ಗಡಿ ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ: ಸಿದ್ದರಾಮಯ್ಯ
ಬೆಂಗಳೂರು,ಡಿಸೆಂಬರ್ 7: ಗಡಿ ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು @BJP4Karnataka ಪಕ್ಷದ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ. @CMofKarnataka @BSBommai
— Siddaramaiah (@siddaramaiah) December 8, 2022
1/4#ಗಡಿವಿವಾದ pic.twitter.com/aoCFl2epk3
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು.

ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಹೇಳಿದ್ದಾರೆ.












Click it and Unblock the Notifications