"ಅಳೋದನ್ನು ನೋಡಿ ಸಾಕಾಗಿದೆ" ಎಚ್.ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಟಾಂಗ್!
Karnataka By-Election: ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆ ಕಾವು ಹೆಚ್ಚಾಗುತ್ತಿರುವ ಬೆನ್ನಲ್ಲೇ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ವಾಕ್ಸಮರ ಮುಂದುವರಿದಿದೆ. ಈ ಬಾರಿ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರನ್ನು ತೀಕ್ಷ್ಣವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಕುಮಾರಸ್ವಾಮಿಯನ್ನು ಕೆಣಕಿ ಅಣಕಿಸಿದ್ದಾರೆ.
ಕರ್ನಾಟಕದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭೆಗಳ ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಉಪ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಕಾಂಗ್ರೆಸ್ ಈಗ ಹಲವು ಸಂಕಷ್ಟಗಳಲ್ಲಿ ಸಿಲುಕಿದೆ. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ಹಗರಣ, ಸತೀಶ್ ಸೈಲ್ ಬಂಧನ ಹಾಗೂ ಬೆಂಗಳೂರು ಮಳೆ ಅನಾಹುತ ಸೇರಿದಂತೆ ಹಲವು ಸಮಸ್ಯೆಗಳು ಇವೆ. ಇದನ್ನು ವಿರೋಧ ಪಕ್ಷಗಳು ಅಸ್ತ್ರವನ್ನಾಗಿಸಿಕೊಂಡಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಚುನಾವಣೆಗೆ ಬಹಳ ತಯಾರಿ ಮಾಡಿದ್ದೇವೆ. ಮೂರು ಕ್ಷೇತ್ರದಲ್ಲಿ ಜನ ಆಶೀರ್ವಾದ ಮಾಡ್ತಾರೆ ಎಂದಿದ್ದಾರೆ. ಮುಂದುವರಿದು ಭಾವನಾತ್ಮಕವಾಗಿ ಮಾತನಾಡೋದು, ಅಳೋದನ್ನು ನೋಡಿ ಜನಕ್ಕೂ ಸಾಕಾಗಿದೆ. ಇದನ್ನೆಲ್ಲ ಜನ ನೋಡಲ್ಲ ಅಂತ ಪರೋಕ್ಷವಾಗಿ ಎಚ್.ಡಿ ಕುಮಾರಸ್ವಾಮಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಮೂಲಕ ಕುಮಾರಸ್ವಾಮಿ ಬಗ್ಗೆ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಇನ್ನು ಶಿಗ್ಗಾಂವಿಯಲ್ಲಿ ಬಂಡಾಯವಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ನಾವು ಪಠಾಣ್ ಅವರಿಗೆ ಟಿಕೆಟ್ ಕೊಟ್ಟೆದ್ದೇವೆ. ಒಂದೇ ಕ್ಷೇತ್ರದಲ್ಲಿ ಇಬ್ಬರಿಗೆ ಟಿಕೆಟ್ ಕೊಡಲು ಆಗಲ್ಲ ಎಂದಿದ್ದಾರೆ.
ಶಿಗ್ಗಾಂವಿ ಒಳ ಒಪ್ಪಂದದ ಬಗ್ಗೆ ಸಿ.ಎಂ ಹೇಳಿದ್ದೇನು: ಇನ್ನು ಶಿಗ್ಗಾಂವಿಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ಆರೋಪ ಇದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯವರು ಒಳ ಒಪ್ಪಂದ ಮಾಡಿಕೊಳ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ, ಬಿಜೆಪಿಗರ ಸೋಲಿಗೆ ಅವರೇ ಕಾರಣರಾಗ್ತಾರಾ ಅಂತ ಕೇಳಿದರು.

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಕಳೆದ ಬಾರಿ 68,000 ಸಾವಿರ ಮತ ಪಡೆದಿದ್ದರು. ಎದುರಾಳಿ ಇಲ್ಲದೇ ಮತ ತಗೊಂಡ್ರಾ, ಬಸವರಾಜ ಬೊಮ್ಮಾಯಿ ಗೆದ್ದಿರಬಹುದು. ಆದರೆ, ನಮ್ಮಅಭ್ಯರ್ಥಿ ಒಳ್ಳೆಯ ಫೈಟ್ ಕೊಟ್ಟಿದ್ದಾರೆ. ಲೋಕಸಭಾದಲ್ಲಿ ಯಾಕೆ ನಮಗೆ ಅಲ್ಲಿ ಲೀಡ್ ಬಂದಿದೆ. ಬೊಮ್ಮಾಯಿ ಕ್ಷೇತ್ರದಲ್ಲೇ ನಮಗೆ (ಕಾಂಗ್ರೆಸ್) ಹೆಚ್ಚು ಮತ ಬಂದಿದೆ. ಇದನ್ನು ನೋಡಿದರೆ ಸಾಕಲ್ವೇ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರ್ಮಥರು. ನಮಗೆ ಭರತ್ ಬೊಮ್ಮಾಯಿ ಸಮರ್ಥ ಎದುರಾಳಿ ಅಲ್ಲವೇ ಅಲ್ಲಾ. ಈ ಬಾರಿ ಕೂಡ ನಮಗೆ ಲೀಡ್ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಎಸ್ .ಟಿ. ಸೋಮಶೇಖರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಎಂ, ಅದರ ಬಗ್ಗೆ ಅವರನ್ನೇ ಕೇಳಿ ಎಂದಷ್ಟೇ ಹೇಳಿದ್ರು.












Click it and Unblock the Notifications