ರಚಿಸಿ ಒಂದು ವರ್ಷ ಕಾಲ ಆ ರಥ ಹೊರಡಲೇ ಇಲ್ಲ; ಇದರಿಂದ ಬೇಸತ್ತು ರಾಜ್ಯದಲ್ಲಿ ಮೊದಲ ಬಾರಿಗೆ 17 ಶಾಸಕರು ರಾಜೀನಾಮೆ ಕೊಟ್ಟು ವಿರೋಧ ಪಕ್ಷಕ್ಕೆ ಬೆಂಬಲ ಕೊಟ್ಟರು. ಬಳಿಕ ರಾಜಕೀಯ ಪರಿವರ್ತನೆ ಆಗಿದೆ. ಇವತ್ತು ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ. ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ, ಬಿಜೆಪಿಗೆ ಭವಿಷ್ಯತ್ತಿದೆ ಎಂದು ನಿರ್ಧರಿಸಿ ಹತ್ತಾರು ಜನರು ಬಿಜೆಪಿ ಸೇರಿದ್ದಾರೆ ಎಂದರು.

Siddaramaiahs Son Will Also Join BJP In The Next Day Says Nalin Kumar Kateel

ಸೋಮವಾರ ಕಾಂಗ್ರೆಸ್ ಯುವ ಮುಖಂಡ ಕವೀಶ್‍ಗೌಡ ವಾಸು, ಜೆಡಿಎಸ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಸೋಮಶೇಖರ್, ಕಾಂಗ್ರೆಸ್ ಮಾಜಿ ಪದಾಧಿಕಾರಿ ವೆಂಕಟೇಶ್, ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ದಿವಾಕರ್ ಗೌಡ, ಕಾಂಗ್ರೆಸ್ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ವಿ. ರಾಜಪ್ಪ, ಜೆಡಿಎಸ್ ಪರಾಜಿತ ಅಭ್ಯರ್ಥಿ ಗಿರೀಶ್ ನಾಶಿ, ಪುಣ್ಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ. ಪುಣ್ಯವತಿ ನಾಗರಾಜ್ ಅವರು ಬಿಜೆಪಿ ಸೇರಿದರು.

English summary
Karnataka Assembly Election 2023; BJP will have more than 150 seats in the next assembly elections says Nalin Kumar Kateel,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X