Siddaramaiah: ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರ ಪ್ರಸ್ತಾಪಿಸಿದ ಮೋದಿ: ತಿಗುಗೇಟು ಕೊಟ್ಟ ಸಿದ್ದರಾಮಯ್ಯ

ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಮಾಧ್ಯಮಗಳ ಜೊತೆಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.

Siddaramaiah Said Let PM Modi take action against corrupt people in BJP

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ ಎಂದರು. ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ , ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.

ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆಗೆ ಸಿಎಂ ಸಭೆ

ರಾಜ್ಯದಲ್ಲಿ ಎಷ್ಟು ಮಂದಿ ಮತ್ತು ಎಷ್ಟು ಕುಟುಂಬಗಳು ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿವೆ ಎನ್ನುವ ಮಾಹಿತಿ ನಿಮ್ಮಲ್ಲಿ ಇದೆಯೇ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳು ಪ್ರಶ್ನಿಸಿ, ಅವರೆಲ್ಲರಿಗೂ ಸರ್ಕಾರದ ಕಾರ್ಯಕ್ರಮಗಳು ಗೊತ್ತಿದೆಯಾ? ಎಲ್ಲರಿಗೂ ಸರ್ಕಾರದ ಸವಲತ್ತುಗಳು ತಲುಪುತ್ತಿದೆಯಾ ಎಂದು ಸಿ.ಎಂ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು 25988 ಮಂದಿ , 11314 ಕುಟುಂಬಗಳು ಮೀನುಗಾರಿಕೆಯನ್ನೇ ಅವಲಂಭಿಸಿ ಬದುಕಿದ್ದಾರೆ. ಎಲ್ಲರಿಗೂ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಮೂಡಿಸಿ ತಲುಪಿಸಲಾಗುತ್ತಿದೆ ಎಂದರು.

ಅನ್ನಭಾಗ್ಯ ಯೋಜನೆ ಎಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪುತ್ತಿದೆ, ಬಿಪಿಎಲ್ ಪಡಿತರ ಚೀಟಿಗಳು, ನಕಲಿ ಪಡಿತರ ಚೀಟಿಗಳ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ನೀವು ಜನರ ಬಳಿಗೆ ಹೋದಾಗ ಜನ ಅಕ್ಕಿ ಬೇಕು ಅಂತಿದ್ದಾರೋ, ಹಣ ಬೇಕು ಅಂತಿದ್ದಾರೋ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗೆ ಹಣ ಹೋಗುವುದನ್ನು ಹೆಚ್ಚಿನ ಜನರು ಬಯಸುತ್ತಿದ್ದಾರೆ. ಹೀಗಾಗಿ ಡಿಬಿಟಿ ಮೂಲಕ ಮುಂದುವರೆಸುವುದು ಉತ್ತಮ. ಹಾಗೆಯೇ ಡಿಬಿಟಿ ಯೋಜನೆಯಿಂದಾಗಿ ಕಾಳ ಸಂತೆಯನ್ನು ಅಕ್ಕಿ ಮಾರಿಕೊಳ್ಳುವ ಪ್ರಸಂಗಗಳಿಗೂ ಬ್ರೇಕ್ ಬೀಳುತ್ತದೆ. ಹಣ ಕೈಗೆ ಸಿಕ್ಕರೆ ಇತರೆ ಪದಾರ್ಥ, ಔಷಧಿಗೆ ಆ ಹಣವನ್ನು ಬಳಸಿಕೊಳ್ಳಬಹುದು ಎನ್ನುವ ಅಭಿಪ್ರಾಯ ಹೆಚ್ಚಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಬಡವರಿಗೆ, ನಿಜವದ ಅರ್ಹರಿಗೆ ಅನುಕೂಲ ಆಗುವ ಎನ್ನುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳು, ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದ್ದರಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನರ್ಹರು ಯೋಜನೆಯ ದುರುಪಯೋಗ ಪಡೆಯದಂತೆ, ಅರ್ಹರಿಗೆ ಅನ್ಯಾಯ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಖಡಕ್ಕಾಗಿ ಸೂಚನೆ ನೀಡಿದರು. ಅಂಗನವಾಡಿಗಳಿಗೆ ಸೂಕ್ತ ಗುಣಮಟ್ಟದ ಆಹಾರಗಳು ತಲುಪುತ್ತಿದೆಯೇ , ಆಹಾರದ ಗುಣಮಟ್ಟದ ಬಗ್ಗೆ ನಿಯಮಿತವಾಗಿ ಪರೀಕ್ಷೆ ಮಾಡಲಾಗುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+