Siddaramaiah: ಮುಖ್ಯಮಂತ್ರಿ ಸಿಂಹಾಸನ ನಶ್ವರ: ವಿರೋಧಿಗಳಿಗೆ ಟಾಂಗ್‌ ಕೊಟ್ಟರೇ ಸಿದ್ದರಾಮಯ್ಯ?

ಬೆಂಗಳೂರು: ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಾಯಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ. ಶಿವಕುಮಾರ್ ಅವರು ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮೈಸೂರು ರಾಜಕಾರಣದಲ್ಲಿ ಹೈ ವೋಲ್ಟೇಜ್‌ ಸನ್ನಿವೇಶ ಸೃಷ್ಟಿಯಾಗಿದೆ. ಹೈಕಮಾಂಡ್ ತೀರ್ಮಾನದಂತೆ ಮುಖ್ಯಮಂತ್ರಿ ಪದವಿ ತ್ಯಾಗ ಮಾಡಿದ ಬಳಿಕ ಮೊದಲ ಬಾರಿಗೆ ತಮ್ಮ ತವರು ಗ್ರಾಮವಾದ ಸಿದ್ದರಾಮನಹುಂಡಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರಿಗೆ ಜನಸಾಗರವೇ ಹರಿದುಬಂದು ಭವ್ಯ ಸ್ವಾಗತ ಕೋರಿದೆ.

ಕುರ್ಚಿ ಹೋದರೂ ತಮಗೆ ಸಿಗುತ್ತಿರುವ ಈ ಅಭೂತಪೂರ್ವ ಪ್ರೀತಿ ಮತ್ತು ಅಭಿಮಾನವನ್ನು ಕಂಡು ಭಾವುಕರಾದ ಮಾಜಿ ಸಿಎಂ ಸಿದ್ದರಾಮಯ್ಯ, "ಮುಖ್ಯಮಂತ್ರಿ ಸಿಂಹಾಸನ ಎನ್ನುವುದು ನಶ್ವರ, ಆದರೆ ಜನತೆಯ ಹೃದಯ ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲು ಸಾಧ್ಯವಿಲ್ಲ" ಎಂದು ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.

Siddaramaiah

ಮುಖ್ಯಮಂತ್ರಿ ಪದವಿ ತ್ಯಾಗ ಮಾಡಿದ ಬಳಿಕ ಮೊದಲ ಬಾರಿಗೆ ತಮ್ಮ ಹುಟ್ಟೂರಾದ ಸಿದ್ದರಾಮನಹುಂಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಜನಸಾಗರವೇ ಹರಿದುಬಂದು ಭವ್ಯ ಸ್ವಾಗತ ಕೋರಿತು. ಜನರ ಈ ಅಭೂತಪೂರ್ವ ಪ್ರೀತಿ ಮತ್ತು ಅಭಿಮಾನವನ್ನು ಕಂಡು ಮೂಕವಿಸ್ಮಿತರಾದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಅಧಿಕಾರ ಸಂಪತ್ತಿಗಿಂತ ಜನರ ಪ್ರೀತಿಯೇ ನಿರಂತರ

"ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು. ಪದತ್ಯಾಗ ಮಾಡಿದ ದಿನದಿಂದ ನಾನು ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕದ ಭಾವನೆ ಮೂಡಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಅಧಿಕಾರ ಮತ್ತು ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಆದರೆ ಜನರ ಪ್ರೀತಿ ಮಾತ್ರ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ಇಷ್ಟೊಂದು ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನಗಿದೆ" ಎಂದು ಸಾರ್ವಜನಿಕ ಜೀವನದ ತಮ್ಮ ಗಳಿಕೆಯನ್ನು ಸ್ಮರಿಸಿದ್ದಾರೆ.

ಯಾರೂ ಕೆಳಗಿಳಿಸಲಾಗದ ಒಪ್ಪಂದ

ತಮ್ಮನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ರಾಜಕೀಯ ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್ ನೀಡುವಂತೆ ಮಾತನಾಡಿದ ಅವರು, "ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ (ಜನರೇ ದೇವರು) ನಡುವಿನ‌ ಶಾಶ್ವತ ಒಪ್ಪಂದ" ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ, ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು" ಎಂದು ಸಿದ್ದರಾಮಯ್ಯ ನಾಡಿನ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+